1 ULB ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Again the word of the LORD came to me, saying,
2 ULB <<ನರಪುತ್ರನೇ, ನೀನು ಈ ಪ್ರವಾದನೆಯನ್ನು ಹೇಳು, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಚಿಕೊಳ್ಳಿರಿ! ಅಯ್ಯೋ ದುರ್ದಿನವೇ! BSB BSB: “Son of man, prophesy and declare that this is what the Lord GOD says: Wail, ‘Alas for that day!’
3 ULB ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು. BSB BSB: For the day is near, the Day of the LORD is near. It will be a day of clouds, a time of doom for the nations.
4 ULB ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು. BSB BSB: A sword will come against Egypt, and there will be anguish in Cush when the slain fall in Egypt, its wealth is taken away, and its foundations are torn down.
5 ULB << <ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.>>> BSB BSB: Cush, Put, and Lud, and all the various peoples, as well as Libya and the men of the covenant land, will fall with Egypt by the sword.
6 ULB ಯೆಹೋವನು ಇಂತೆನ್ನುತ್ತಾನೆ, <<ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು>> ಇದು ಕರ್ತನಾದ ಯೆಹೋವನ ನುಡಿ. BSB BSB: For this is what the LORD says: The allies of Egypt will fall, and her proud strength will collapse. From Migdol to Syene they will fall by the sword within her, declares the Lord GOD.
7 ULB ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳು ಬಿದ್ದಿರುವವು. BSB BSB: They will be desolate among desolate lands, and their cities will lie among ruined cities.
8 ULB << <ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು> ಎಂದು ಅವರಿಗೆ ಗೊತ್ತಾಗುವುದು. BSB BSB: Then they will know that I am the LORD when I set fire to Egypt and all her helpers are shattered.
9 ULB <ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!>>> BSB BSB: On that day messengers will go out from Me in ships to frighten Cush out of complacency. Anguish will come upon them on the day of Egypt’s doom. For it is indeed coming.
10 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು. BSB BSB: This is what the Lord GOD says: I will put an end to the hordes of Egypt by the hand of Nebuchadnezzar king of Babylon.
11 ULB ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು. BSB BSB: He and his people with him, the most ruthless of the nations, will be brought in to destroy the land. They will draw their swords against Egypt and fill the land with the slain.
12 ULB ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.>> BSB BSB: I will make the streams dry up and sell the land to the wicked. By the hands of foreigners I will bring desolation upon the land and everything in it. I, the LORD, have spoken.
13 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು. BSB BSB: This is what the Lord GOD says: I will destroy the idols and put an end to the images in Memphis. There will no longer be a prince in Egypt, and I will instill fear in that land.
14 ULB ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ, BSB BSB: I will lay waste Pathros, set fire to Zoan, and execute judgment on Thebes.
15 ULB <<ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು. BSB BSB: I will pour out My wrath on Pelusium, the stronghold of Egypt, and cut off the crowds of Thebes.
16 ULB ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು. BSB BSB: I will set fire to Egypt, Pelusium will writhe in anguish, Thebes will be split open, and Memphis will face daily distress.
17 ULB <<ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು. BSB BSB: The young men of On and Pi-beseth will fall by the sword, and those cities will go into captivity.
18 ULB ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು. BSB BSB: The day will be darkened in Tahpanhes when I break the yoke of Egypt and her proud strength comes to an end. A cloud will cover her, and her daughters will go into captivity.
19 ULB ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು>> ಎಂದು ಅವರಿಗೆ ಗೊತ್ತಾಗುವುದು. BSB BSB: So I will execute judgment on Egypt, and they will know that I am the LORD.”
20 ULB ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: In the eleventh year, on the seventh day of the first month, the word of the LORD came to me, saying,
21 ULB <<ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.>> BSB BSB: “Son of man, I have broken the arm of Pharaoh king of Egypt. See, it has not been bound up for healing, or splinted for strength to hold the sword.
22 ULB ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು. BSB BSB: Therefore this is what the Lord GOD says: Behold, I am against Pharaoh king of Egypt. I will break his arms, both the strong one and the one already broken, and will make the sword fall from his hand.
23 ULB <<ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವೆನು. BSB BSB: I will disperse the Egyptians among the nations and scatter them throughout the lands.
24 ULB ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು. BSB BSB: I will strengthen the arms of Babylon’s king and place My sword in his hand, but I will break the arms of Pharaoh, who will groan before him like a mortally wounded man.
25 ULB ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು>> ಎಂದು ಎಲ್ಲರಿಗೂ ಗೊತ್ತಾಗುವುದು. BSB BSB: I will strengthen the arms of Babylon’s king, but Pharaoh’s arms will fall limp. Then they will know that I am the LORD, when I place My sword in the hand of Babylon’s king, and he wields it against the land of Egypt.
26 ULB <<ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.>> BSB BSB: I will disperse the Egyptians among the nations and scatter them throughout the lands. Then they will know that I am the LORD.”
Select verses for actions: Enter goes to them and Escape comes back.