1 ULB (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, <<ನರಪುತ್ರನೇ, ನೀನು ಐಗುಪ್ತದ BSB BSB: In the twelfth year, on the first day of the twelfth month, the word of the LORD came to me, saying,
2 ULB ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, <ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.>>> BSB BSB: “Son of man, take up a lament for Pharaoh king of Egypt and say to him: ‘You are like a lion among the nations; you are like a monster in the seas. You thrash about in your rivers, churning up the waters with your feet and muddying the streams.’
3 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಗುಂಪಾಗಿ ಕೂಡಿದ ಬಹು ಜನಾಂಗಗಳವರ ಮೇಲೆ ನಾನು ನನ್ನ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು. BSB BSB: This is what the Lord GOD says: ‘I will spread My net over you with a company of many peoples, and they will draw you up in My net.
4 ULB ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು; ನಿನ್ನನ್ನು ಬಯಲಿನಲ್ಲಿ ಎಸೆದು ಆಕಾಶದ ಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ, ಸಮಸ್ತ ಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು. BSB BSB: I will abandon you on the land and hurl you into the open field. I will cause all the birds of the air to settle upon you, and all the beasts of the earth to eat their fill of you.
5 ULB ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಹಾಕಿ, ಆ ನಿನ್ನ ಕಣಿವೆಗಳನ್ನು ಹೆಣಗಳ ರಾಶಿಯಿಂದ ತುಂಬಿಸುವೆನು. BSB BSB: I will put your flesh on the mountains and fill the valleys with your remains.
6 ULB ನಿನ್ನ ರಕ್ತಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು; ಹಳ್ಳಗಳು ನಿನ್ನ ರಕ್ತದಿಂದ ತುಂಬುವವು. BSB BSB: I will drench the land with the flow of your blood, all the way to the mountains—the ravines will be filled.
7 ULB ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು. BSB BSB: When I extinguish you, I will cover the heavens and darken their stars. I will cover the sun with a cloud, and the moon will not give its light.
8 ULB ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ, ನಿನ್ನ ದೇಶವನ್ನು ಕತ್ತಲು ಮಾಡುವೆನು>> ಇದು ಕರ್ತನಾದ ಯೆಹೋವನ ನುಡಿ. BSB BSB: All the shining lights in the heavens I will darken over you, and I will bring darkness upon your land,’ declares the Lord GOD.
9 ULB <<ನಾನು ನಿನ್ನ ನಾಶದ ಸುದ್ದಿಯನ್ನು, ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ, ಅವರ ಮನಸ್ಸಿನಲ್ಲಿ ಗಲಿಬಿಲಿಯನ್ನು ಎಬ್ಬಿಸುವೆನು. BSB BSB: ‘I will trouble the hearts of many peoples, when I bring about your destruction among the nations, in countries you do not know.
10 ULB ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.>> BSB BSB: I will cause many peoples to be appalled over you, and their kings will shudder in horror because of you when I brandish My sword before them. On the day of your downfall each of them will tremble every moment for his life.’
11 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು. BSB BSB: For this is what the Lord GOD says: ‘The sword of the king of Babylon will come against you!
12 ULB ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು. ಅವರು ಐಗುಪ್ತದ ಮಹತ್ತನ್ನು ನಾಶ ಮಾಡುವರು. ಅದರ ಜನ ಸಮೂಹವೆಲ್ಲಾ ನಿರ್ನಾಮವಾಗುವುದು. BSB BSB: I will make your hordes fall by the swords of the mighty, the most ruthless of all nations. They will ravage the pride of Egypt and all her multitudes will be destroyed.
13 ULB ನಾನು ಬಹು ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಇನ್ನು ಮೇಲೆ ಯಾವ ಮನುಷ್ಯನ ಕಾಲಾಗಲಿ, ಯಾವ ಪಶುವಿನ ಗೊರಸಾಗಲಿ ನೀರಿನಲ್ಲಿ ಹೆಜ್ಜೆಯಿಡುವುದಿಲ್ಲ. BSB BSB: I will slaughter all her cattle beside the abundant waters. No human foot will muddy them again, and no cattle hooves will disturb them.
14 ULB ಆಗ ಆ ನೀರು ತಿಳಿಯಾಗುವಂತೆಯೂ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆಯೂ ಮಾಡುವೆನು>> ಇದು ಕರ್ತನಾದ ಯೆಹೋವನ ನುಡಿ. BSB BSB: Then I will let her waters settle and will make her rivers flow like oil,’ declares the Lord GOD.
15 ULB <<ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ, ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು. BSB BSB: ‘When I make the land of Egypt a desolation and empty it of all that filled it, when I strike down all who live there, then they will know that I am the LORD.’
16 ULB ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ, ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ>> ಇದು ಕರ್ತನಾದ ಯೆಹೋವನ ನುಡಿ. BSB BSB: This is the lament they will chant for her; the daughters of the nations will chant it. Over Egypt and all her multitudes they will chant it, declares the Lord GOD.”
17 ULB (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: In the twelfth year, on the fifteenth day of the month, the word of the LORD came to me, saying,
18 ULB <<ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು. BSB BSB: “Son of man, wail for the multitudes of Egypt, and consign her and the daughters of the mighty nations to the depths of the earth with those who descend to the Pit:
19 ULB ಐಗುಪ್ತ್ಯವೇ, ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಹೀನರ ಸಂಗಡ ಮಲಗು. BSB BSB: Whom do you surpass in beauty? Go down and be placed with the uncircumcised!
20 ULB ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಐಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ. BSB BSB: They will fall among those slain by the sword. The sword is appointed! Let them drag her away along with all her multitudes.
21 ULB ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, <ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ> ಅಂದುಕೊಳ್ಳುವರು. BSB BSB: Mighty chiefs will speak from the midst of Sheol about Egypt and her allies: ‘They have come down and lie with the uncircumcised, with those slain by the sword.’
22 ULB ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು. BSB BSB: Assyria is there with her whole company; her graves are all around her. All of them are slain, fallen by the sword.
23 ULB ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಸಂಹೃತರಾದವರು, ಖಡ್ಗದಿಂದ ಹತರಾದವರು ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಹತರಾದವರು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದಾರೆ. BSB BSB: Her graves are set in the depths of the Pit, and her company is all around her grave. All of them are slain, fallen by the sword—those who once spread terror in the land of the living.
24 ULB ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. BSB BSB: Elam is there with all her multitudes around her grave. All of them are slain, fallen by the sword—those who went down uncircumcised to the earth below, who once spread their terror in the land of the living. They bear their disgrace with those who descend to the Pit.
25 ULB ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ. BSB BSB: Among the slain they prepare a resting place for Elam with all her hordes, with her graves all around her. All of them are uncircumcised, slain by the sword, although their terror was once spread in the land of the living. They bear their disgrace with those who descend to the Pit. They are placed among the slain.
26 ULB ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ. BSB BSB: Meshech and Tubal are there with all their multitudes, with their graves all around them. All of them are uncircumcised, slain by the sword, because they spread their terror in the land of the living.
27 ULB ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ? BSB BSB: They do not lie down with the fallen warriors of old, who went down to Sheol with their weapons of war, whose swords were placed under their heads, whose shields rested on their bones, although the terror of the mighty was once in the land of the living.
28 ULB ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ! BSB BSB: But you too will be shattered and lie down among the uncircumcised, with those slain by the sword.
29 ULB ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ. BSB BSB: Edom is there, and all her kings and princes, who despite their might are laid among those slain by the sword. They lie down with the uncircumcised, with those who descend to the Pit.
30 ULB <<ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. BSB BSB: All the leaders of the north and all the Sidonians are there; they went down in disgrace with the slain, despite the terror of their might. They lie uncircumcised with those slain by the sword and bear their shame with those who descend to the Pit.
31 ULB ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು>> ಇದು ಕರ್ತನಾದ ಯೆಹೋವನ ನುಡಿ. BSB BSB: Pharaoh will see them and be comforted over all his multitude—Pharaoh and all his army, slain by the sword, declares the Lord GOD.
32 ULB <<ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು>> ಎಂಬುದು ಕರ್ತನಾದ ಯೆಹೋವನ ನುಡಿ. BSB BSB: For I will spread My terror in the land of the living, so that Pharaoh and all his multitude will be laid to rest among the uncircumcised, with those slain by the sword, declares the Lord GOD.”
Select verses for actions: Enter goes to them and Escape comes back.