1 ULB ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Moreover, the word of the LORD came to me, saying,
2 ULB <<ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ, BSB BSB: “Son of man, set your face against Mount Seir and prophesy against it,
3 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು. BSB BSB: and declare that this is what the Lord GOD says: Behold, I am against you, O Mount Seir. I will stretch out My hand against you and make you a desolate waste.
4 ULB ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ. BSB BSB: I will turn your cities into ruins, and you will become a desolation. Then you will know that I am the LORD.
5 ULB << <ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ. BSB BSB: Because you harbored an ancient hatred and delivered the Israelites over to the sword in the time of their disaster at the final stage of their punishment,
6 ULB ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು>>> ಇದು ಕರ್ತನಾದ ಯೆಹೋವನ ನುಡಿ. BSB BSB: therefore as surely as I live, declares the Lord GOD, I will give you over to bloodshed and it will pursue you. Since you did not hate bloodshed, it will pursue you.
7 ULB <<ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು. BSB BSB: I will make Mount Seir a desolate waste and will cut off from it those who come and go.
8 ULB ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು. BSB BSB: I will fill its mountains with the slain; those killed by the sword will fall on your hills, in your valleys, and in all your ravines.
9 ULB ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.>> BSB BSB: I will make you a perpetual desolation, and your cities will not be inhabited. Then you will know that I am the LORD.
10 ULB ನೀನು, <<ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು>> ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ, BSB BSB: Because you have said, ‘These two nations and countries will be ours, and we will possess them,’ even though the LORD was there,
11 ULB <<ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ. BSB BSB: therefore as surely as I live, declares the Lord GOD, I will treat you according to the anger and jealousy you showed in your hatred against them, and I will make Myself known among them when I judge you.
12 ULB ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು. BSB BSB: Then you will know that I, the LORD, have heard every contemptuous word you uttered against the mountains of Israel when you said, ‘They are desolate; they are given to us to devour!’
13 ULB ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.>> BSB BSB: You boasted against Me with your mouth and multiplied your words against Me. I heard it Myself!
14 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು. BSB BSB: This is what the Lord GOD says: While the whole earth rejoices, I will make you desolate.
15 ULB ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.>> BSB BSB: As you rejoiced when the inheritance of the house of Israel became desolate, so will I do to you. You will become a desolation, O Mount Seir, and so will all of Edom. Then they will know that I am the LORD.
Select verses for actions: Enter goes to them and Escape comes back.