1 ULB <<ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, <ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ. BSB BSB: “And you, son of man, prophesy to the mountains of Israel and say: O mountains of Israel, hear the word of the LORD.
2 ULB ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, <<ಆಹಾ!>> ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ>>> ಎಂದು ಹೇಳುವರು. BSB BSB: This is what the Lord GOD says: Because the enemy has said of you, ‘Aha! The ancient heights have become our possession,’
3 ULB ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು,<< <ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ. BSB BSB: therefore prophesy and declare that this is what the Lord GOD says: Because they have made you desolate and have trampled you on every side, so that you became a possession of the rest of the nations and were taken up in slander by the lips of their talkers,
4 ULB ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ, BSB BSB: therefore, O mountains of Israel, hear the word of the Lord GOD. This is what the Lord GOD says to the mountains and hills, to the ravines and valleys, to the desolate ruins and abandoned cities, which have become a spoil and a mockery to the rest of the nations around you.
5 ULB ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.> BSB BSB: Therefore this is what the Lord GOD says: Surely in My burning zeal I have spoken against the rest of the nations, and against all Edom, who took My land as their own possession with wholehearted joy and utter contempt, so that its pastureland became plunder.
6 ULB ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!> BSB BSB: Therefore, prophesy concerning the land of Israel and tell the mountains and hills, the ravines and valleys, that this is what the Lord GOD says: Behold, I have spoken in My burning zeal because you have endured the reproach of the nations.
7 ULB ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ. BSB BSB: Therefore this is what the Lord GOD says: I have sworn with an uplifted hand that surely the nations around you will endure reproach of their own.
8 ULB ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ. BSB BSB: But you, O mountains of Israel, will produce branches and bear fruit for My people Israel, for they will soon come home.
9 ULB ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ. BSB BSB: For behold, I am on your side; I will turn toward you, and you will be tilled and sown.
10 ULB ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು. BSB BSB: I will multiply the people upon you—the house of Israel in its entirety. The cities will be inhabited and the ruins rebuilt.
11 ULB ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು. BSB BSB: I will fill you with people and animals, and they will multiply and be fruitful. I will make you as inhabited as you once were, and I will make you prosper more than before. Then you will know that I am the LORD.
12 ULB ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.>>> BSB BSB: Yes, I will cause My people Israel to walk upon you; they will possess you, and you will be their inheritance, and you will no longer deprive them of their children.
13 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ>> ಎಂದು ನಿನ್ನನ್ನು ಬಯ್ಯುತ್ತಾರೆ. BSB BSB: For this is what the Lord GOD says: Because people say to you, ‘You devour men and deprive your nation of its children,’
14 ULB <<ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ. BSB BSB: therefore you will no longer devour men or deprive your nation of its children, declares the Lord GOD.
15 ULB ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ>> ಇದು ಕರ್ತನಾದ ಯೆಹೋವನ ನುಡಿ. BSB BSB: I will no longer allow the taunts of the nations to be heard against you, and you will no longer endure the reproach of the peoples or cause your nation to stumble, declares the Lord GOD.”
16 ULB ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Again the word of the LORD came to me, saying,
17 ULB <<ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು. BSB BSB: “Son of man, when the people of Israel lived in their land, they defiled it by their own ways and deeds. Their behavior before Me was like the uncleanness of a woman’s impurity.
18 ULB ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು. BSB BSB: So I poured out My wrath upon them because of the blood they had shed on the land, and because they had defiled it with their idols.
19 ULB ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು. BSB BSB: I dispersed them among the nations, and they were scattered throughout the lands. I judged them according to their ways and deeds.
20 ULB ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, <ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ> ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು. BSB BSB: And wherever they went among the nations, they profaned My holy name, because it was said of them, ‘These are the people of the LORD, yet they had to leave His land.’
21 ULB ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.>> BSB BSB: But I had concern for My holy name, which the house of Israel had profaned among the nations to which they had gone.
22 ULB ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ. BSB BSB: Therefore tell the house of Israel that this is what the Lord GOD says: It is not for your sake that I will act, O house of Israel, but for My holy name, which you profaned among the nations to which you went.
23 ULB ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು>> ಇದು ಕರ್ತನಾದ ಯೆಹೋವನ ನುಡಿ. BSB BSB: I will show the holiness of My great name, which has been profaned among the nations—the name you have profaned among them. Then the nations will know that I am the LORD, declares the Lord GOD, when I show My holiness in you before their eyes.
24 ULB <<ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು. BSB BSB: For I will take you from among the nations and gather you out of all the countries, and I will bring you back into your own land.
25 ULB ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು. BSB BSB: I will also sprinkle clean water on you, and you will be clean. I will cleanse you from all your impurities and all your idols.
26 ULB ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. BSB BSB: I will give you a new heart and put a new spirit within you; I will remove your heart of stone and give you a heart of flesh.
27 ULB ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ. BSB BSB: And I will put My Spirit within you and cause you to walk in My statutes and to carefully observe My ordinances.
28 ULB ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು. BSB BSB: Then you will live in the land that I gave your forefathers; you will be My people, and I will be your God.
29 ULB ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ. BSB BSB: I will save you from all your uncleanness. I will summon the grain and make it plentiful, and I will not bring famine upon you.
30 ULB ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು. BSB BSB: I will also make the fruit of the trees and the crops of the field plentiful, so that you will no longer bear reproach among the nations on account of famine.
31 ULB ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.>> BSB BSB: Then you will remember your evil ways and wicked deeds, and you will loathe yourselves for your iniquities and abominations.
32 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.>> BSB BSB: It is not for your sake that I will act, declares the Lord GOD—let it be known to you. Be ashamed and disgraced for your ways, O house of Israel!
33 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು. BSB BSB: This is what the Lord GOD says: On the day I cleanse you from all your iniquities, I will cause the cities to be resettled and the ruins to be rebuilt.
34 ULB ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು. BSB BSB: The desolate land will be cultivated instead of lying desolate in the sight of all who pass through.
35 ULB ಆಗ ಜನರು, <ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ> ಎಂದು ಹೇಳುವರು. BSB BSB: Then they will say, ‘This land that was desolate has become like the garden of Eden. The cities that were once ruined, desolate, and destroyed are now fortified and inhabited.’
36 ULB ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.>> BSB BSB: Then the nations around you that remain will know that I, the LORD, have rebuilt what was destroyed, and I have replanted what was desolate. I, the LORD, have spoken, and I will do it.
37 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು. BSB BSB: This is what the Lord GOD says: Once again I will hear the plea of the house of Israel and do for them this: I will multiply their people like a flock.
38 ULB ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.>> BSB BSB: Like the numerous flocks for sacrifices at Jerusalem during her appointed feasts, so the ruined cities will be filled with flocks of people. Then they will know that I am the LORD.”
Select verses for actions: Enter goes to them and Escape comes back.