1 ULB ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು. BSB BSB: The hand of the LORD was upon me, and He brought me out by His Spirit and set me down in the middle of the valley, and it was full of bones.
2 ULB ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. BSB BSB: He led me all around among them, and I saw a great many bones on the floor of the valley, and indeed, they were very dry.
3 ULB ಆತನು ನನಗೆ <<ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?>> ಎಂದು ಕೇಳಲು ನಾನು, <<ಕರ್ತನಾದ ಯೆಹೋವನೇ, ನೀನೇ ಬಲ್ಲೆ>> ಎಂದು ಉತ್ತರಕೊಟ್ಟೆನು. BSB BSB: Then He asked me, “Son of man, can these bones come to life?” “O Lord GOD,” I replied, “only You know.”
4 ULB ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, <<ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, <ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ>. BSB BSB: And He said to me, “Prophesy concerning these bones and tell them, ‘Dry bones, hear the word of the LORD!
5 ULB ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, <ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ. BSB BSB: This is what the Lord GOD says to these bones: I will cause breath to enter you, and you will come to life.
6 ULB ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.>>> BSB BSB: I will attach tendons to you and make flesh grow upon you and cover you with skin. I will put breath within you so that you will come to life. Then you will know that I am the LORD.’”
7 ULB ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತ್ತಿತ್ತು. ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಜೋಡಣೆಯಾದವು. BSB BSB: So I prophesied as I had been commanded. And as I prophesied, there was suddenly a noise, a rattling, and the bones came together, bone to bone.
8 ULB ನಾನು ನೋಡುತ್ತಿರುವಾಗ ಏನಾಶ್ಚರ್ಯ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು, ಶ್ವಾಸ ಮಾತ್ರ ಇರಲಿಲ್ಲ. BSB BSB: As I looked on, tendons appeared on them, flesh grew, and skin covered them; but there was no breath in them.
9 ULB ಆಗ ಆತನು ನನಗೆ, <<ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, <ಓ ಶ್ವಾಸವೇ,> ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.>>> BSB BSB: Then He said to me, “Prophesy to the breath; prophesy, son of man, and tell the breath that this is what the Lord GOD says: Come from the four winds, O breath, and breathe into these slain, so that they may live!”
10 ULB ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಊದಿದೆ. ಇಗೋ, ಉಸಿರು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು. BSB BSB: So I prophesied as He had commanded me, and the breath entered them, and they came to life and stood on their feet—a vast army.
11 ULB ಆಮೇಲೆ ಆತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, <ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು>>> ಅಂದುಕೊಳ್ಳುತ್ತಿದ್ದಾರೆ. BSB BSB: Then He said to me, “Son of man, these bones are the whole house of Israel. Look, they are saying, ‘Our bones are dried up, and our hope has perished; we are cut off.’
13 ULB ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು. BSB BSB: Then you, My people, will know that I am the LORD, when I open your graves and bring you up from them.
14 ULB ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ>> ಇದು ಯೆಹೋವನ ಸಂಕಲ್ಪ. BSB BSB: I will put My Spirit in you and you will live, and I will settle you in your own land. Then you will know that I, the LORD, have spoken, and I will do it, declares the LORD.’”
15 ULB ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, BSB BSB: Again the word of the LORD came to me, saying,
16 ULB <<ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ. BSB BSB: “And you, son of man, take a single stick and write on it: ‘Belonging to Judah and to the Israelites associated with him.’ Then take another stick and write on it: ‘Belonging to Joseph—the stick of Ephraim—and to all the house of Israel associated with him.’
17 ULB ಆ ಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ. BSB BSB: Then join them together into one stick, so that they become one in your hand.
18 ULB <<ನಿನ್ನ ಜನರು, <ಇದೇನು? ನಮಗೆ ತಿಳಿಸುವುದಿಲ್ಲವೋ> ಎಂದು ನಿನ್ನನ್ನು ಕೇಳುವಾಗ ನೀನು ಅವರಿಗೆ, BSB BSB: When your people ask you, ‘Won’t you explain to us what you mean by these?’
19 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು. BSB BSB: you are to tell them that this is what the Lord GOD says: ‘I will take the stick of Joseph, which is in the hand of Ephraim, and the tribes of Israel associated with him, and I will put them together with the stick of Judah. I will make them into a single stick, and they will become one in My hand.’
20 ULB ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.>>> BSB BSB: When the sticks on which you write are in your hand and in full view of the people,
21 ULB ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು. BSB BSB: you are to tell them that this is what the Lord GOD says: ‘I will take the Israelites out of the nations to which they have gone, and I will gather them from all around and bring them into their own land.
22 ULB ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ. BSB BSB: I will make them one nation in the land, on the mountains of Israel, and one king will rule over all of them. Then they will no longer be two nations and will never again be divided into two kingdoms.
23 ULB ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. BSB BSB: They will no longer defile themselves with their idols or detestable images, or with any of their transgressions. I will save them from all their apostasies by which they sinned, and I will cleanse them. Then they will be My people, and I will be their God.
24 ULB <<ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು. BSB BSB: My servant David will be king over them, and there will be one shepherd for all of them. They will follow My ordinances and keep and observe My statutes.
25 ULB ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು. BSB BSB: They will live in the land that I gave to My servant Jacob, where your fathers lived. They will live there forever with their children and grandchildren, and My servant David will be their prince forever.
26 ULB ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು. BSB BSB: And I will make a covenant of peace with them; it will be an everlasting covenant. I will establish them and multiply them, and I will set My sanctuary among them forever.
27 ULB ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು. BSB BSB: My dwelling place will be with them; I will be their God, and they will be My people.
28 ULB ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.>> BSB BSB: Then the nations will know that I the LORD sanctify Israel, when My sanctuary is among them forever.’”
Select verses for actions: Enter goes to them and Escape comes back.