1 ULB ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು. BSB BSB: In the twenty-fifth year of our exile, at the beginning of the year, on the tenth day of the month—in the fourteenth year after Jerusalem had been struck down—on that very day the hand of the LORD was upon me, and He took me there.
2 ULB ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು. BSB BSB: In visions of God He took me to the land of Israel and set me on a very high mountain, on whose southern slope was a structure that resembled a city.
3 ULB ಆಮೇಲೆ ಆತನು ನನ್ನನ್ನು ಅಲ್ಲಿಗೆ ತಂದಾಗ, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ನೂಲನ್ನು, ಅಳತೆಯ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲೇ ನಿಂತುಕೊಂಡಿದ್ದನು. BSB BSB: So He took me there, and I saw a man whose appearance was like bronze. He was standing in the gateway with a linen cord and a measuring rod in his hand.
4 ULB ಆ ಪುರುಷನು ನನಗೆ, <<ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು>> ಎಂದು ಹೇಳಿದನು. BSB BSB: “Son of man,” he said to me, “look with your eyes, hear with your ears, and pay attention to everything I am going to show you, for that is why you have been brought here. Report to the house of Israel everything you see.”
5 ULB ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು. BSB BSB: And I saw a wall surrounding the temple area. Now the length of the measuring rod in the man’s hand was six long cubits (each measuring a cubit and a handbreadth), and he measured the wall to be one rod thick and one rod high.
6 ULB ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು. BSB BSB: Then he came to the gate facing east and climbed its steps. He measured the threshold of the gate to be one rod deep.
7 ULB ಅಲ್ಲಿ ಗೋಡೆಯಲ್ಲಿದ್ದ ಒಂದೊಂದು ಕೋಣೆಯು ಒಂದು ಕೋಲು ಉದ್ದವಾಗಿಯೂ, ಒಂದು ಕೋಲು ಅಗಲವಾಗಿಯೂ ಇತ್ತು. ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಆ ಗೋಡೆಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. BSB BSB: Each gate chamber was one rod long and one rod wide, and there were five cubits between the gate chambers. The inner threshold of the gate by the portico facing inward was one rod deep.
8 ULB ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು. ಅದು ಒಂದು ಕೋಲು ಉದ್ದವಾಗಿತ್ತು. BSB BSB: Then he measured the portico of the gateway inside;
9 ULB ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯನ್ನು ಎಂಟು ಮೊಳವೆಂದೂ; ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು. ಹೆಬ್ಬಾಗಿಲಿನ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು. BSB BSB: it was eight cubits deep, and its jambs were two cubits thick. And the portico of the gateway faced the temple.
10 ULB ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಗೋಡೆಕೋಣೆಗಳಿದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡು ಪಕ್ಕಗಳಲ್ಲಿನ ಕಂಬಗಳೂ ಒಂದೇ ಅಳತೆಯಾಗಿದ್ದವು. BSB BSB: There were three gate chambers on each side of the east gate, each with the same measurements, and the gateposts on either side also had the same measurements.
11 ULB ಅನಂತರ ಅವನು ಹೆಬ್ಬಾಗಿಲ ದ್ವಾರದ ಅಗಲ ಹತ್ತು ಮೊಳವೆಂದೂ ಉದ್ದ ಹದಿಮೂರು ಮೊಳವೆಂದೂ ಅಳೆದನು. BSB BSB: And he measured the width of the gateway entrance to be ten cubits, and its length was thirteen cubits.
12 ULB ಎರಡು ಪಕ್ಕಗಳಲ್ಲಿನ ಗೋಡೆಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೆಕೋಣೆಗಳ ಅಗಲವು ಮೂರು ಮೊಳ. BSB BSB: In front of each gate chamber was a wall one cubit high, and the gate chambers were six cubits square.
13 ULB ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆಯಿಂದ ಇನ್ನೊಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆ ಅಂದರೆ ಒಂದು ಕೋಣೆಯ ಬಾಗಿಲಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಇಪ್ಪತ್ತೈದು ಮೊಳವಾಗಿತ್ತು. BSB BSB: Then he measured the gateway from the roof of one gate chamber to the roof of the opposite one; the distance was twenty-five cubits from doorway to doorway.
14 ULB ಅಂಗಳದಲ್ಲಿನ ಕಂಬಗಳನ್ನು ಅಳತೆ ಮಾಡಲು ಅರವತ್ತು ಮೊಳವಿದ್ದವು; ಅದನ್ನು ಹೆಬ್ಬಾಗಿಲಿನ ಸುತ್ತುಮುತ್ತಲಿರುವ ಕಂಬದವರೆಗೂ ಅಳೆದನು. BSB BSB: Next he measured the gateposts to be sixty cubits high. The gateway extended around to the gatepost of the courtyard.
15 ULB ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳ ಉದ್ದವಾಗಿತ್ತು. BSB BSB: And the distance from the entrance of the gateway to the far end of its inner portico was fifty cubits.
16 ULB ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು. BSB BSB: The gate chambers and their side pillars had beveled windows all around the inside of the gateway. The porticos also had windows all around on the inside. Each side pillar was decorated with palm trees.
17 ULB ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು. BSB BSB: Then he brought me into the outer court, and there were chambers and a pavement laid out all around the court. Thirty chambers faced the pavement,
18 ULB ಆ ಕೆಳಗಣ ಕಲ್ಲುಹಾಸಿದ ನೆಲವೂ ಹೆಬ್ಬಾಗಿಲುಗಳ ಎರಡು ಪಕ್ಕಗಳವರೆಗೂ ಹಾಸಲ್ಪಟಿತ್ತು. ಅದರ ಅಗಲವೂ ಬಾಗಿಲುಗಳ ಉದ್ದಕ್ಕೆ ಸಮನಾಗಿತ್ತು. ಇದು ಕೆಳಗಿನ ಕಲ್ಲುಹಾಸಿದ ನೆಲವಾಗಿತ್ತು. BSB BSB: which flanked the gateways and corresponded to the length of the gates; this was the lower pavement.
19 ULB ಅವನು ಪೂರ್ವಕ್ಕೂ, ಉತ್ತರಕ್ಕೂ ಕೆಳಗಣ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಅಂಗಳದ ಹೊರಗಡೆಯ ತನಕ ಅಳೆಯಲು, ಅದು ನೂರು ಮೊಳವಿತ್ತು. BSB BSB: Then he measured the distance from the front of the lower gateway to the outside of the inner court; it was a hundred cubits on the east side as well as on the north.
20 ULB ಇದಲ್ಲದೆ ಹೊರಗಣ ಅಂಗಳದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಮತ್ತು ಉದ್ದವನ್ನೂ ಅಳೆದನು. BSB BSB: He also measured the length and width of the gateway of the outer court facing north.
21 ULB ಅದರೊಳಗೆ ಎರಡು ಕಡೆ ಮೂರು ಗೋಡೆಕೋಣೆಗಳಿದ್ದವು; ಅಲ್ಲಿನ ಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದವೂ ಐವತ್ತು ಮೊಳ, ಅಗಲವೂ ಇಪ್ಪತ್ತೈದು ಮೊಳವಾಗಿತ್ತು. BSB BSB: Its three gate chambers on each side, its side pillars, and its portico all had the same measurements as the first gate: fifty cubits long and twenty-five cubits wide.
22 ULB ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು. BSB BSB: Its windows, portico, and palm trees had the same measurements as those of the gate facing east. Seven steps led up to it, with its portico opposite them.
23 ULB ಹೊರಗಣ ಅಂಗಳದ ಉತ್ತರ ಮತ್ತು ಪೂರ್ವಕ್ಕಿರುವ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಹೆಬ್ಬಾಗಿಲುಗಳು ಇದ್ದವು; ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ನೂರು ಮೊಳ ಅಳತೆ ಮಾಡಿದನು. BSB BSB: There was a gate to the inner court facing the north gate, just as there was on the east. He measured the distance from gateway to gateway to be a hundred cubits.
24 ULB ಆ ಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆ ತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು ಇತ್ತು; ಅವನು ಅಲ್ಲಿನ ಕಂಬಗಳನ್ನೂ, ಕೈಸಾಲೆಯನ್ನೂ ಈ ಅಳತೆಯ ಪ್ರಕಾರವೇ ಅಳೆದನು. BSB BSB: Then he led me to the south side, and I saw a gateway facing south. He measured its side pillars and portico, and they had the same measurements as the others.
25 ULB ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಕಿಟಕಿಗಳೇ ಇದ್ದವು; ಅದರ ಉದ್ದವೂ ಐವತ್ತು ಮೊಳ ಮತ್ತು ಅಗಲವೂ ಇಪ್ಪತ್ತೈದು ಮೊಳವಾಗಿತ್ತು. BSB BSB: Both the gateway and its portico had windows all around, like the other windows. It was fifty cubits long and twenty-five cubits wide.
26 ULB ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಿಲುಗಳಿದ್ದವು. ಕೈಸಾಲೆಯ ಎರಡು ಪಕ್ಕದ ಕಂಬಗಳಲ್ಲಿ ಖರ್ಜೂರ ಮರಗಳ ಚಿತ್ರಗಳಿದ್ದವು. BSB BSB: Seven steps led up to it, and its portico was opposite them; it had palm trees on its side pillars, one on each side.
27 ULB ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಹೆಬ್ಬಾಗಿಲಿತ್ತು; ದಕ್ಷಿಣದ ಒಂದು ಬಾಗಿಲಿಂದ ಮತ್ತೊಂದು ಬಾಗಿಲಿಗೆ ನೂರು ಮೊಳ ಅಳೆದನು. BSB BSB: The inner court also had a gate facing south, and he measured the distance from gateway to gateway toward the south to be a hundred cubits.
28 ULB ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳೆಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು. BSB BSB: Next he brought me into the inner court through the south gate, and he measured the south gate; it had the same measurements as the others.
29 ULB ಅದರಲ್ಲಿಯೂ, ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು. BSB BSB: Its gate chambers, side pillars, and portico had the same measurements as the others. Both the gateway and its portico had windows all around; it was fifty cubits long and twenty-five cubits wide.
30 ULB ಸುತ್ತುಮುತ್ತಲಿನ ಕೈಸಾಲೆಗಳ ಉದ್ದ ಇಪ್ಪತ್ತೈದು ಮೊಳ ಮತ್ತು ಅಗಲ ಐದು ಮೊಳವಾಗಿತ್ತು. BSB BSB: (The porticoes around the inner court were twenty-five cubits long and five cubits deep.)
31 ULB ಆ ಹೆಬ್ಬಾಗಿಲ ಕೈಸಾಲೆಯು ಹೊರಗಣ ಅಂಗಳಕ್ಕೆ ಅಭಿಮುಖವಾಗಿತ್ತು. ಅದರ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು. ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು. BSB BSB: Its portico faced the outer court, and its side pillars were decorated with palm trees. Eight steps led up to it.
32 ULB ಅವನು ನನ್ನನ್ನು ಒಳಗಣ ಅಂಗಳದ ಪೂರ್ವಕ್ಕೆ ಕರೆದು ತಂದು, ಅಲ್ಲಿನ ಹೆಬ್ಬಾಗಿಲನ್ನೂ ಅಳೆಯಲು, ಅದರ ಅಳತೆಗಳೆಲ್ಲಾ ಒಂದೇ ಆಗಿ ಕಂಡುಬಂದವು. BSB BSB: And he brought me to the inner court on the east side, and he measured the gateway; it had the same measurements as the others.
33 ULB ಅದರಲ್ಲಿಯೂ ಮತ್ತು ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು. BSB BSB: Its gate chambers, side pillars, and portico had the same measurements as the others. Both the gateway and its portico had windows all around. It was fifty cubits long and twenty-five cubits wide.
34 ULB ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು. BSB BSB: Its portico faced the outer court, and its side pillars were decorated with palm trees on each side. Eight steps led up to it.
35 ULB ಆ ಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿಗೆ ಕರೆದು ತಂದನು. ಅದರ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಆ ಅಳತೆಯ ಪ್ರಕಾರವೇ ಅಳೆದನು. BSB BSB: Then he brought me to the north gate and measured it. It had the same measurements as the others,
36 ULB ಅಲ್ಲಿನ ಕೋಣೆಗಳ, ಕಂಬಗಳ, ಕೈಸಾಲೆಗಳ ಎಲ್ಲಾ ಕಡೆಗಳಲ್ಲಿಯೂ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು. BSB BSB: as did its gate chambers, side pillars, and portico. It also had windows all around. It was fifty cubits long and twenty-five cubits wide.
37 ULB ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು. BSB BSB: Its portico faced the outer court, and its side pillars were decorated with palm trees on each side. Eight steps led up to it.
38 ULB ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು. BSB BSB: There was a chamber with a doorway by the portico in each of the inner gateways. There the burnt offering was to be washed.
39 ULB ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು. BSB BSB: Inside the portico of the gateway were two tables on each side, on which the burnt offerings, sin offerings, and guilt offerings were to be slaughtered.
40 ULB ಉತ್ತರದ ಹೆಬ್ಬಾಗಿಲಿನ ಪ್ರವೇಶ ಸ್ಥಾನದ ಮೆಟ್ಟಿಲುಗಳ ಹತ್ತಿರ ಎರಡು ಪೀಠಗಳು ಇದ್ದವು. BSB BSB: Outside, as one goes up to the entrance of the north gateway, there were two tables on one side and two more tables on the other side of the gate’s portico.
41 ULB ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು. BSB BSB: So there were four tables inside the gateway and four outside—eight tables in all—on which the sacrifices were to be slaughtered.
42 ULB ಇದಲ್ಲದೆ ಸರ್ವಾಂಗಹೋಮಕ್ಕಾಗಿ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು. ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದುವರೆ ಮೊಳವಾಗಿತ್ತು. ಅವುಗಳ ಮೇಲೆ ಸರ್ವಾಂಗಹೋಮ ಪಶುಗಳನ್ನು ವಧಿಸುವ ಉಪಕರಣಗಳನ್ನು ಇಡುತ್ತಿದ್ದರು. BSB BSB: There were also four tables of dressed stone for the burnt offering, each a cubit and a half long, a cubit and a half wide, and a cubit high. On these were placed the utensils used to slaughter the burnt offerings and the other sacrifices.
43 ULB ಒಳಗೆ, ಸುತ್ತಲು ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು. BSB BSB: The double-pronged hooks, each a handbreadth long, were fastened all around the inside of the room, and the flesh of the offering was to be placed on the tables.
44 ULB ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು. BSB BSB: Outside the inner gate, within the inner court, were two chambers, one beside the north gate and facing south, and another beside the south gate and facing north.
45 ULB ಆಗ ಅವನು ನನಗೆ, <<ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ. BSB BSB: Then the man said to me: “The chamber that faces south is for the priests who keep charge of the temple,
46 ULB ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ>> ಎಂದು ಹೇಳಿದನು. BSB BSB: and the chamber that faces north is for the priests who keep charge of the altar. These are the sons of Zadok, the only Levites who may approach the LORD to minister before Him.”
47 ULB ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು. BSB BSB: Next he measured the court. It was square, a hundred cubits long and a hundred cubits wide. And the altar was in front of the temple.
48 ULB ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳೆಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು. BSB BSB: Then he brought me to the portico of the temple and measured the side pillars of the portico to be five cubits on each side. The width of the gateway was fourteen cubits and its sidewalls were three cubits on either side.
49 ULB ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು. ಹತ್ತು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು. BSB BSB: The portico was twenty cubits wide and twelve cubits deep, and ten steps led up to it. There were columns by the side pillars, one on each side.
Select verses for actions: Enter goes to them and Escape comes back.