1 ULB ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು. BSB BSB: The man then brought me back to the outer gate of the sanctuary that faced east, but it was shut.
2 ULB ಆಗ ಯೆಹೋವನು ನನಗೆ, <<ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು. BSB BSB: And the LORD said to me, “This gate is to remain shut. It shall not be opened, and no man shall enter through it, because the LORD, the God of Israel, has entered through it. Therefore it will remain shut.
3 ULB ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು>> ಎಂದು ಹೇಳಿದನು. BSB BSB: Only the prince himself may sit inside the gateway to eat in the presence of the LORD. He must enter by way of the portico of the gateway and go out the same way.”
4 ULB ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು. BSB BSB: Then the man brought me to the front of the temple by way of the north gate. I looked and saw the glory of the LORD filling His temple, and I fell facedown.
5 ULB ಆಗ ಯೆಹೋವನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು. BSB BSB: The LORD said to me: “Son of man, pay attention; look carefully with your eyes and listen closely with your ears to everything I tell you concerning all the statutes and laws of the house of the LORD. Take careful note of the entrance to the temple, along with all the exits of the sanctuary.
6 ULB ಇದಲ್ಲದೆ, ನೀನು ಆ ದ್ರೋಹಿಗಳಾದ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, BSB BSB: Tell the rebellious house of Israel that this is what the Lord GOD says: ‘I have had enough of all your abominations, O house of Israel.
7 ULB <ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ. BSB BSB: In addition to all your other abominations, you brought in foreigners uncircumcised in both heart and flesh to occupy My sanctuary; you defiled My temple when you offered My food—the fat and the blood; you broke My covenant.
8 ULB ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.> BSB BSB: And you have not kept charge of My holy things, but have appointed others to keep charge of My sanctuary for you.’
9 ULB ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು. BSB BSB: This is what the Lord GOD says: No foreigner uncircumcised in heart and flesh may enter My sanctuary—not even a foreigner who lives among the Israelites.
10 ULB << <ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು. BSB BSB: Surely the Levites who wandered away from Me when Israel went astray, and who wandered away from Me after their idols, will bear the consequences of their iniquity.
11 ULB ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು. BSB BSB: Yet they shall be ministers in My sanctuary, having charge of the gates of the temple and ministering there. They shall slaughter the burnt offerings and other sacrifices for the people and stand before them to minister to them.
12 ULB ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.> ಇದು ಕರ್ತನಾದ ಯೆಹೋವನ ನುಡಿ. BSB BSB: Because they ministered before their idols and became a stumbling block of iniquity to the house of Israel, therefore I swore with an uplifted hand concerning them that they would bear the consequences of their iniquity, declares the Lord GOD.
13 ULB <ಅವರು ನನಗೆ ಯಾಜಕಸೇವೆ ಮಾಡುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ನನ್ನ ಅತಿ ಪವಿತ್ರವಾದ ಪರಿಶುದ್ಧ ವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ, ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು. BSB BSB: They must not approach Me to serve Me as priests or come near any of My holy things or the most holy things. They will bear the shame of the abominations they have committed.
14 ULB ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು. BSB BSB: Yet I will appoint them to keep charge of all the work for the temple and everything to be done in it.
15 ULB << <ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು> ಇದು ಕರ್ತನಾದ ಯೆಹೋವನ ನುಡಿ. BSB BSB: But the Levitical priests, who are descended from Zadok and who kept charge of My sanctuary when the Israelites went astray from Me, are to approach Me to minister before Me. They will stand before Me to offer Me fat and blood, declares the Lord GOD.
16 ULB ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ಯಜ್ಞವೇದಿಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು. BSB BSB: They alone shall enter My sanctuary and draw near to My table to minister before Me. They will keep My charge.
17 ULB <<ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು. BSB BSB: When they enter the gates of the inner court, they are to wear linen garments; they must not wear anything made of wool when they minister at the gates of the inner court or inside the temple.
18 ULB ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು. BSB BSB: They are to wear linen turbans on their heads and linen undergarments around their waists. They must not wear anything that makes them perspire.
19 ULB ಅವರು ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡದಂತೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. BSB BSB: When they go out to the outer court, to the people, they are to take off the garments in which they have ministered, leave them in the holy chambers, and dress in other clothes so that they do not transmit holiness to the people with their garments.
20 ULB <<ಅವರು ತಲೆಬೋಳಿಸಿಕೊಳ್ಳದೆ; ಕೂದಲನ್ನು ಬೆಳಸದೆ, ತಮ್ಮ ತಲೆ ಕೂದಲನ್ನು ಕತ್ತರಿಸಬೇಕು. BSB BSB: They must not shave their heads or let their hair grow long, but must carefully trim their hair.
21 ULB ಒಳಗಿನ ಅಂಗಳವನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು. BSB BSB: No priest may drink wine before he enters the inner court.
22 ULB ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು. BSB BSB: And they shall not marry a widow or a divorced woman, but must marry a virgin of the descendants of the house of Israel, or a widow of a priest.
23 ULB ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ. BSB BSB: They are to teach My people the difference between the holy and the common and show them how to discern between the clean and the unclean.
24 ULB ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು. BSB BSB: In any dispute, they shall officiate as judges and judge according to My ordinances. They must keep My laws and statutes regarding all My appointed feasts, and they must keep My Sabbaths holy.
25 ULB <<ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು. BSB BSB: A priest must not defile himself by going near a dead person. However, for a father, a mother, a son, a daughter, a brother, or an unmarried sister, he may do so,
26 ULB ಅಂಥವನನ್ನು ಶುದ್ಧನಾದ ಮೇಲೂ, ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು. BSB BSB: and after he is cleansed, he must count off seven days for himself.
27 ULB ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.>> ಇದು ಕರ್ತನಾದ ಯೆಹೋವನ ನುಡಿ. BSB BSB: And on the day he goes into the sanctuary, into the inner court, to minister in the sanctuary, he must present his sin offering, declares the Lord GOD.
28 ULB <<ಅವರಿಗೆ ಇದು ಸ್ವಾಸ್ತ್ಯವಾಗುವುದು, ನಾನೇ ಅವರ ಸ್ವತ್ತು; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ. BSB BSB: In regard to their inheritance, I am their inheritance. You are to give them no possession in Israel, for I am their possession.
29 ULB ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು. BSB BSB: They shall eat the grain offerings, the sin offerings, and the guilt offerings. Everything in Israel devoted to the LORD will belong to them.
30 ULB <<ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು. BSB BSB: The best of all the firstfruits and of every contribution from all your offerings will belong to the priests. You are to give your first batch of dough to the priest, so that a blessing may rest upon your homes.
31 ULB ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.>> BSB BSB: The priests may not eat any bird or animal found dead or torn by wild beasts.
Select verses for actions: Enter goes to them and Escape comes back.