2 ULB ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, <<ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ. BSB BSB: “This is what Cyrus king of Persia says: ‘The LORD, the God of heaven, who has given me all the kingdoms of the earth, has appointed me to build a house for Him at Jerusalem in Judah.
3 ULB ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ. BSB BSB: Whoever among you belongs to His people, may his God be with him, and may he go to Jerusalem in Judah and build the house of the LORD, the God of Israel; He is the God who is in Jerusalem.
4 ULB ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ>> ಎಂದು ಪ್ರಕಟಿಸಿದನು. BSB BSB: And let every survivor, wherever he lives, be assisted by the men of that region with silver, gold, goods, and livestock, along with a freewill offering for the house of God in Jerusalem.’”
5 ULB ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು. BSB BSB: So the family heads of Judah and Benjamin, along with the priests and Levites—everyone whose spirit God had stirred—prepared to go up and rebuild the house of the LORD in Jerusalem.
6 ULB ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು. BSB BSB: And all their neighbors supported them with articles of silver and gold, with goods and livestock, and with valuables, in addition to all their freewill offerings.
7 ULB ಅಲ್ಲಿಂದ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪರ್ಷಿಯ ರಾಜನಾದ ಕೋರೆಷನು ಅಲ್ಲಿಂದ ತೆಗೆಸಿದನು. BSB BSB: King Cyrus also brought out the articles belonging to the house of the LORD that Nebuchadnezzar had carried away from Jerusalem and placed in the temple of his gods.
8 ULB ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು. BSB BSB: Cyrus king of Persia had them brought out by the hand of Mithredath the treasurer, who counted them out to Sheshbazzar the prince of Judah.
9 ULB ಆ ಸಾಮಾನುಗಳ ಲೆಕ್ಕ: ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು; BSB BSB: This was the inventory: 30 gold dishes, 1,000 silver dishes, 29 silver utensils,
10 ULB ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ. BSB BSB: 30 gold bowls, 410 matching silver bowls, and 1,000 other articles.
11 ULB ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬೆಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು. BSB BSB: In all, there were 5,400 gold and silver articles. Sheshbazzar brought all these along when the exiles went up from Babylon to Jerusalem.
Select verses for actions: Enter goes to them and Escape comes back.