1 ULB ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು. BSB BSB: While Ezra prayed and made this confession, weeping and falling facedown before the house of God, a very large assembly of Israelites—men, women, and children—gathered around him, and the people wept bitterly as well.
2 ULB ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, <<ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು. BSB BSB: Then Shecaniah son of Jehiel, an Elamite, said to Ezra: “We have been unfaithful to our God by marrying foreign women from the people of the land, yet in spite of this, there is hope for Israel.
3 ULB ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ. BSB BSB: So now let us make a covenant before our God to send away all the foreign wives and their children, according to the counsel of my lord and of those who tremble at the command of our God. Let it be done according to the Law.
4 ULB ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು>> ಎಂದು ಹೇಳಿದನು. BSB BSB: Get up, for this matter is your responsibility, and we will support you. Be strong and take action!”
5 ULB ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ, ಎಲ್ಲಾ ಇಸ್ರಾಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು. BSB BSB: So Ezra got up and made the leading priests, Levites, and all Israel take an oath to do what had been said. And they took the oath.
6 ULB ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. BSB BSB: Then Ezra withdrew from before the house of God and walked to the chamber of Jehohanan son of Eliashib. And while he stayed there, he ate no food and drank no water, because he was mourning over the unfaithfulness of the exiles.
7 ULB ತರುವಾಯ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ, <<ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು. BSB BSB: And a proclamation was issued throughout Judah and Jerusalem that all the exiles should gather at Jerusalem.
8 ULB ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು>> ಎಂದು ಪ್ರಕಟಿಸಿದರು. BSB BSB: Whoever failed to appear within three days would forfeit all his property, according to the counsel of the leaders and elders, and would himself be expelled from the assembly of the exiles.
9 ULB ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು. BSB BSB: So within the three days, all the men of Judah and Benjamin assembled in Jerusalem, and on the twentieth day of the ninth month, all the people sat in the square at the house of God, trembling regarding this matter and because of the heavy rain.
10 ULB ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, <<ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ. BSB BSB: Then Ezra the priest stood up and said to them, “You have been unfaithful by marrying foreign women, adding to the guilt of Israel.
11 ULB ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ>> ಎಂದನು. BSB BSB: Now, therefore, make a confession to the LORD, the God of your fathers, and do His will. Separate yourselves from the people of the land and from your foreign wives.”
12 ULB ಆಗ ಕೂಡಿಬಂದವರೆಲ್ಲರೂ ಗಟ್ಟಿಯಾಗಿ, <<ನೀನು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ. BSB BSB: And the whole assembly responded in a loud voice: “Truly we must do as you say!
13 ULB ಆದರೆ ಕೂಡಿಬಂದವರು ಬಹು ಜನರು, ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು. BSB BSB: But there are many people here, and it is the rainy season. We are not able to stay out in the open. Nor is this the work of one or two days, for we have transgressed greatly in this matter.
14 ULB ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ>> ಎಂದು ಉತ್ತರಕೊಟ್ಟರು. BSB BSB: Let our leaders represent the whole assembly. Then let everyone in our towns who has married a foreign woman come at an appointed time, together with the elders and judges of each town, until the fierce anger of our God in this matter is turned away from us.”
15 ULB ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು. BSB BSB: (Only Jonathan son of Asahel and Jahzeiah son of Tikvah, supported by Meshullam and Shabbethai the Levite, opposed this plan.)
16 ULB ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು. BSB BSB: So the exiles did as proposed. Ezra the priest selected men who were family heads, each of them identified by name, to represent their families. On the first day of the tenth month they launched the investigation,
17 ULB ಅವರು ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ನಿರ್ಧರಿಸಿದರು. BSB BSB: and by the first day of the first month they had dealt with all the men who had married foreign women.
18 ULB ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು. BSB BSB: Among the descendants of the priests who had married foreign women were found these descendants of Jeshua son of Jozadak and his brothers: Maaseiah, Eliezer, Jarib, and Gedaliah.
19 ULB ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು. BSB BSB: They pledged to send their wives away, and for their guilt they presented a ram from the flock as a guilt offering.
20 ULB ಇಮ್ಮೇರನ ಸಂತಾನದವರಾದ ಹನಾನೀ ಮತ್ತು ಜೆಬದ್ಯ. BSB BSB: From the descendants of Immer: Hanani and Zebadiah.
21 ULB ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ. BSB BSB: From the descendants of Harim: Maaseiah, Elijah, Shemaiah, Jehiel, and Uzziah.
22 ULB ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ. BSB BSB: From the descendants of Pashhur: Elioenai, Maaseiah, Ishmael, Nethanel, Jozabad, and Elasah.
23 ULB ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವವ ಕೇಲಾಯ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್. BSB BSB: Among the Levites: Jozabad, Shimei, Kelaiah (that is, Kelita), Pethahiah, Judah, and Eliezer.
24 ULB ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ. BSB BSB: From the singers: Eliashib. From the gatekeepers: Shallum, Telem, and Uri.
25 ULB ಬೇರೆ ಇಸ್ರಾಯೇಲರಲ್ಲಿ: ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ ಎಲ್ಲಾಜಾರ್, ಮಿಯ್ಯಾಮಿನ್, ಮಲ್ಕೀಯ, ಬೆನಾಯ; BSB BSB: And among the other Israelites, from the descendants of Parosh: Ramiah, Izziah, Malchijah, Mijamin, Eleazar, Malchijah, and Benaiah.
26 ULB ಏಲಾಮ್ ಸಂತಾನದವರಾದ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ. BSB BSB: From the descendants of Elam: Mattaniah, Zechariah, Jehiel, Abdi, Jeremoth, and Elijah.
27 ULB ಜತ್ತೂ ಸಂತಾನದವರಾದ ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ ಮತ್ತು ಅಜೀಜಾ. BSB BSB: From the descendants of Zattu: Elioenai, Eliashib, Mattaniah, Jeremoth, Zabad, and Aziza.
28 ULB ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ. BSB BSB: From the descendants of Bebai: Jehohanan, Hananiah, Zabbai, and Athlai.
29 ULB ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್. BSB BSB: From the descendants of Bani: Meshullam, Malluch, Adaiah, Jashub, Sheal, and Jeremoth.
30 ULB ಪಹತ್ ಮೋವಾಬ್, ಸಂತಾನದವರಾದ ಅದ್ನ ಕೆಲಾಲ್, ಬೆನಾಯ, ಮಾಸೇಯ ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ. BSB BSB: From the descendants of Pahath-moab: Adna, Chelal, Benaiah, Maaseiah, Mattaniah, Bezalel, Binnui, and Manasseh.
31 ULB ಹಾರೀಮ್ ಸಂತಾನದವರಾದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್, BSB BSB: From the descendants of Harim: Eliezer, Isshijah, Malchijah, Shemaiah, Shimeon,
32 ULB ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ. BSB BSB: Benjamin, Malluch, and Shemariah.
33 ULB ಹಾಷುಮ್, ಸಂತಾನದವರಾದ ಮತ್ತೆನೈ, ಮತ್ತತ್ತ, ಜಾಬಾದ, ಎಲೀಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ. BSB BSB: From the descendants of Hashum: Mattenai, Mattattah, Zabad, Eliphelet, Jeremai, Manasseh, and Shimei.
34 ULB ಬಾನೀ ಸಂತಾನದರಾದ ಮಾದೈ, ಅಮ್ರಾಮ್, ಊವೇಲ್ BSB BSB: From the descendants of Bani: Maadai, Amram, Uel,
35 ULB ಬೆನಾಯ, ಬೇದೆಯ, ಕೆಲೂಹು, BSB BSB: Benaiah, Bedeiah, Cheluhi,
36 ULB ವನ್ಯಾಹ, ಮೆರೇಮೋತ್, ಎಲ್ಯಾಷೀಬ್, BSB BSB: Vaniah, Meremoth, Eliashib,
37 ULB ಮತ್ತನ್ಯ, ಮತ್ತೆನೈ, ಯಾಸೈ, BSB BSB: Mattaniah, Mattenai, and Jaasu.
38 ULB ಬಾನೀ, ಬಿನ್ನೂಯ್, ಶಿಮ್ಮೀ, BSB BSB: From the descendants of Binnui: Shimei,
39 ULB ಶೆಲೆಮ್ಯ, ನಾತಾನ್, ಅದಾಯ, BSB BSB: Shelemiah, Nathan, Adaiah,
40 ULB ಮಕ್ನದೆಬೈ, ಶಾಷೈ, ಶಾರೈ, BSB BSB: Machnadebai, Shashai, Sharai,
41 ULB ಅಜರೇಲ್, ಶೆಲೆಮ್ಯ, ಶೆಮರ್ಯ, BSB BSB: Azarel, Shelemiah, Shemariah,
42 ULB ಶಲ್ಲೂಮ್, ಅಮರ್ಯ ಮತ್ತು ಯೋಸೇಫ್. BSB BSB: Shallum, Amariah, and Joseph.
43 ULB ನೆಬೋ ಸಂತಾನದವರಾದ ಯೆಗೀಯೇಲ್, ಮತ್ತಿತ್ಯ, ಜಾಬಾದ, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ. BSB BSB: And from the descendants of Nebo: Jeiel, Mattithiah, Zabad, Zebina, Jaddai, Joel, and Benaiah.
44 ULB ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು. BSB BSB: All these men had married foreign women, and some of them had children by these wives.
Select verses for actions: Enter goes to them and Escape comes back.