1 ULB ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು. BSB BSB: When the enemies of Judah and Benjamin heard that the exiles were building a temple for the LORD, the God of Israel,
2 ULB ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, <<ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ>> ಎಂದು ಹೇಳಿದರು. BSB BSB: they approached Zerubbabel and the heads of the families, saying, “Let us build with you because, like you, we seek your God and have been sacrificing to Him since the time of King Esar-haddon of Assyria, who brought us here.”
3 ULB ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, <<ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ>> ಎಂದು ಉತ್ತರ ಕೊಟ್ಟರು. BSB BSB: But Zerubbabel, Jeshua, and the other heads of the families of Israel replied, “You have no part with us in building a house for our God, since we alone must build it for the LORD, the God of Israel, as Cyrus king of Persia has commanded us.”
4 ULB ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು. BSB BSB: Then the people of the land set out to discourage the people of Judah and make them afraid to build.
5 ULB ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು. BSB BSB: They hired counselors against them to frustrate their plans throughout the reign of Cyrus king of Persia and down to the reign of Darius king of Persia.
6 ULB ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು. BSB BSB: At the beginning of the reign of Xerxes, an accusation was lodged against the people of Judah and Jerusalem.
7 ULB ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು. BSB BSB: And in the days of Artaxerxes king of Persia, Bishlam, Mithredath, Tabeel, and the rest of his associates wrote a letter to Artaxerxes. It was written in Aramaic and then translated.
8 ULB ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು. BSB BSB: Rehum the commander and Shimshai the scribe wrote the letter against Jerusalem to King Artaxerxes as follows:
9 ULB ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬೆಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು. BSB BSB: From Rehum the commander, Shimshai the scribe, and the rest of their associates—the judges and officials over Tripolis, Persia, Erech and Babylon, the Elamites of Susa,
10 ULB ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ. BSB BSB: and the rest of the peoples whom the great and honorable Ashurbanipal deported and settled in the cities of Samaria and elsewhere west of the Euphrates.
11 ULB ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, <<ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು. BSB BSB: (This is the text of the letter they sent to him.) To King Artaxerxes, From your servants, the men west of the Euphrates:
12 ULB ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ. BSB BSB: Let it be known to the king that the Jews who came from you to us have returned to Jerusalem and are rebuilding that rebellious and wicked city. They are restoring its walls and repairing its foundations.
13 ULB ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ. BSB BSB: Let it now be known to the king that if that city is rebuilt and its walls are restored, they will not pay tribute, duty, or toll, and the royal treasury will suffer.
14 ULB ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ. BSB BSB: Now because we are in the service of the palace and it is not fitting for us to allow the king to be dishonored, we have sent to inform the king
15 ULB ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ. BSB BSB: that a search should be made of the record books of your fathers. In these books you will discover and verify that the city is a rebellious city, harmful to kings and provinces, inciting sedition from ancient times. That is why this city was destroyed.
16 ULB ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.>> BSB BSB: We advise the king that if this city is rebuilt and its walls are restored, you will have no dominion west of the Euphrates.
17 ULB ಅರಸನು ಅವರಿಗೆ ಕೊಟ್ಟ ಉತ್ತರವು, <<ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ. BSB BSB: Then the king sent this reply: To Rehum the commander, Shimshai the scribe, and the rest of your associates living in Samaria and elsewhere in the region west of the Euphrates: Greetings.
18 ULB ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು. BSB BSB: The letter you sent us has been translated and read in my presence.
19 ULB ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು. BSB BSB: I issued a decree, and a search was conducted. It was discovered that this city has revolted against kings from ancient times, engaging in rebellion and sedition.
20 ULB ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು. BSB BSB: And mighty kings have ruled over Jerusalem and exercised authority over the whole region west of the Euphrates; and tribute, duty, and toll were paid to them.
21 ULB ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ. BSB BSB: Now, therefore, issue an order for these men to stop, so that this city will not be rebuilt until I so order.
22 ULB ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ>> ಎಂದು ತಿಳಿಸಿದನು. BSB BSB: See that you do not neglect this matter. Why allow this threat to increase and the royal interests to suffer?
23 ULB ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು. BSB BSB: When the text of the letter from King Artaxerxes was read to Rehum, Shimshai the scribe, and their associates, they went immediately to the Jews in Jerusalem and forcibly stopped them.
24 ULB ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು. BSB BSB: Thus the construction of the house of God in Jerusalem ceased, and it remained at a standstill until the second year of the reign of Darius king of Persia.
Select verses for actions: Enter goes to them and Escape comes back.