2 ULB ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು. BSB BSB: I went in response to a revelation and set before them the gospel that I preach among the Gentiles. But I spoke privately to those recognized as leaders, for fear that I was running or had already run in vain.
3 ULB ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ. BSB BSB: Yet not even Titus, who was with me, was compelled to be circumcised, even though he was a Greek.
4 ULB ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು. BSB BSB: This issue arose because some false brothers had come in under false pretenses to spy on our freedom in Christ Jesus, in order to enslave us.
5 ULB ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ. BSB BSB: We did not give in to them for a moment, so that the truth of the gospel would remain with you.
6 ULB ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ. BSB BSB: But as for the highly esteemed—whatever they were makes no difference to me; God does not show favoritism—those leaders added nothing to me.
7 ULB ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು. BSB BSB: On the contrary, they saw that I had been entrusted to preach the gospel to the uncircumcised, just as Peter had been to the circumcised.
8 ULB ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು. BSB BSB: For the One who was at work in Peter’s apostleship to the circumcised was also at work in my apostleship to the Gentiles.
9 ULB ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು. BSB BSB: And recognizing the grace that I had been given, James, Cephas, and John—those reputed to be pillars—gave me and Barnabas the right hand of fellowship, so that we should go to the Gentiles, and they to the circumcised. 10 ULB ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು. BSB BSB: They only asked us to remember the poor, the very thing I was eager to do.
11 ULB ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು. BSB BSB: When Cephas came to Antioch, however, I opposed him to his face, because he stood condemned.
12 ULB ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು. BSB BSB: For before certain men came from James, he used to eat with the Gentiles. But when they arrived, he began to draw back and separate himself, for fear of those in the circumcision group.
13 ULB ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. BSB BSB: The other Jews joined him in his hypocrisy, so that by their hypocrisy even Barnabas was led astray.
14 ULB ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, <<ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?>> BSB BSB: When I saw that they were not walking in line with the truth of the gospel, I said to Cephas in front of them all, “If you, who are a Jew, live like a Gentile and not like a Jew, how can you compel the Gentiles to live like Jews?”
15 ULB ನಾವಂತೂ ಜನ್ಮತ ಯೆಹೂದ್ಯರು <<ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.>> BSB BSB: We who are Jews by birth and not Gentile “sinners”
16 ULB ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. BSB BSB: know that a man is not justified by works of the law, but by faith in Jesus Christ. So we, too, have believed in Christ Jesus, that we may be justified by faith in Christ and not by works of the law, because by works of the law no one will be justified.
17 ULB ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ. BSB BSB: But if, while we seek to be justified in Christ, we ourselves are found to be sinners, does that make Christ a minister of sin? Certainly not!
18 ULB ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ. BSB BSB: If I rebuild what I have already torn down, I prove myself to be a lawbreaker.
19 ULB ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ. BSB BSB: For through the law I died to the law so that I might live to God.
20 ULB ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು. BSB BSB: I have been crucified with Christ, and I no longer live, but Christ lives in me. The life I live in the body, I live by faith in the Son of God, who loved me and gave Himself up for me.
21 ULB ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ. BSB BSB: I do not set aside the grace of God. For if righteousness comes through the law, then Christ died for nothing.
Select verses for actions: Enter goes to them and Escape comes back.