1 ULB ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು. BSB BSB: What I am saying is that as long as the heir is a child, he is no different from a slave, although he is the owner of everything.
2 ULB ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು. BSB BSB: He is subject to guardians and trustees until the date set by his father.
3 ULB ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು. BSB BSB: So also, when we were children, we were enslaved under the basic principles of the world.
6 ULB ನೀವು ಪುತ್ರರಾಗಿರುವುದರಿಂದ ದೇವರು, <<ಅಪ್ಪಾ ತಂದೆಯೇ>> ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. BSB BSB: And because you are sons, God sent the Spirit of His Son into our hearts, crying out, “Abba, Father!”
7 ULB ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ. BSB BSB: So you are no longer a slave, but a son; and since you are a son, you are also an heir through God.
8 ULB ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ. BSB BSB: Formerly, when you did not know God, you were slaves to those who by nature are not gods.
9 ULB ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ. ವಿಶೇಷವಾಗಿ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ? BSB BSB: But now that you know God, or rather are known by God, how is it that you are turning back to those weak and worthless principles? Do you wish to be enslaved by them all over again?
10 ULB ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ. BSB BSB: You are observing special days and months and seasons and years!
11 ULB ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ. BSB BSB: I fear for you, that my efforts for you may have been in vain.
12 ULB ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ. BSB BSB: I beg you, brothers, become like me, for I became like you. You have done me no wrong.
13 ULB ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. BSB BSB: You know that it was because of an illness that I first preached the gospel to you.
14 ULB ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ. BSB BSB: And although my illness was a trial to you, you did not despise or reject me. Instead, you welcomed me as if I were an angel of God, as if I were Christ Jesus Himself.
15 ULB ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ. BSB BSB: What then has become of your blessing? For I can testify that, if it were possible, you would have torn out your eyes and given them to me.
16 ULB ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ? BSB BSB: Have I now become your enemy by telling you the truth?
17 ULB ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗಾಗಿ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ಹೊರಗೆ ತಳ್ಳಿ ಬಿಡಲು ಬಯಸುತ್ತಿದ್ದಾರೆ. BSB BSB: Those people are zealous for you, but not in a good way. Instead, they want to isolate you from us, so that you may be zealous for them.
18 ULB ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ. BSB BSB: Nevertheless, it is good to be zealous if it serves a noble purpose—at any time, and not only when I am with you.
19 ULB ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು. BSB BSB: My children, for whom I am again in the pains of childbirth until Christ is formed in you,
20 ULB ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ! BSB BSB: how I wish I could be with you now and change my tone, because I am perplexed about you.
21 ULB ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ. BSB BSB: Tell me, you who want to be under the law, do you not understand what the law says?
22 ULB ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು. BSB BSB: For it is written that Abraham had two sons, one by the slave woman and the other by the free woman.
23 ULB ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು. BSB BSB: His son by the slave woman was born according to the flesh, but his son by the free woman was born through the promise.
24 ULB ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು. BSB BSB: These things serve as illustrations, for the women represent two covenants. One covenant is from Mount Sinai and bears children into slavery: This is Hagar.
25 ULB ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ. BSB BSB: Now Hagar stands for Mount Sinai in Arabia and corresponds to the present-day Jerusalem, because she is in slavery with her children.
26 ULB ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ. BSB BSB: But the Jerusalem above is free, and she is our mother.
27 ULB <<ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು>> ಎಂದು ಬರೆದಿದೆಯಲ್ಲಾ. BSB BSB: For it is written: “Rejoice, O barren woman, who bears no children; break forth and cry aloud, you who have never travailed; because more are the children of the desolate woman than of her who has a husband.”
28 ULB ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ. BSB BSB: Now you, brothers, like Isaac, are children of promise.
29 ULB ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ. BSB BSB: At that time, however, the son born by the flesh persecuted the son born by the Spirit. It is the same now.
30 ULB ಆದರೆ ದೇವರ ವಾಕ್ಯವು ಏನು ಹೇಳುತ್ತದೆ? <<ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು>> ಎಂದು ಹೇಳುತ್ತದೆ. BSB BSB: But what does the Scripture say? “Expel the slave woman and her son, for the slave woman’s son will never share in the inheritance with the free woman’s son.”
31 ULB ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ. BSB BSB: Therefore, brothers, we are not children of the slave woman, but of the free woman.
Select verses for actions: Enter goes to them and Escape comes back.