2 ULB ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. BSB BSB: Now the earth was formless and void, and darkness was over the surface of the deep. And the Spirit of God was hovering over the surface of the waters.
3 ULB ಅನಂತರ ದೇವರು <<ಬೆಳಕಾಗಲಿ>> ಎಂದು ಆಜ್ಞಾಪಿಸಲು ಬೆಳಕಾಯಿತು. BSB BSB: And God said, “Let there be light,” and there was light.
4 ULB ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು. BSB BSB: And God saw that the light was good, and He separated the light from the darkness.
5 ULB ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ <<ಹಗಲು>> ಎಂದೂ, ಕತ್ತಲೆಗೆ <<ಇರುಳು>> ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. BSB BSB: God called the light “day,” and the darkness He called “night.” And there was evening, and there was morning—the first day.
6 ULB ಬಳಿಕ ದೇವರು <<ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ>> ಅಂದನು. BSB BSB: And God said, “Let there be an expanse between the waters, to separate the waters from the waters.”
7 ULB ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು. BSB BSB: So God made the expanse and separated the waters beneath it from the waters above. And it was so.
8 ULB ದೇವರು ಆ ಗುಮ್ಮಟಕ್ಕೆ <<ಆಕಾಶ>> ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. BSB BSB: God called the expanse “sky.” And there was evening, and there was morning—the second day.
9 ULB ಅನಂತರ ದೇವರು, <<ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ>> ಅಂದನು. ಹಾಗೆಯೇ ಆಯಿತು. BSB BSB: And God said, “Let the waters under the sky be gathered into one place, so that the dry land may appear.” And it was so.
10 ULB ದೇವರು ಒಣನೆಲಕ್ಕೆ <<ಭೂಮಿ>> ಎಂದೂ ಜಲರಾಶಿಗೆ <<ಸಮುದ್ರ>> ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. BSB BSB: God called the dry land “earth,” and the gathering of waters He called “seas.” And God saw that it was good.
11 ULB ತರುವಾಯ ದೇವರು, <<ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ>> ಎಂದು ಹೇಳಿದನು, ಹಾಗೆಯೇ ಆಯಿತು. BSB BSB: Then God said, “Let the earth bring forth vegetation: seed-bearing plants and fruit trees, each bearing fruit with seed according to its kind.” And it was so.
12 ULB ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು BSB BSB: The earth produced vegetation: seed-bearing plants according to their kinds and trees bearing fruit with seed according to their kinds. And God saw that it was good.
13 ULB ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು. BSB BSB: And there was evening, and there was morning—the third day.
15 ULB ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ>> ಅಂದನು. ಹಾಗೆಯೇ ಆಯಿತು. BSB BSB: And let them serve as lights in the expanse of the sky to shine upon the earth.” And it was so.
16 ULB ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು. BSB BSB: God made two great lights: the greater light to rule the day and the lesser light to rule the night. And He made the stars as well.
17 ULB ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ BSB BSB: God set these lights in the expanse of the sky to shine upon the earth,
18 ULB ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು. BSB BSB: to preside over the day and the night, and to separate the light from the darkness. And God saw that it was good.
19 ULB ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು. BSB BSB: And there was evening, and there was morning—the fourth day.
21 ULB ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. BSB BSB: So God created the great sea creatures and every living thing that moves, with which the waters teemed according to their kinds, and every winged bird after its kind. And God saw that it was good.
22 ULB ಇದಲ್ಲದೆ ದೇವರು, <<ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ>> ಎಂದು ಹೇಳಿ ಆಶೀರ್ವದಿಸಿದನು. BSB BSB: Then God blessed them and said, “Be fruitful and multiply and fill the waters of the seas, and let birds multiply on the earth.”
23 ULB ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. BSB BSB: And there was evening, and there was morning—the fifth day.
25 ULB ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. BSB BSB: God made the beasts of the earth according to their kinds, the livestock according to their kinds, and everything that crawls upon the earth according to its kind. And God saw that it was good.
28 ULB ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, <<ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ>> ಎಂದು ಅವರಿಗೆ ಹೇಳಿದನು. BSB BSB: God blessed them and said to them, “Be fruitful and multiply, and fill the earth and subdue it; rule over the fish of the sea and the birds of the air and every creature that crawls upon the earth.”
30 ULB ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ>> ಎಂದು ಹೇಳಿದನು. ಅದು ಹಾಗೆಯೇ ಆಯಿತು. BSB BSB: And to every beast of the earth and every bird of the air and every creature that crawls upon the earth—everything that has the breath of life in it—I have given every green plant for food.” And it was so.