1 ULB ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, <<ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ. BSB BSB: When Abram was ninety-nine years old, the LORD appeared to him and said, “I am God Almighty. Walk before Me and be blameless.
2 ULB ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು>> ಎಂದನು. BSB BSB: I will establish My covenant between Me and you, and I will multiply you exceedingly.”
3 ULB ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ, BSB BSB: Then Abram fell facedown, and God said to him,
4 ULB <<ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ, BSB BSB: “As for Me, this is My covenant with you: You will be the father of many nations.
5 ULB ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು. BSB BSB: No longer will you be called Abram, but your name will be Abraham, for I have made you a father of many nations.
6 ULB ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು. BSB BSB: I will make you exceedingly fruitful; I will make nations of you, and kings will descend from you.
7 ULB ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. BSB BSB: I will establish My covenant as an everlasting covenant between Me and you and your descendants after you, to be your God and the God of your descendants after you.
8 ULB ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು>> ಎಂದನು. BSB BSB: And to you and your descendants I will give the land where you are residing—all the land of Canaan—as an eternal possession; and I will be their God.”
9 ULB ಇದಲ್ಲದೆ ದೇವರು ಅಬ್ರಹಾಮನಿಗೆ, <<ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು. BSB BSB: God also said to Abraham, “You must keep My covenant—you and your descendants in the generations after you.
11 ULB ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ. BSB BSB: You are to circumcise the flesh of your foreskin, and this will be a sign of the covenant between Me and you.
12 ULB ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ; BSB BSB: Generation after generation, every male must be circumcised when he is eight days old, including those born in your household and those purchased from a foreigner—even those who are not your offspring.
13 ULB ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು. BSB BSB: Whether they are born in your household or purchased, they must be circumcised. My covenant in your flesh will be an everlasting covenant.
14 ULB ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು>> ಎಂದು ಹೇಳಿದನು. BSB BSB: But if any male is not circumcised, he will be cut off from his people; he has broken My covenant.”
15 ULB ಇದಲ್ಲದೆ ದೇವರು ಅಬ್ರಹಾಮನಿಗೆ, <<ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ <ಸಾರಾ> (ರಾಣಿ) ಎಂದು ಕರೆಯಬೇಕು. BSB BSB: Then God said to Abraham, “As for Sarai your wife, do not call her Sarai, for her name is to be Sarah.
16 ULB ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು>> ಎಂದು ಹೇಳಿದನು. BSB BSB: And I will bless her and will surely give you a son by her. I will bless her, and she will be the mother of nations; kings of peoples will descend from her.”
17 ULB ಅಬ್ರಹಾಮನು ಅಡ್ಡ ಬಿದ್ದು ನಕ್ಕು, <<ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?>> ಎಂದು ಮನಸ್ಸಿನಲ್ಲಿ ಅಂದುಕೊಂಡನು. BSB BSB: Abraham fell facedown. Then he laughed and said to himself, “Can a child be born to a man who is a hundred years old? Can Sarah give birth at the age of ninety?”
19 ULB ದೇವರು, <<ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ <ಇಸಾಕ> ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. BSB BSB: But God replied, “Your wife Sarah will indeed bear you a son, and you are to name him Isaac. I will establish My covenant with him as an everlasting covenant for his descendants after him.
21 ULB ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು>> ಅಂದನು. BSB BSB: But I will establish My covenant with Isaac, whom Sarah will bear to you at this time next year.”
22 ULB ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು. BSB BSB: When He had finished speaking with Abraham, God went up from him.
23 ULB ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು. BSB BSB: On that very day Abraham took his son Ishmael and all those born in his household or purchased with his money—every male among the members of Abraham’s household—and he circumcised them, just as God had told him.
24 ULB ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು. BSB BSB: So Abraham was ninety-nine years old when he was circumcised,
25 ULB ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು. BSB BSB: and his son Ishmael was thirteen;
26 ULB ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು. BSB BSB: Abraham and his son Ishmael were circumcised on the same day.
27 ULB ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು. BSB BSB: And all the men of Abraham’s household—both servants born in his household and those purchased from foreigners—were circumcised with him.