1 ULB ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ, BSB BSB: Now the two angels arrived at Sodom in the evening, and Lot was sitting in the gateway of the city. When Lot saw them, he got up to meet them, bowed facedown,
2 ULB <<ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು>> ಅಂದನು. ಅವರು, <<ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ>> ಎನ್ನಲು BSB BSB: and said, “My lords, please turn aside into the house of your servant; wash your feet and spend the night. Then you can rise early and go on your way.” “No,” they answered, “we will spend the night in the square.”
3 ULB ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು. BSB BSB: But Lot insisted so strongly that they followed him into his house. He prepared a feast for them and baked unleavened bread, and they ate.
4 ULB ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ, BSB BSB: Before they had gone to bed, all the men of the city of Sodom, both young and old, surrounded the house.
5 ULB ಲೋಟನಿಗೆ, <<ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು>> ಕೂಗಿ ಹೇಳಿದರು. BSB BSB: They called out to Lot, saying, “Where are the men who came to you tonight? Send them out to us so we can have relations with them!”
6 ULB ಲೋಟನು ಅವರ ಬಳಿಗೆ ಹೊರಕ್ಕೆ ಬಂದು ತನ್ನ ಹಿಂದೆ ಕದಹಾಕಿ, BSB BSB: Lot went outside to meet them, shutting the door behind him.
7 ULB <<ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ. BSB BSB: “Please, my brothers,” he pleaded, “don’t do such a wicked thing!
9 ULB ಅವರು ದಾರಿ ಬಿಡು ಎಂದು ಹೇಳಿ, <<ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ>> ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು. BSB BSB: “Get out of the way!” they replied. And they declared, “This one came here as a foreigner, and he is already acting like a judge! Now we will treat you worse than them.” And they pressed in on Lot and moved in to break down the door.
10 ULB ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು. BSB BSB: But the men inside reached out, pulled Lot into the house with them, and shut the door.
11 ULB ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು. BSB BSB: And they struck the men at the entrance, young and old, with blindness, so that they wearied themselves trying to find the door.
12 ULB ಆಗ ಆ ದೂತರು ಲೋಟನಿಗೆ, <<ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ. BSB BSB: Then the two men said to Lot, “Do you have anyone else here—a son-in-law, your sons or daughters, or anyone else in the city who belongs to you? Get them out of here,
13 ULB ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ>> ಎಂದು ಹೇಳಿದರು. BSB BSB: because we are about to destroy this place. For the outcry to the LORD against its people is so great that He has sent us to destroy it.”
14 ULB ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, <<ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ>> ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು. BSB BSB: So Lot went out and spoke to the sons-in-law who were pledged in marriage to his daughters. “Get up,” he said. “Get out of this place, for the LORD is about to destroy the city!” But his sons-in-law thought he was joking.
15 ULB ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, <<ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು>> ಎಂದು ಹೇಳಿ ತ್ವರೆಪಡಿಸಿದರು. BSB BSB: At daybreak the angels hurried Lot along, saying, “Get up! Take your wife and your two daughters who are here, or you will be swept away in the punishment of the city.”
17 ULB ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, <<ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು>> ಎಂದನು. BSB BSB: As soon as the men had brought them out, one of them said, “Run for your lives! Do not look back, and do not stop anywhere on the plain! Flee to the mountains, or you will be swept away!”
18 ULB ಅದಕ್ಕೆ ಲೋಟನು, <<ಕರ್ತನೇ, ಅದು ನನ್ನಿಂದಾಗದು; BSB BSB: But Lot replied, “No, my lords, please!
19 ULB ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು. BSB BSB: Your servant has indeed found favor in your sight, and you have shown me great kindness by sparing my life. But I cannot run to the mountains; the disaster will overtake me, and I will die.
20 ULB ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?>> ಎಂದನು. BSB BSB: Look, there is a town nearby where I can flee, and it is a small place. Please let me flee there—is it not a small place? Then my life will be saved.”
21 ULB ಅದಕ್ಕಾತನು, <<ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ. BSB BSB: “Very well,” he answered, “I will grant this request as well, and will not demolish the town you indicate.
22 ULB ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ>> ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು. BSB BSB: Hurry! Run there quickly, for I cannot do anything until you reach it.” That is why the town was called Zoar.
23 ULB ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು. BSB BSB: And by the time the sun had risen over the land, Lot had reached Zoar.
25 ULB ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು. BSB BSB: Thus He destroyed these cities and the entire plain, including all the inhabitants of the cities and everything that grew on the ground.
26 ULB ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು. BSB BSB: But Lot’s wife looked back, and she became a pillar of salt.
27 ULB ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ BSB BSB: Early the next morning, Abraham got up and returned to the place where he had stood before the LORD.
28 ULB ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು. BSB BSB: He looked down toward Sodom and Gomorrah and all the land of the plain, and he saw the smoke rising from the land like smoke from a furnace.
29 ULB ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು. BSB BSB: So when God destroyed the cities of the plain, He remembered Abraham, and He brought Lot out of the catastrophe that destroyed the cities where he had lived.
32 ULB ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ>> ಎಂದು ಹೇಳಿದಳು. BSB BSB: Come, let us get our father drunk with wine so we can sleep with him and preserve his line.”
33 ULB ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ. BSB BSB: So that night they got their father drunk with wine, and the firstborn went in and slept with her father; he was not aware when she lay down or when she got up.
34 ULB ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, <<ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ>> ಎಂದು ಹೇಳಿದಳು. BSB BSB: The next day the older daughter said to the younger, “Look, I slept with my father last night. Let us get him drunk with wine again tonight so you can go in and sleep with him and we can preserve our father’s line.”
35 ULB ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ. BSB BSB: So again that night they got their father drunk with wine, and the younger daughter went in and slept with him; he was not aware when she lay down or when she got up.
36 ULB ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದ ಬಸುರಾದರು. BSB BSB: Thus both of Lot’s daughters became pregnant by their father.
37 ULB ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ <<ಮೋವಾಬ್>> (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು. BSB BSB: The older daughter gave birth to a son and named him Moab. He is the father of the Moabites of today.
38 ULB ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ <<ಬೆನಮ್ಮಿ>> (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು. BSB BSB: The younger daughter also gave birth to a son, and she named him Ben-ammi. He is the father of the Ammonites of today.