1 ULB ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು. BSB BSB: Now Abraham journeyed from there to the region of the Negev and settled between Kadesh and Shur. While he was staying in Gerar,
2 ULB ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು. BSB BSB: Abraham said of his wife Sarah, “She is my sister.” So Abimelech king of Gerar had Sarah brought to him.
3 ULB ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, <<ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ>> ಎಂದನು. BSB BSB: One night, however, God came to Abimelech in a dream and told him, “You are as good as dead because of the woman you have taken, for she is a married woman.”
4 ULB ಅಬೀಮೆಲೆಕನು ಆಕೆಯನ್ನು ಸಂಗಮಿಸಿರಲಿಲ್ಲ. ಅವನು, <<ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ? BSB BSB: Now Abimelech had not gone near her, so he replied, “Lord, would You destroy a nation even though it is innocent?
5 ULB ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು>> ಎಂದನು. BSB BSB: Didn’t Abraham tell me, ‘She is my sister’? And she herself said, ‘He is my brother.’ I have done this in the integrity of my heart and the innocence of my hands.”
6 ULB ಅದಕ್ಕೆ ದೇವರು, <<ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ. BSB BSB: Then God said to Abimelech in the dream, “Yes, I know that you did this with a clear conscience, and so I have kept you from sinning against Me. That is why I did not let you touch her.
7 ULB ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ>> ಎಂದು ಕನಸಿನಲ್ಲಿ ಹೇಳಿದನು. BSB BSB: Now return the man’s wife, for he is a prophet; he will pray for you and you will live. But if you do not restore her, be aware that you will surely die—you and all who belong to you.”
8 ULB ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು. BSB BSB: Early the next morning Abimelech got up and summoned all his servants; and when he described to them all that had happened, the men were terrified.
9 ULB ಅಬೀಮೆಲೆಕನು ಅಬ್ರಹಾಮನನ್ನು ಕರೆದು, <<ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ>> ಎಂದು ಹೇಳಿ, BSB BSB: Then Abimelech called Abraham and asked, “What have you done to us? How have I sinned against you, that you have brought such tremendous guilt upon me and my kingdom? You have done things to me that should not be done.”
10 ULB <<ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ>> ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು. BSB BSB: Abimelech also asked Abraham, “What prompted you to do such a thing?”
11 ULB ಅದಕ್ಕೆ ಅಬ್ರಹಾಮನು, <<ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು. BSB BSB: Abraham replied, “I thought to myself, ‘Surely there is no fear of God in this place. They will kill me on account of my wife.’
12 ULB ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ, ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದುದರಿಂದ ನನಗೆ ಹೆಂಡತಿಯಾದಳು. BSB BSB: Besides, she really is my sister, the daughter of my father—though not the daughter of my mother—and she became my wife.
13 ULB ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, <ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು> ಎಂದು ತಿಳಿಸಿದೆನು>> ಎಂದನು. BSB BSB: So when God had me journey from my father’s house, I said to Sarah, ‘This is how you can show your loyalty to me: Wherever we go, say of me, “He is my brother.”’”
14 ULB ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ, BSB BSB: So Abimelech brought sheep and cattle, menservants and maidservants, and he gave them to Abraham and restored his wife Sarah to him.
15 ULB <<ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು>> ಎಂದು ಅಬೀಮೆಲೆಕನು ಹೇಳಿದನು. BSB BSB: And Abimelech said, “Look, my land is before you. Settle wherever you please.”
16 ULB ಇದಲ್ಲದೆ ಅವನು ಸಾರಳಿಗೆ, <<ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು>> ಎಂದು ಹೇಳಿದನು. BSB BSB: And he said to Sarah, “See, I am giving your brother a thousand pieces of silver. It is your vindication before all who are with you; you are completely cleared.”
17 ULB ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು. BSB BSB: Then Abraham prayed to God, and God healed Abimelech and his wife and his maidservants, so that they could again bear children—
18 ULB ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು. BSB BSB: for on account of Abraham’s wife Sarah, the LORD had completely closed all the wombs in Abimelech’s household.