1 ULB ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು. BSB BSB: Now the LORD attended to Sarah as He had said, and the LORD did for Sarah what He had promised.
2 ULB ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು. BSB BSB: So Sarah conceived and bore a son to Abraham in his old age, at the very time God had promised.
3 ULB ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ <<ಇಸಾಕ>> ಎಂದು ಹೆಸರಿಟ್ಟನು. BSB BSB: And Abraham gave the name Isaac to the son Sarah bore to him.
4 ULB ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು. BSB BSB: When his son Isaac was eight days old, Abraham circumcised him, as God had commanded him.
5 ULB ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು. BSB BSB: Abraham was a hundred years old when his son Isaac was born to him.
6 ULB ಸಾರಳು, <<ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು. BSB BSB: Then Sarah said, “God has made me laugh, and everyone who hears of this will laugh with me.”
7 ULB ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ>> ಎಂದು ಹೇಳಿಕೊಂಡಳು. BSB BSB: She added, “Who would have told Abraham that Sarah would nurse children? Yet I have borne him a son in his old age.”
8 ULB ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು. BSB BSB: So the child grew and was weaned, and Abraham held a great feast on the day Isaac was weaned.
9 ULB ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು, BSB BSB: But Sarah saw that the son whom Hagar the Egyptian had borne to Abraham was mocking her son,
10 ULB ಅಬ್ರಹಾಮನಿಗೆ, <<ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು>> ಎಂದು ಹೇಳಿದಳು. BSB BSB: and she said to Abraham, “Expel the slave woman and her son, for the slave woman’s son will never share in the inheritance with my son Isaac!”
11 ULB ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು. BSB BSB: Now this matter distressed Abraham greatly because it concerned his son Ishmael.
13 ULB ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು>> ಎಂದು ಹೇಳಿದನು. BSB BSB: But I will also make a nation of the slave woman’s son, because he is your offspring.”
14 ULB ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. BSB BSB: Early in the morning, Abraham got up, took bread and a skin of water, put them on Hagar’s shoulders, and sent her away with the boy. She left and wandered in the Wilderness of Beersheba.
15 ULB ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ, BSB BSB: When the water in the skin was gone, she left the boy under one of the bushes.
16 ULB ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, <<ಮಗುವು ಸಾಯುವುದನ್ನು ನೋಡಲಾರೆನು>> ಎಂದು ಹೇಳಿ ಜೋರಾಗಿ ಅತ್ತಳು. BSB BSB: Then she went off and sat down nearby, about a bowshot away, for she said, “I cannot bear to watch the boy die!” And as she sat nearby, she lifted up her voice and wept.
18 ULB ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು>> ಎಂದು ಹೇಳಿದನು. BSB BSB: Get up, lift up the boy, and take him by the hand, for I will make him into a great nation.”
19 ULB ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು. BSB BSB: Then God opened her eyes, and she saw a well of water. So she went and filled the skin with water and gave the boy a drink.
20 ULB ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು. BSB BSB: And God was with the boy, and he grew up and settled in the wilderness and became a great archer.
21 ULB ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು. BSB BSB: And while he was dwelling in the Wilderness of Paran, his mother got a wife for him from the land of Egypt.
22 ULB ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, <<ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ. BSB BSB: At that time Abimelech and Phicol the commander of his army said to Abraham, “God is with you in all that you do.
23 ULB ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು>> ಎಂದು ಹೇಳಿದನು. BSB BSB: Now, therefore, swear to me here before God that you will not deal falsely with me or my children or descendants. Show to me and to the country in which you reside the same kindness that I have shown to you.”
24 ULB ಅದಕ್ಕೆ ಅಬ್ರಹಾಮನು <<ಹಾಗೆಯೇ>> ಪ್ರಮಾಣಮಾಡುತ್ತೇನೆ ಅಂದನು. BSB BSB: And Abraham replied, “I swear it.”
25 ULB ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು, BSB BSB: But when Abraham complained to Abimelech about a well that Abimelech’s servants had seized,
26 ULB ಅಬೀಮೆಲೆಕನು, <<ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ>> ಎಂದನು. BSB BSB: Abimelech replied, “I do not know who has done this. You did not tell me, so I have not heard about it until today.”
27 ULB ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು. BSB BSB: So Abraham brought sheep and cattle and gave them to Abimelech, and the two men made a covenant.
28 ULB ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು, BSB BSB: Abraham separated seven ewe lambs from the flock,
29 ULB ಅಬೀಮೆಲೆಕನು ಅಬ್ರಹಾಮನಿಗೆ <<ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?>> ಎಂದು ಕೇಳಿದನು. BSB BSB: and Abimelech asked him, “Why have you set apart these seven ewe lambs?”
30 ULB ಅದಕ್ಕೆ ಅಬ್ರಹಾಮನು, <<ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು>> ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು. BSB BSB: He replied, “You are to accept the seven ewe lambs from my hand as my witness that I dug this well.”
31 ULB ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು. BSB BSB: So that place was called Beersheba, because it was there that the two of them swore an oath.
32 ULB ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು. BSB BSB: After they had made the covenant at Beersheba, Abimelech and Phicol the commander of his army got up and returned to the land of the Philistines.
33 ULB ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು. BSB BSB: And Abraham planted a tamarisk tree in Beersheba, and there he called upon the name of the LORD, the Eternal God.
34 ULB ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು. BSB BSB: And Abraham resided in the land of the Philistines for a long time.