3 ULB ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು. BSB BSB: So Abraham got up early the next morning, saddled his donkey, and took along two of his servants and his son Isaac. He split the wood for a burnt offering and set out for the place God had designated.
4 ULB ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ, BSB BSB: On the third day Abraham looked up and saw the place in the distance.
7 ULB ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, <<ಅಪ್ಪಾ>> ಎಂದು ಕರೆಯಲು ಅಬ್ರಹಾಮನು, <<ಏನು ಮಗನೇ>> ಎಂದನು. ಇಸಾಕನು, <<ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ>> ಎಂದು ಕೇಳಿದ್ದಕ್ಕೆ, BSB BSB: Then Isaac said to his father Abraham, “My father!” “Here I am, my son,” he replied. “The fire and the wood are here,” said Isaac, “but where is the lamb for the burnt offering?”
9 ULB ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು. BSB BSB: When they arrived at the place God had designated, Abraham built the altar there and arranged the wood. He bound his son Isaac and placed him on the altar, atop the wood.
10 ULB ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು. BSB BSB: Then Abraham reached out his hand and took the knife to slaughter his son.
12 ULB ಆ ದೂತನು ಅವನಿಗೆ, <<ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು>> ಎಂದು ಹೇಳಿದನು. BSB BSB: “Do not lay a hand on the boy or do anything to him,” said the angel, “for now I know that you fear God, since you have not withheld your only son from me.”
13 ULB ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು. BSB BSB: Then Abraham looked up and saw behind him a ram in a thicket, caught by its horns. So he went and took the ram and offered it as a burnt offering in place of his son.
14 ULB ಆ ಸ್ಥಳಕ್ಕೆ ಅಬ್ರಹಾಮನು <<ಯೆಹೋವ ಯೀರೆ>> ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ. BSB BSB: And Abraham called that place The LORD Will Provide. So to this day it is said, “On the mountain of the LORD it will be provided.”
15 ULB ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ, BSB BSB: And the angel of the LORD called to Abraham from heaven a second time,
16 ULB <<ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ BSB BSB: saying, “By Myself I have sworn, declares the LORD, that because you have done this and have not withheld your only son,
17 ULB ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. BSB BSB: I will surely bless you, and I will multiply your descendants like the stars in the sky and the sand on the seashore. Your descendants will possess the gates of their enemies.
18 ULB ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.>> ಎಂದನು. BSB BSB: And through your offspring all nations of the earth will be blessed, because you have obeyed My voice.”
19 ULB ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು. BSB BSB: Abraham went back to his servants, and they got up and set out together for Beersheba. And Abraham settled in Beersheba.
20 ULB ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು. BSB BSB: Some time later, Abraham was told, “Milcah has also borne sons to your brother Nahor:
21 ULB ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು. BSB BSB: Uz the firstborn, his brother Buz, Kemuel (the father of Aram),
22 ULB ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬವರೇ. BSB BSB: Chesed, Hazo, Pildash, Jidlaph, and Bethuel.”
23 ULB ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು. BSB BSB: And Bethuel became the father of Rebekah. Milcah bore these eight sons to Abraham’s brother Nahor.
24 ULB ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು. BSB BSB: Moreover, Nahor’s concubine, whose name was Reumah, bore Tebah, Gaham, Tahash, and Maacah.