1 ULB ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, <<ಮಗನೇ>> ಎನ್ನಲು ಏಸಾವನು, <<ಇಗೋ ಇದ್ದೇನೆ>> ಅಂದನು. BSB BSB: When Isaac was old and his eyes were so weak that he could no longer see, he called his older son Esau and said to him, “My son.” “Here I am,” Esau replied.
2 ULB ಇಸಾಕನು ಅವನಿಗೆ, <<ನಾನು ಮುದುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ. BSB BSB: “Look,” said Isaac, “I am now old, and I do not know the day of my death.
3 ULB ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು BSB BSB: Take your weapons—your quiver and bow—and go out into the field to hunt some game for me.
4 ULB ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ>> ಎಂದು ಹೇಳಿದನು. BSB BSB: Then prepare a tasty dish that I love and bring it to me to eat, so that I may bless you before I die.”
5 ULB ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು. BSB BSB: Now Rebekah was listening to what Isaac told his son Esau. So when Esau went into the field to hunt game and bring it back,
6 ULB ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, <<ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ, BSB BSB: Rebekah said to her son Jacob, “Behold, I overheard your father saying to your brother Esau,
7 ULB <ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ> ಎಂದು ಹೇಳುವುದನ್ನು ಕೇಳಿದ್ದೇನೆ. BSB BSB: ‘Bring me some game and prepare me a tasty dish to eat, so that I may bless you in the presence of the LORD before I die.’
8 ULB ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು. BSB BSB: Now, my son, listen to my voice and do exactly as I tell you.
9 ULB ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ. BSB BSB: Go out to the flock and bring me two choice young goats, so that I can make them into a tasty dish for your father—the kind he loves.
10 ULB ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು>> ಎಂದಳು. BSB BSB: Then take it to your father to eat, so that he may bless you before he dies.”
11 ULB ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, <<ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು. BSB BSB: Jacob answered his mother Rebekah, “Look, my brother Esau is a hairy man, but I am smooth-skinned.
12 ULB ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು>> ಎಂದನು. BSB BSB: What if my father touches me? Then I would be revealed to him as a deceiver, and I would bring upon myself a curse rather than a blessing.”
13 ULB ಅವನ ತಾಯಿಯು ಅವನಿಗೆ, <<ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ>> ಎಂದು ಹೇಳಿದಳು. BSB BSB: His mother replied, “Your curse be on me, my son. Just obey my voice and go get them for me.”
14 ULB ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು. BSB BSB: So Jacob went and got two goats and brought them to his mother, who made the tasty food his father loved.
15 ULB ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು. BSB BSB: And Rebekah took the finest clothes in the house that belonged to her older son Esau, and she put them on her younger son Jacob.
16 ULB ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು. BSB BSB: She also put the skins of the young goats on his hands and on the smooth part of his neck.
17 ULB ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು. BSB BSB: Then she handed her son Jacob the tasty food and bread she had made.
18 ULB ಅವನು ತಂದೆಯ ಬಳಿಗೆ ಹೋಗಿ, <<ಅಪ್ಪಾ>> ಎಂದು ಕರೆಯಲು, ತಂದೆಯು, <<ಏನು ಮಗನೇ, ನೀನು ಯಾರು?>> ಎಂದು ಕೇಳಿದನು. BSB BSB: So Jacob went to his father and said, “My father.” “Here I am!” he answered. “Which one are you, my son?”
19 ULB ಯಾಕೋಬನು ಅವನಿಗೆ, <<ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು>> ಎಂದು ಹೇಳಲು, BSB BSB: Jacob said to his father, “I am Esau, your firstborn. I have done as you told me. Please sit up and eat some of my game, so that you may bless me.”
20 ULB ಇಸಾಕನು, <<ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು>> ಎಂದು ಕೇಳಿದ್ದಕ್ಕೆ ಅವನು, <<ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು>> ಎಂದನು. BSB BSB: But Isaac asked his son, “How did you ever find it so quickly, my son?” “Because the LORD your God brought it to me,” he replied.
21 ULB ಇಸಾಕನು ಯಾಕೋಬನಿಗೆ, <<ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು>> ಎಂದು ಹೇಳಿದನು. BSB BSB: Then Isaac said to Jacob, “Please come closer so I can touch you, my son. Are you really my son Esau, or not?”
22 ULB ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, <<ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು>> ಎಂದು ಹೇಳಿದನು. BSB BSB: So Jacob came close to his father Isaac, who touched him and said, “The voice is the voice of Jacob, but the hands are the hands of Esau.”
23 ULB ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು. BSB BSB: Isaac did not recognize him, because his hands were hairy like those of his brother Esau; so he blessed him.
24 ULB ಅವನು, <<ನೀನು ನಿಜವಾದ ನನ್ನ ಮಗನಾದ ಏಸಾವನೋ>> ಎಂದು ಕೇಳಿದ್ದಕ್ಕೆ ಯಾಕೋಬನು, <<ಹೌದು>> ಎನ್ನಲು, BSB BSB: Again he asked, “Are you really my son Esau?” And he replied, “I am.”
25 ULB ಇಸಾಕನು, <<ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು>> ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು. BSB BSB: “Serve me,” said Isaac, “and let me eat some of my son’s game, so that I may bless you.” Jacob brought it to him, and he ate; then he brought him wine, and he drank.
26 ULB ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, <<ಮಗನೇ, ನೀನು ಹತ್ತಿರ ಬಂದು ನನಗೆ ಮುದ್ದಿಡು>> ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುದ್ದಿಟ್ಟನು. BSB BSB: Then his father Isaac said to him, “Please come near and kiss me, my son.”
27 ULB ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ, <<ಆಹಾ, ನನ್ನ ಮಗನ ಸುವಾಸನೆಯು, ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು. BSB BSB: So he came near and kissed him. When Isaac smelled his clothing, he blessed him and said: “Ah, the smell of my son is like the smell of a field that the LORD has blessed.
28 ULB ದೇವರು ನಿನಗೆ ಆಕಾಶದ ಮಂಜನ್ನೂ, ಸಾರವುಳ್ಳ ಭೂಮಿಯನ್ನೂ ಕೊಟ್ಟು ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ. BSB BSB: May God give to you the dew of heaven and the richness of the earth—an abundance of grain and new wine.
29 ULB ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ>> ಎಂದನು. BSB BSB: May peoples serve you and nations bow down to you. May you be the master of your brothers, and may the sons of your mother bow down to you. May those who curse you be cursed, and those who bless you be blessed.”
30 ULB ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು. BSB BSB: As soon as Isaac had finished blessing him and Jacob had left his father’s presence, his brother Esau returned from the hunt.
31 ULB ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, <<ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು>> ಎಂದು ಹೇಳಿದನು. BSB BSB: He too made some tasty food, brought it to his father, and said to him, “My father, sit up and eat of your son’s game, so that you may bless me.”
32 ULB ಅವನ ತಂದೆಯಾದ ಇಸಾಕನು, <<ನೀನು ಯಾರು?>> ಎಂದು ಅವನನ್ನು ಕೇಳಲು ಅವನು, <<ನಾನು ನಿನ್ನ ಚೊಚ್ಚಲ ಮಗನಾದ ಏಸಾವನು>> ಎಂದನು. BSB BSB: But his father Isaac replied, “Who are you?” “I am Esau, your firstborn son,” he answered.
33 ULB ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, <<ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು>> ಎಂದನು. BSB BSB: Isaac began to tremble violently and said, “Who was it, then, who hunted the game and brought it to me? Before you came in, I ate it all and blessed him—and indeed, he will be blessed!”
34 ULB ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, <<ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು>> ಎಂದು ಬೇಡಿಕೊಳ್ಳಲು ಇಸಾಕನು, BSB BSB: When Esau heard his father’s words, he let out a loud and bitter cry and said to his father, “Bless me too, O my father!”
35 ULB <<ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು>> ಎಂದನು. BSB BSB: But Isaac replied, “Your brother came deceitfully and took your blessing.”
36 ULB ಅದಕ್ಕೆ ಏಸಾವನು,<< ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ>> ಎಂದು ಹೇಳಿ ತನ್ನ ತಂದೆಯನ್ನು, <<ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ>> ಎಂದು ಕೇಳಲು, BSB BSB: So Esau declared, “Is he not rightly named Jacob? For he has cheated me twice. He took my birthright, and now he has taken my blessing.” Then he asked, “Haven’t you saved a blessing for me?”
37 ULB ಇಸಾಕನು ಏಸಾವನಿಗೆ, <<ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ>> ಎಂದನು. BSB BSB: But Isaac answered Esau: “Look, I have made him your master and given him all his relatives as servants; I have sustained him with grain and new wine. What is left that I can do for you, my son?”
38 ULB ಏಸಾವನು ಅವನಿಗೆ, <<ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು>> ಎಂದು ಹೇಳಿ ಗೋಳಾಡುತ್ತಾ ಅಳಲು, BSB BSB: Esau said to his father, “Do you have only one blessing, my father? Bless me too, O my father!” Then Esau wept aloud.
39 ULB ಅವನ ತಂದೆಯಾದ ಇಸಾಕನು ಅವನಿಗೆ, <<ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು. BSB BSB: His father Isaac answered him: “Behold, your dwelling place shall be away from the richness of the land, away from the dew of heaven above.
40 ULB ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ>> ಎಂದು ಹೇಳಿದನು. BSB BSB: You shall live by the sword and serve your brother. But when you rebel, you will tear his yoke from your neck.”
41 ULB ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, <<ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು>> ಎಂದುಕೊಂಡನು. BSB BSB: Esau held a grudge against Jacob because of the blessing his father had given him. And Esau said in his heart, “The days of mourning for my father are at hand; then I will kill my brother Jacob.”
42 ULB ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, <<ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ. BSB BSB: When the words of her older son Esau were relayed to Rebekah, she sent for her younger son Jacob and told him, “Look, your brother Esau is consoling himself by plotting to kill you.
43 ULB ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು. BSB BSB: So now, my son, obey my voice and flee at once to my brother Laban in Haran.
44 ULB ಕೆಲವು ಕಾಲ, ನಿನ್ನ ಅಣ್ಣನ ಕೋಪವು ಶಮನವಾಗುವ ವರೆಗೂ ಅವನ ಬಳಿಯಲ್ಲೇ ಇರು. BSB BSB: Stay with him for a while, until your brother’s fury subsides—
45 ULB ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?>> ಎಂದು ಹೇಳಿದಳು. BSB BSB: until your brother’s rage against you wanes and he forgets what you have done to him. Then I will send for you and bring you back from there. Why should I lose both of you in one day?”
46 ULB ರೆಬೆಕ್ಕಳು ಇಸಾಕನಿಗೆ, <<ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?>> ಎಂದು ಹೇಳಿದಳು. BSB BSB: Then Rebekah said to Isaac, “I am weary of my life because of these Hittite women. If Jacob takes a Hittite wife from among them, what good is my life?”