2 ULB ಆ ಸ್ತ್ರೀಯು ಸರ್ಪಕ್ಕೆ, <<ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು, BSB BSB: The woman answered the serpent, “We may eat the fruit of the trees of the garden,
3 ULB ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, <ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ> ಎಂದು ದೇವರು ಹೇಳಿದ್ದಾನೆ>> ಅಂದಳು. BSB BSB: but about the fruit of the tree in the middle of the garden, God has said, ‘You must not eat of it or touch it, or you will die.’”
4 ULB ಆಗ ಸರ್ಪವು ಸ್ತ್ರೀಗೆ, <<ನೀವು ನಿಶ್ಚಯವಾಗಿ ಸಾಯುವುದಿಲ್ಲ. BSB BSB: “You will not surely die,” the serpent told the woman.
5 ULB ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು>> ಎಂದು ಹೇಳಿತು. BSB BSB: “For God knows that in the day you eat of it, your eyes will be opened and you will be like God, knowing good and evil.”
6 ULB ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು. BSB BSB: When the woman saw that the tree was good for food and pleasing to the eyes, and that it was desirable for obtaining wisdom, she took the fruit and ate it. She also gave some to her husband who was with her, and he ate it.
7 ULB ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು. BSB BSB: And the eyes of both of them were opened, and they knew that they were naked; so they sewed together fig leaves and made coverings for themselves.
9 ULB ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, <<ನೀನು ಎಲ್ಲಿದ್ದೀ?>> ಎಂದು ಕೇಳಿದನು. BSB BSB: But the LORD God called out to the man, “Where are you?”
10 ULB ಅದಕ್ಕೆ ಅವನು, <<ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು>> ಎಂದನು. BSB BSB: “I heard Your voice in the garden,” he replied, “and I was afraid because I was naked; so I hid myself.”
11 ULB ಅದಕ್ಕಾತನು, <<ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?>> ಎಂದು ಕೇಳಿದನು. BSB BSB: “Who told you that you were naked?” asked the LORD God. “Have you eaten from the tree of which I commanded you not to eat?”
12 ULB ಅದಕ್ಕೆ ಆ ಮನುಷ್ಯನು, <<ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು>> ಎಂದು ಹೇಳಿದನು. BSB BSB: And the man answered, “The woman whom You gave me, she gave me fruit from the tree, and I ate it.”
13 ULB ಯೆಹೋವನಾದ ದೇವರು ಆ ಸ್ತ್ರೀಗೆ, <<ಇದೇನು ನೀನು ಮಾಡಿದ್ದು?>> ಎಂದು ಕೇಳಲು, ಆ ಸ್ತ್ರೀಯು, <<ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು>> ಎಂದು ಉತ್ತರ ಕೊಟ್ಟಳು. BSB BSB: Then the LORD God said to the woman, “What is this you have done?” “The serpent deceived me,” she replied, “and I ate.”
14 ULB ಆಗ ಯೆಹೋವನಾದ ದೇವರು ಸರ್ಪಕ್ಕೆ; <<ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ. BSB BSB: So the LORD God said to the serpent: “Because you have done this, cursed are you above all livestock and every beast of the field! On your belly will you go, and dust you will eat, all the days of your life.
15 ULB ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ>> ಎಂದು ಹೇಳಿದನು. BSB BSB: And I will put enmity between you and the woman, and between your seed and her seed. He will crush your head, and you will strike his heel.”
16 ULB ಆ ನಂತರ ಆ ಸ್ತ್ರೀಗೆ, <<ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು>> ಎಂದು ಹೇಳಿದನು. BSB BSB: To the woman He said: “I will sharply increase your pain in childbirth; in pain you will bring forth children. Your desire will be for your husband, and he will rule over you.”
18 ULB ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು. BSB BSB: Both thorns and thistles it will yield for you, and you will eat the plants of the field.
19 ULB ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ>> ಎಂದು ಹೇಳಿದನು. BSB BSB: By the sweat of your brow you will eat your bread, until you return to the ground—because out of it were you taken. For dust you are, and to dust you shall return.”
21 ULB ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು. BSB BSB: And the LORD God made garments of skin for Adam and his wife, and He clothed them.
22 ULB ಯೆಹೋವ ದೇವರು <<ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು>> ಎಂದು ಆಜ್ಞಾಪಿಸಿದನು. BSB BSB: Then the LORD God said, “Behold, the man has become like one of Us, knowing good and evil. And now, lest he reach out his hand and take also from the tree of life, and eat, and live forever...”
23 ULB ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು. BSB BSB: Therefore the LORD God banished him from the Garden of Eden to work the ground from which he had been taken.
24 ULB ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು. BSB BSB: So He drove out the man and stationed cherubim on the east side of the Garden of Eden, along with a whirling sword of flame to guard the way to the tree of life.