1 ULB <<ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು>> ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು. BSB BSB: Now Jacob heard that Laban’s sons were saying, “Jacob has taken away all that belonged to our father and built all this wealth at our father’s expense.”
2 ULB ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ. BSB BSB: And Jacob saw from the countenance of Laban that his attitude toward him had changed.
3 ULB ಮತ್ತು ಯೆಹೋವನು ಯಾಕೋಬನಿಗೆ, <<ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು>> ಎಂದು ಹೇಳಿದನು. BSB BSB: Then the LORD said to Jacob, “Go back to the land of your fathers and to your kindred, and I will be with you.”
4 ULB ಹೀಗಿರುವುದರಿಂದ ಯಾಕೋಬನು ರಾಹೇಲಳನ್ನೂ, ಲೇಯಳನ್ನೂ, ತನ್ನ ಆಡುಕುರಿಗಳ ಹಿಂಡನ್ನು ಮೇಯಿಸುತ್ತಿದ್ದ ಅಡವಿಗೆ ಕರೆಕಳುಹಿಸಿ BSB BSB: So Jacob sent word and called Rachel and Leah to the field where his flocks were,
5 ULB ಅವರಿಗೆ ಹೇಳಿದ್ದೇನಂದರೆ, <<ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ. BSB BSB: and he told them, “I can see from your father’s countenance that his attitude toward me has changed; but the God of my father has been with me.
6 ULB ನಾನು ನಿಮ್ಮ ತಂದೆಯ ಸೇವೆಯನ್ನು ಪೂರ್ಣಬಲದಿಂದ ಮಾಡಿದ್ದೇನೆ, ನೀವೂ ಅದನ್ನು ಬಲ್ಲಿರಿ. BSB BSB: You know that I have served your father with all my strength.
7 ULB ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ. BSB BSB: And although he has cheated me and changed my wages ten times, God has not allowed him to harm me.
8 ULB ನಿಮ್ಮ ತಂದೆ ನನಗೆ, <ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ> ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು <ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ> ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು. BSB BSB: If he said, ‘The speckled will be your wages,’ then the whole flock bore speckled offspring. If he said, ‘The streaked will be your wages,’ then the whole flock bore streaked offspring.
9 ULB ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು, ಪಶುಪ್ರಾಣಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು. BSB BSB: Thus God has taken away your father’s livestock and given them to me.
10 ULB <<ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು. BSB BSB: When the flocks were breeding, I saw in a dream that the streaked, spotted, and speckled males were mating with the females.
11 ULB ಆ ಕನಸಿನಲ್ಲಿ ದೇವದೂತನು, <ಯಾಕೋಬನೇ> ಎಂದು ಕರೆಯಲು ನಾನು, <ಇದ್ದೇನೆ> ಎಂದು ಹೇಳಿದಾಗ BSB BSB: In that dream the angel of God said to me, ‘Jacob!’ And I replied, ‘Here I am.’
12 ULB ಆತನು ನನಗೆ, <ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ. BSB BSB: ‘Look up,’ he said, ‘and see that all the males that are mating with the flock are streaked, spotted, or speckled; for I have seen all that Laban has done to you.
13 ULB ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು>>> ಎಂದು ಹೇಳಿದನು. BSB BSB: I am the God of Bethel, where you anointed the pillar and made a solemn vow to Me. Now get up, leave this land at once, and return to your native land.’”
14 ULB ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, <<ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ? BSB BSB: And Rachel and Leah replied, “Do we have any portion or inheritance left in our father’s house?
15 ULB ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ. BSB BSB: Are we not regarded by him as outsiders? Not only has he sold us, but he has certainly squandered what was paid for us.
16 ULB ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು>> ಎಂದು ಉತ್ತರ ಕೊಟ್ಟರು. BSB BSB: Surely all the wealth that God has taken away from our father belongs to us and to our children. So do whatever God has told you.”
17 ULB ಆಗ ಯಾಕೋಬನು ತನ್ನ ಮಕ್ಕಳನ್ನೂ, ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು. BSB BSB: Then Jacob got up and put his children and his wives on camels,
18 ULB ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು. BSB BSB: and he drove all his livestock before him, along with all the possessions he had acquired in Paddan-aram, to go to his father Isaac in the land in Canaan.
19 ULB ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು. BSB BSB: Now while Laban was out shearing his sheep, Rachel stole her father’s household idols.
20 ULB ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು. BSB BSB: Moreover, Jacob deceived Laban the Aramean by not telling him that he was running away.
21 ULB ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು. BSB BSB: So he fled with all his possessions, crossed the Euphrates, and headed for the hill country of Gilead.
22 ULB ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು, BSB BSB: On the third day Laban was informed that Jacob had fled.
23 ULB ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು. BSB BSB: So he took his relatives with him, pursued Jacob for seven days, and overtook him in the hill country of Gilead.
24 ULB ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, <<ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು>> ಎಂದನು. BSB BSB: But that night God came to Laban the Aramean in a dream and warned him, “Be careful not to say anything to Jacob, either good or bad.”
25 ULB ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು. BSB BSB: Now Jacob had pitched his tent in the hill country of Gilead when Laban overtook him, and Laban and his relatives camped there as well.
26 ULB ಲಾಬಾನನು ಯಾಕೋಬನಿಗೆ, <<ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ. BSB BSB: Then Laban said to Jacob, “What have you done? You have deceived me and carried off my daughters like captives of war!
27 ULB ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು. BSB BSB: Why did you run away secretly and deceive me, without even telling me? I would have sent you away with joy and singing, with tambourines and harps.
28 ULB ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ. BSB BSB: But you did not even let me kiss my grandchildren and my daughters goodbye. Now you have done a foolish thing.
29 ULB ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, <ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು> ಎಂದು ಹೇಳಿದನು. BSB BSB: I have power to do you great harm, but last night the God of your father said to me, ‘Be careful not to say anything to Jacob, either good or bad.’
30 ULB ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?>> ಎಂದು ಕೇಳಿದನು. BSB BSB: Now you have gone off because you long for your father’s house. But why have you stolen my gods?”
31 ULB ಅದಕ್ಕೆ ಯಾಕೋಬನು ಲಾಬಾನನಿಗೆ, <<ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು. BSB BSB: “I was afraid,” Jacob answered, “for I thought you would take your daughters from me by force.
32 ULB ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ>> ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ. BSB BSB: If you find your gods with anyone here, he shall not live! In the presence of our relatives, see for yourself if anything is yours, and take it back.” For Jacob did not know that Rachel had stolen the idols.
33 ULB ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು. BSB BSB: So Laban went into Jacob’s tent, then Leah’s tent, and then the tents of the two maidservants, but he found nothing. Then he left Leah’s tent and entered Rachel’s tent.
34 ULB ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ. BSB BSB: Now Rachel had taken Laban’s household idols, put them in the saddlebag of her camel, and was sitting on them. And Laban searched everything in the tent but found nothing.
35 ULB ರಾಹೇಲಳು ತನ್ನ ತಂದೆಗೆ, <<ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ>> ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು. BSB BSB: Rachel said to her father, “Sir, do not be angry that I cannot stand up before you; for I am having my period.” So Laban searched but could not find the household idols.
36 ULB ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, <<ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು? BSB BSB: Then Jacob became incensed and challenged Laban. “What is my crime?” he said. “For what sin of mine have you so hotly pursued me?
37 ULB ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ. BSB BSB: You have searched all my goods! Have you found anything that belongs to you? Put it here before my brothers and yours, that they may judge between the two of us.
38 ULB <<ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ. BSB BSB: I have been with you for twenty years now. Your sheep and goats have not miscarried, nor have I eaten the rams of your flock.
39 ULB ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ. BSB BSB: I did not bring you anything torn by wild beasts; I bore the loss myself. And you demanded payment from me for what was stolen by day or night.
40 ULB ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು. BSB BSB: As it was, the heat consumed me by day and the frost by night, and sleep fled from my eyes.
41 ULB ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ. BSB BSB: Thus for twenty years I have served in your household—fourteen years for your two daughters and six years for your flocks—and you have changed my wages ten times!
42 ULB ನನ್ನ ತಂದೆಯಾದ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು>> ಎಂದನು. BSB BSB: If the God of my father, the God of Abraham and the Fear of Isaac, had not been with me, surely by now you would have sent me away empty-handed. But God has seen my affliction and the toil of my hands, and last night He rendered judgment.”
43 ULB ಅದಕ್ಕೆ ಲಾಬಾನನು ಯಾಕೋಬನಿಗೆ, <<ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ? BSB BSB: But Laban answered Jacob, “These daughters are my daughters, these sons are my sons, and these flocks are my flocks! Everything you see is mine! Yet what can I do today about these daughters of mine or the children they have borne?
44 ULB ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ>> ಎಂದು ಹೇಳಿದನು. BSB BSB: Come now, let us make a covenant, you and I, and let it serve as a witness between you and me.”
45 ULB ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು. BSB BSB: So Jacob picked out a stone and set it up as a pillar,
46 ULB ಯಾಕೋಬನು ತನ್ನ ಕಡೆಯವರಿಗೆ, <<ಕಲ್ಲುಗಳನ್ನು ಕೂಡಿಸಿರಿ>> ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು. BSB BSB: and he said to his relatives, “Gather some stones.” So they took stones and made a mound, and there by the mound they ate.
47 ULB ಆ ಗುಡ್ಡೆಗೆ ಲಾಬಾನನು<< ಯಗರಸಾಹದೂತ>> ಎಂದೂ ಯಾಕೋಬನು<< ಗಲೇದ್>> ಎಂದೂ ಹೆಸರಿಟ್ಟರು. BSB BSB: Laban called it Jegar-sahadutha, and Jacob called it Galeed.
48 ULB ಆಗ ಲಾಬಾನನು, <<ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ>> ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು. BSB BSB: Then Laban declared, “This mound is a witness between you and me this day.” Therefore the place was called Galeed.
49 ULB ಅದಲ್ಲದೆ ಅವನು, <<ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು>> ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು BSB BSB: It was also called Mizpah, because Laban said, “May the LORD keep watch between you and me when we are absent from each other.
50 ULB ಮತ್ತು ಲಾಬಾನನು, <<ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ>> ಎಂದನು. BSB BSB: If you mistreat my daughters or take other wives, although no one is with us, remember that God is a witness between you and me.”
51 ULB ಇದಲ್ಲದೆ ಲಾಬಾನನು ಯಾಕೋಬನಿಗೆ, <<ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಸ್ತಂಭವನ್ನು ನೋಡು, ಈ ಗುಡ್ಡೆಯನ್ನೂ ನೋಡು. BSB BSB: Laban also said to Jacob, “Here is the mound, and here is the pillar I have set up between you and me.
52 ULB ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ. BSB BSB: This mound is a witness, and this pillar is a witness, that I will not go past this mound to harm you, and you will not go past this mound and pillar to harm me.
53 ULB ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ>> ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು. BSB BSB: May the God of Abraham and the God of Nahor, the God of their father, judge between us.” So Jacob swore by the Fear of his father Isaac.
54 ULB ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು. BSB BSB: Then Jacob offered a sacrifice on the mountain and invited his relatives to eat a meal. And after they had eaten, they spent the night on the mountain.
55 ULB ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು. BSB BSB: Early the next morning, Laban got up and kissed his grandchildren and daughters and blessed them. Then he left to return home.