1 ULB ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು. BSB BSB: Jacob also went on his way, and the angels of God met him.
2 ULB ಯಾಕೋಬನು ಅವರನ್ನು ನೋಡಿದಾಗ, <<ಇದು ದೇವರ ಸೇನಾನಿವೇಶ>> ಎಂದು ಹೇಳಿ ಆ ಸ್ಥಳಕ್ಕೆ<< ಮಹನಯಿಮ್>> ಎಂದು ಹೆಸರಿಟ್ಟನು. BSB BSB: When Jacob saw them, he said, “This is the camp of God.” So he named that place Mahanaim.
3 ULB ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು. BSB BSB: Jacob sent messengers ahead of him to his brother Esau in the land of Seir, the country of Edom.
4 ULB ಕಳುಹಿಸುವಾಗ ಅವರಿಗೆ <<ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, <ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು BSB BSB: He instructed them, “You are to say to my master Esau, ‘Your servant Jacob says: I have been staying with Laban and have remained there until now.
5 ULB ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ>>> ಎಂದು ಹೇಳಿರಿ ಅಂದನು. BSB BSB: I have oxen, donkeys, flocks, menservants, and maidservants. I have sent this message to inform my master, so that I may find favor in your sight.’”
6 ULB ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, <<ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ>> ಎಂದು ಹೇಳಿದಾಗ, BSB BSB: When the messengers returned to Jacob, they said, “We went to your brother Esau, and now he is coming to meet you—he and four hundred men with him.”
7 ULB ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು. BSB BSB: In great fear and distress, Jacob divided his people into two camps, as well as the flocks and herds and camels.
8 ULB ಏಕೆಂದರೆ, <<ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು>> ಅಂದುಕೊಂಡನು. BSB BSB: He thought, “If Esau comes and attacks one camp, then the other camp can escape.”
9 ULB ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, <<ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, <ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು> ನನಗೆ ವಾಗ್ದಾನ ಮಾಡಿದ ಯೆಹೋವನೇ, BSB BSB: Then Jacob declared, “O God of my father Abraham, God of my father Isaac, the LORD who told me, ‘Go back to your country and to your kindred, and I will make you prosper,’
10 ULB ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ. BSB BSB: I am unworthy of all the kindness and faithfulness You have shown Your servant. Indeed, with only my staff I came across the Jordan, but now I have become two camps.
11 ULB ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ, BSB BSB: Please deliver me from the hand of my brother Esau, for I am afraid that he may come and attack me and the mothers and children with me.
12 ULB <ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?>>> ಎಂದನು. BSB BSB: But You have said, ‘I will surely make you prosper, and I will make your offspring like the sand of the sea, too numerous to count.’”
13 ULB ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು. BSB BSB: Jacob spent the night there, and from what he had brought with him, he selected a gift for his brother Esau:
14 ULB ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ BSB BSB: 200 female goats, 20 male goats, 200 ewes, 20 rams,
15 ULB ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು. BSB BSB: 30 milk camels with their young, 40 cows, 10 bulls, 20 female donkeys, and 10 male donkeys.
16 ULB ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, <<ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ>> ಎಂದನು. BSB BSB: He entrusted them to his servants in separate herds and told them, “Go on ahead of me, and keep some distance between the herds.”
17 ULB ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, <<ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, <ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?>>> ಎಂದು ಕೇಳಿದರೆ, BSB BSB: He instructed the one in the lead, “When my brother Esau meets you and asks, ‘To whom do you belong, where are you going, and whose animals are these before you?’
18 ULB ಆಗ ನೀನು, <<ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ>> ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು. BSB BSB: then you are to say, ‘They belong to your servant Jacob. They are a gift, sent to my lord Esau. And behold, Jacob is behind us.’”
19 ULB ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, <<ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ>> ಎಂದು ಅಪ್ಪಣೆಕೊಟ್ಟನು. BSB BSB: He also instructed the second, the third, and all those following behind the herds: “When you meet Esau, you are to say the same thing to him.
20 ULB ಯಾಕೋಬನು ತನ್ನೊಳಗೆ, <<ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ>> ಎಂದುಕೊಂಡನು. BSB BSB: You are also to say, ‘Look, your servant Jacob is right behind us.’” For he thought, “I will appease Esau with the gift that is going before me. After that I can face him, and perhaps he will accept me.”
21 ULB ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು. BSB BSB: So Jacob’s gifts went on before him, while he spent the night in the camp.
22 ULB ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು. BSB BSB: During the night Jacob got up and took his two wives, his two maidservants, and his eleven sons, and crossed the ford of the Jabbok.
23 ULB ಅವರನ್ನೂ, ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ BSB BSB: He took them and sent them across the stream, along with all his possessions.
24 ULB ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. BSB BSB: So Jacob was left all alone, and there a man wrestled with him until daybreak.
25 ULB ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು. BSB BSB: When the man saw that he could not overpower Jacob, he struck the socket of Jacob’s hip and dislocated it as they wrestled.
26 ULB ಆ ಪುರುಷನು, <<ನನ್ನನ್ನು ಬಿಡು, ಬೆಳಗಾಗುತ್ತಿದೆ>> ಎನ್ನಲು, ಯಾಕೋಬನು, <<ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ>> ಎಂದನು. BSB BSB: Then the man said, “Let me go, for it is daybreak.” But Jacob replied, “I will not let you go unless you bless me.”
27 ULB ಆ ಪುರುಷನು, <<ನಿನ್ನ ಹೆಸರೇನು?>> ಎಂದು ಕೇಳಿದ್ದಕ್ಕೆ ಅವನು, <<ಯಾಕೋಬನು>> ಎಂದಾಗ, BSB BSB: “What is your name?” the man asked. “Jacob,” he replied.
28 ULB ಅವನು ಯಾಕೋಬನಿಗೆ, <<ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ <ಇಸ್ರಾಯೇಲ್> ಎಂದು ಹೆಸರಾಗುವುದು>> ಎಂದು ಹೇಳಿದನು. BSB BSB: Then the man said, “Your name will no longer be Jacob, but Israel, because you have struggled with God and with men, and you have prevailed.”
29 ULB ಯಾಕೋಬನು, <<ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು>> ಎಂದು ಅವನನ್ನು ಕೇಳಿಕೊಂಡಾಗ ಆತನು, <<ನನ್ನ ಹೆಸರನ್ನು ವಿಚಾರಿಸುವುದೇಕೆ?>> ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು. BSB BSB: And Jacob requested, “Please tell me your name.” But he replied, “Why do you ask my name?” Then he blessed Jacob there.
30 ULB ಆಗ ಯಾಕೋಬನು, <<ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ>> ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು, BSB BSB: So Jacob named the place Peniel, saying, “Indeed, I have seen God face to face, and yet my life was spared.”
31 ULB ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು. BSB BSB: The sun rose above him as he passed by Penuel, and he was limping because of his hip.
32 ULB ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ. BSB BSB: Therefore to this day the Israelites do not eat the tendon attached to the socket of the hip, because the socket of Jacob’s hip was struck near that tendon.