1 ULB ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ BSB BSB: Now Jacob looked up and saw Esau coming toward him with four hundred men. So he divided the children among Leah, Rachel, and the two maidservants.
2 ULB ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು. BSB BSB: He put the maidservants and their children in front, Leah and her children next, and Rachel and Joseph at the rear.
3 ULB ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು. BSB BSB: But Jacob himself went on ahead and bowed to the ground seven times as he approached his brother.
4 ULB ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು. BSB BSB: Esau, however, ran to him and embraced him, threw his arms around his neck, and kissed him. And they both wept.
5 ULB ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, <<ನಿನ್ನ ಜೊತೆಯಲ್ಲಿರುವ ಜನರು ಯಾರು?>> ಎಂದು ಕೇಳಲು ಯಾಕೋಬನು ಅವನಿಗೆ, <<ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು>> ಎಂದು ಹೇಳಿದನು. BSB BSB: When Esau looked up and saw the women and children, he asked, “Who are these with you?” Jacob answered, “These are the children God has graciously given your servant.”
6 ULB ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು. BSB BSB: Then the maidservants and their children approached and bowed down.
7 ULB ಆ ಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು. ಕೊನೆಗೆ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು. BSB BSB: Leah and her children also approached and bowed down, and then Joseph and Rachel approached and bowed down.
8 ULB ಏಸಾವನು, <<ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?>> ಎಂದು ಕೇಳಲು ಯಾಕೋಬನು, <<ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು>> ಎಂದನು. BSB BSB: “What do you mean by sending this whole company to meet me?” asked Esau. “To find favor in your sight, my lord,” Jacob answered.
9 ULB ಏಸಾವನು ಅದಕ್ಕೆ, <<ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ>> ಎನ್ನಲು, BSB BSB: “I already have plenty, my brother,” Esau replied. “Keep what belongs to you.”
10 ULB ಯಾಕೋಬನು, <<ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ. BSB BSB: But Jacob insisted, “No, please! If I have found favor in your sight, then receive this gift from my hand. For indeed, I have seen your face, and it is like seeing the face of God, since you have received me favorably.
11 ULB ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು>> ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು. BSB BSB: Please accept my gift that was brought to you, because God has been gracious to me and I have all I need.” So Jacob pressed him until he accepted.
12 ULB ತರುವಾಯ ಏಸಾವನು, <<ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ಮುಂದಾಗಿ ಹೋಗುತ್ತೇನೆ>> ಎಂದನು. BSB BSB: Then Esau said, “Let us be on our way, and I will go ahead of you.”
13 ULB ಅದಕ್ಕೆ ಯಾಕೋಬನು, <<ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು. BSB BSB: But Jacob replied, “My lord knows that the children are frail, and I must care for sheep and cattle that are nursing their young. If they are driven hard for even a day, all the animals will die.
14 ULB ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ>> ಎಂದನು. BSB BSB: Please let my lord go ahead of his servant. I will continue on slowly, at a comfortable pace for the livestock and children, until I come to my lord at Seir.”
15 ULB ಏಸಾವನು, <<ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ>> ಎನ್ನಲು ಯಾಕೋಬನು, <<ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು>> ಎಂದು ಹೇಳಿದನು. BSB BSB: “Let me leave some of my people with you,” Esau said. But Jacob replied, “Why do that? Let me find favor in the sight of my lord.”
16 ULB ಹೀಗೆ ಏಸಾವನು ಆ ದಿನವೇ ಸೇಯೀರ್ ಸೀಮೆಗೆ ಹೊರಟುಹೋದನು. BSB BSB: So that day Esau started on his way back to Seir,
17 ULB ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ <<ಸುಕ್ಕೋತ್>> ಎಂದು ಹೆಸರಾಯಿತು. BSB BSB: but Jacob went on to Succoth, where he built a house for himself and shelters for his livestock; that is why the place was called Succoth.
18 ULB ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು. BSB BSB: After Jacob had come from Paddan-aram, he arrived safely at the city of Shechem in the land of Canaan, and he camped just outside the city.
19 ULB ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ. BSB BSB: And the plot of ground where he pitched his tent, he purchased from the sons of Hamor, Shechem’s father, for a hundred pieces of silver.
20 ULB ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ<< ಏಲ್ ಎಲೋಹೆ ಇಸ್ರಾಯೇಲ್>> ಎಂದು ಹೆಸರಿಟ್ಟನು. BSB BSB: There he set up an altar and called it El-Elohe-Israel.