1 ULB ದೇವರು ಯಾಕೋಬನಿಗೆ, <<ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು>> ಎಂದು ಹೇಳಿದನು. BSB BSB: Then God said to Jacob, “Arise, go up to Bethel, and settle there. Build an altar there to the God who appeared to you when you fled from your brother Esau.”
2 ULB ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ <<ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ, BSB BSB: So Jacob told his household and all who were with him, “Get rid of the foreign gods that are among you. Purify yourselves and change your garments.
3 ULB ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ>> ಎಂದು ಹೇಳಿದನು. BSB BSB: Then let us arise and go to Bethel. I will build an altar there to God, who answered me in my day of distress. He has been with me wherever I have gone.”
4 ULB ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು. BSB BSB: So they gave Jacob all their foreign gods and all their earrings, and Jacob buried them under the oak near Shechem.
5 ULB ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ. BSB BSB: As they set out, a terror from God fell over the surrounding cities, so that they did not pursue Jacob’s sons.
6 ULB ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು. BSB BSB: So Jacob and everyone with him arrived in Luz (that is, Bethel) in the land of Canaan.
7 ULB ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು. BSB BSB: There Jacob built an altar, and he called that place El-bethel, because it was there that God had revealed Himself to Jacob as he fled from his brother.
8 ULB ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು. BSB BSB: Now Deborah, Rebekah’s nurse, died and was buried under the oak below Bethel. So Jacob named it Allon-bacuth.
9 ULB ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು. BSB BSB: After Jacob had returned from Paddan-aram, God appeared to him again and blessed him.
10 ULB ದೇವರು ಅವನಿಗೆ, <<ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ <ಇಸ್ರಾಯೇಲ್> ಎಂದು ಕರೆಯಿಸಿಕೊಳ್ಳುವೆ>> ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು. BSB BSB: And God said to him, “Though your name is Jacob, you will no longer be called Jacob. Instead, your name will be Israel.” So God named him Israel.
11 ULB ದೇವರು ಅವನಿಗೆ, <<ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು. BSB BSB: And God told him, “I am God Almighty. Be fruitful and multiply. A nation—even a company of nations—shall come from you, and kings shall descend from you.
12 ULB ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು>> ಎಂದು ಹೇಳಿದನು. BSB BSB: The land that I gave to Abraham and Isaac I will give to you, and I will give this land to your descendants after you.”
13 ULB ಅನಂತರ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದನು. BSB BSB: Then God went up from the place where He had spoken with him.
14 ULB ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು. BSB BSB: So Jacob set up a pillar in the place where God had spoken with him—a stone marker—and he poured out a drink offering on it and anointed it with oil.
15 ULB ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ <<ಬೇತೇಲ್>> ಎಂದು ಹೆಸರಿಟ್ಟನು. BSB BSB: Jacob called the place where God had spoken with him Bethel.
16 ULB ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು. BSB BSB: Later, they set out from Bethel, and while they were still some distance from Ephrath, Rachel began to give birth, and her labor was difficult.
17 ULB ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, <<ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು>> ಎಂದು ಹೇಳಿದಳು. BSB BSB: During her severe labor, the midwife said to her, “Do not be afraid, for you are having another son.”
18 ULB ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ,<< ಬೆನೋನಿ>> ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ,<< ಬೆನ್ಯಾಮೀನ>> ಎಂದು ಹೆಸರಿಟ್ಟನು. BSB BSB: And with her last breath—for she was dying—she named him Ben-oni. But his father called him Benjamin.
19 ULB ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು. BSB BSB: So Rachel died and was buried on the way to Ephrath (that is, Bethlehem).
20 ULB ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ <<ರಾಹೇಲಳ ಸಮಾಧಿಯ ಸ್ತಂಭ>> ಎಂದೇ ಎನಿಸಿಕೊಂಡಿದೆ. BSB BSB: Jacob set up a pillar on her grave; it marks Rachel’s tomb to this day.
21 ULB ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು. BSB BSB: Israel again set out and pitched his tent beyond the Tower of Eder.
22 ULB ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು. BSB BSB: While Israel was living in that region, Reuben went in and slept with his father’s concubine Bilhah, and Israel heard about it. Jacob had twelve sons:
23 ULB ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್. BSB BSB: The sons of Leah were Reuben the firstborn of Jacob, Simeon, Levi, Judah, Issachar, and Zebulun.
24 ULB ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು. BSB BSB: The sons of Rachel were Joseph and Benjamin.
25 ULB ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ. BSB BSB: The sons of Rachel’s maidservant Bilhah were Dan and Naphtali.
26 ULB ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ. BSB BSB: And the sons of Leah’s maidservant Zilpah were Gad and Asher. These are the sons of Jacob, who were born to him in Paddan-aram.
27 ULB ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ. BSB BSB: Jacob returned to his father Isaac at Mamre, near Kiriath-arba (that is, Hebron), where Abraham and Isaac had stayed.
28 ULB ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು. BSB BSB: And Isaac lived 180 years.
29 ULB ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು. BSB BSB: Then he breathed his last and died and was gathered to his people, old and full of years. And his sons Esau and Jacob buried him.