1 ULB ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು. BSB BSB: About that time, Judah left his brothers and settled near a man named Hirah, an Adullamite.
2 ULB ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು ಅವಳನ್ನು ಮದುವೆ ಮಾಡಿಕೊಂಡನು BSB BSB: There Judah saw the daughter of a Canaanite man named Shua, and he took her as a wife and slept with her.
3 ULB ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು ಅದಕ್ಕೆ ಯೆಹೂದನು <<ಏರ್>> ಎಂದು ಹೆಸರಿಟ್ಟನು. BSB BSB: So she conceived and gave birth to a son, and Judah named him Er.
4 ULB ಅವಳು ಎರಡನೆಯ ಸಾರಿ ಬಸುರಾಗಿ ಗಂಡು ಮಗುವನ್ನು ಹೆತ್ತಾಗ ಅದಕ್ಕೆ <<ಓನಾನ್>> ಎಂದು ಹೆಸರಿಟ್ಟಳು. BSB BSB: Again she conceived and gave birth to a son, and she named him Onan.
5 ULB ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ <<ಶೇಲಹ>> ಎಂದು ಹೆಸರಿಟ್ಟಳು. ಅವಳು ಆ ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು. BSB BSB: Then she gave birth to another son and named him Shelah; it was at Chezib that she gave birth to him.
6 ULB ಯೆಹೂದನು ತನ್ನ ಚೊಚ್ಚಲು ಮಗನಾದ ಏರನಿಗೆ <<ತಾಮಾರ್>> ಎಂಬ ಹೆಣ್ಣನ್ನು ತಂದು ಮದುವೆ ಮಾಡಿಸಿದನು. BSB BSB: Now Judah acquired a wife for Er, his firstborn, and her name was Tamar.
7 ULB ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು. BSB BSB: But Er, Judah’s firstborn, was wicked in the sight of the LORD; so the LORD put him to death.
8 ULB ಬಳಿಕ ಯೆಹೂದನು ಓನಾನನಿಗೆ, <<ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು>> ಎಂದನು. BSB BSB: Then Judah said to Onan, “Sleep with your brother’s wife. Perform your duty as her brother-in-law and raise up offspring for your brother.”
9 ULB ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು. BSB BSB: But Onan knew that the offspring would not belong to him; so whenever he would sleep with his brother’s wife, he would spill his seed on the ground so that he would not produce offspring for his brother.
10 ULB ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು. BSB BSB: What he did was wicked in the sight of the LORD, so He put Onan to death as well.
11 ULB ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, <<ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು>> ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು. BSB BSB: Then Judah said to his daughter-in-law Tamar, “Live as a widow in your father’s house until my son Shelah grows up.” For he thought, “He may die too, like his brothers.” So Tamar went to live in her father’s house.
12 ULB ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು. BSB BSB: After a long time Judah’s wife, the daughter of Shua, died. When Judah had finished mourning, he and his friend Hirah the Adullamite went up to his sheepshearers at Timnah.
13 ULB ಆಗ ತಾಮಾರಳಿಗೆ, <<ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ>> ಎಂದು ತಿಳಿದು ಬಂದಿತು BSB BSB: When Tamar was told, “Your father-in-law is going up to Timnah to shear his sheep,”
14 ULB ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು. BSB BSB: she removed her widow’s garments, covered her face with a veil to disguise herself, and sat at the entrance to Enaim, which is on the way to Timnah. For she saw that although Shelah had grown up, she had not been given to him as a wife.
15 ULB ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು. BSB BSB: When Judah saw her, he thought she was a prostitute because she had covered her face.
16 ULB ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, <<ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು>> ಆಕೆ, <<ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?>> ಎಂದು ಕೇಳಿದಳು. BSB BSB: Not realizing that she was his daughter-in-law, he went over to her and said, “Come now, let me sleep with you.” “What will you give me for sleeping with you?” she inquired.
17 ULB ಅವನು, <<ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ>> ಅಂದಾಗ ಆಕೆ, <<ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು>> ಎಂದು ಹೇಳಿದ್ದಕ್ಕೆ, BSB BSB: “I will send you a young goat from my flock,” Judah answered. But she replied, “Only if you leave me something as a pledge until you send it.”
18 ULB ಅವನು, <<ಏನು ಒತ್ತೇ ಇಡಲಿ>> ಎಂದು ಕೇಳಿದನು. ಆಗ ಆಕೆಯು <<ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು>> ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು. BSB BSB: “What pledge should I give you?” he asked. She answered, “Your seal and your cord, and the staff in your hand.” So he gave them to her and slept with her, and she became pregnant by him.
19 ULB ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು. BSB BSB: Then Tamar got up and departed. And she removed her veil and put on her widow’s garments again.
20 ULB ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ. BSB BSB: Now when Judah sent his friend Hirah the Adullamite with the young goat to collect the items he had left with the woman, he could not find her.
21 ULB ಅವನು ಅವಳ ಊರಿನವರನ್ನು, <<ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು>> ಎಂದು ಕೇಳಿದ್ದಕ್ಕೆ ಅವರು, <<ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ>> ಎಂದರು. BSB BSB: He asked the men of that place, “Where is the shrine prostitute who was beside the road at Enaim?” “No shrine prostitute has been here,” they answered.
22 ULB ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, <<ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು>> ಎಂದು ತಿಳಿಸಿದನು. BSB BSB: So Hirah returned to Judah and said, “I could not find her, and furthermore, the men of that place said, ‘No shrine prostitute has been here.’”
23 ULB ಅದಕ್ಕೆ ಯೆಹೂದನು, <<ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ>> ಎಂದನು. BSB BSB: “Let her keep the items,” Judah replied. “Otherwise we will become a laughingstock. After all, I did send her this young goat, but you could not find her.”
24 ULB ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, <<ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ>> ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, <<ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು>> ಎಂದು ಹೇಳಿದನು. BSB BSB: About three months later, Judah was told, “Your daughter-in-law Tamar has prostituted herself, and now she is pregnant.” “Bring her out!” Judah replied. “Let her be burned to death!”
25 ULB ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, <<ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು>> ಎಂದು ಕೇಳಿಕೊಂಡಳು. BSB BSB: As she was being brought out, Tamar sent a message to her father-in-law: “I am pregnant by the man to whom these items belong.” And she added, “Please examine them. Whose seal and cord and staff are these?”
26 ULB ಯೆಹೂದನು ಅವುಗಳ ಗುರುತನ್ನು ತಿಳಿದು, <<ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು>> ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ. BSB BSB: Judah recognized the items and said, “She is more righteous than I, since I did not give her to my son Shelah.” And he did not have relations with her again.
27 ULB ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು. BSB BSB: When the time came for Tamar to give birth, there were twins in her womb.
28 ULB ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, <<ಇದು ಮೊದಲು ಹೊರಗೆ ಬಂದದ್ದು>> ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು. BSB BSB: And as she was giving birth, one of them put out his hand; so the midwife took a scarlet thread and tied it around his wrist. “This one came out first,” she announced.
29 ULB ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, <<ನೀನು ಛೇದಿಸಿಕೊಂಡು ಬಂದೆಯಾ?>> ಎಂದು ಹೇಳಿ, ಅದಕ್ಕೆ<< ಪೆರೆಚ್>> ಎಂದು ಹೆಸರಾಯಿತು. BSB BSB: But when he pulled his hand back and his brother came out, she said, “You have broken out first!” So he was named Perez.
30 ULB ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ<< ಜೆರಹ>> ಎಂದು ಹೆಸರಾಯಿತು. BSB BSB: Then his brother came out with the scarlet thread around his wrist, and he was named Zerah.