1 ULB ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು. BSB BSB: Now the famine was still severe in the land.
2 ULB ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, <<ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ>> ಎಂದನು. BSB BSB: So when Jacob’s sons had eaten all the grain they had brought from Egypt, their father said to them, “Go back and buy us a little more food.”
3 ULB ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, <<ಆ ಮನುಷ್ಯನು ನಮಗೆ <ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು> ಎಂದು ಖಂಡಿತವಾಗಿ>> ಹೇಳಿದ್ದಾನೆ. BSB BSB: But Judah replied, “The man solemnly warned us, ‘You will not see my face again unless your brother is with you.’
4 ULB ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ. BSB BSB: If you will send our brother with us, we will go down and buy food for you.
5 ULB ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ <<ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು>> ಎಂದು ಹೇಳಿದ್ದಾನೆ. BSB BSB: But if you will not send him, we will not go; for the man told us, ‘You will not see my face again unless your brother is with you.’”
6 ULB ಅದಕ್ಕೆ ಇಸ್ರಾಯೇಲನು, <<ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?>> ಎಂದು ಹೇಳಿದನು. BSB BSB: “Why did you bring this trouble upon me?” Israel asked. “Why did you tell the man you had another brother?”
7 ULB ಅವರು, <<ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿದನು, ಮತ್ತೆ ಅವನು ನಿಮ್ಮ ತಂದೆಯು ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ನಾವು ಉತ್ತರಕೊಟ್ಟೆವು. ಅವನು ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂದು ನಮಗೆ ಹೇಗೆ ತಿಳಿಯುವುದು>> ಎಂದರು. BSB BSB: They replied, “The man questioned us in detail about ourselves and our family: ‘Is your father still alive? Do you have another brother?’ And we answered him accordingly. How could we possibly know that he would say, ‘Bring your brother here’?”
8 ULB ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, <<ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು. BSB BSB: And Judah said to his father Israel, “Send the boy with me, and we will go at once, so that we may live and not die—neither we, nor you, nor our children.
9 ULB ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ. BSB BSB: I will guarantee his safety. You may hold me personally responsible. If I do not bring him back and set him before you, then may I bear the guilt before you all my life.
10 ULB ನಾವು ತಡಮಾಡದೆ ಹೋಗಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು>> ಎಂದು ಹೇಳಿದನು. BSB BSB: If we had not delayed, we could have come and gone twice by now.”
11 ULB ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, <<ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ. BSB BSB: Then their father Israel said to them, “If it must be so, then do this: Put some of the best products of the land in your packs and carry them down as a gift for the man—a little balm and a little honey, spices and myrrh, pistachios and almonds.
12 ULB ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು. BSB BSB: Take double the silver with you so that you may return the silver that was put back into the mouths of your sacks. Perhaps it was a mistake.
13 ULB ನಿಮ್ಮ ತಮ್ಮನನ್ನೂ ಕರೆದುಕೊಂಡು, ತಿರುಗಿ ಆ ಮನುಷ್ಯನ ಬಳಿಗೆ ಹೋಗಿರಿ. BSB BSB: Take your brother as well, and return to the man at once.
14 ULB ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ>> ಎಂದು ಹೇಳಿದನು. BSB BSB: May God Almighty grant you mercy before the man, that he may release your other brother along with Benjamin. As for me, if I am bereaved, I am bereaved.”
15 ULB ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು. BSB BSB: So the men took these gifts, along with double the amount of silver, and Benjamin as well. Then they hurried down to Egypt and stood before Joseph.
16 ULB ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, <<ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು>> ಎಂದು ಅಪ್ಪಣೆಕೊಟ್ಟನು. BSB BSB: When Joseph saw Benjamin with his brothers, he said to the steward of his house, “Take these men to my house. Slaughter an animal and prepare it, for they shall dine with me at noon.”
17 ULB ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು. BSB BSB: The man did as Joseph had commanded and took the brothers to Joseph’s house.
18 ULB ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, <<ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ>> ಎಂದುಕೊಂಡರು. BSB BSB: But the brothers were frightened that they had been taken to Joseph’s house. “We have been brought here because of the silver that was returned in our bags the first time,” they said. “They intend to overpower us and take us as slaves, along with our donkeys.”
19 ULB ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ, BSB BSB: So they approached Joseph’s steward and spoke to him at the entrance to the house.
20 ULB <<ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು. BSB BSB: “Please, sir,” they said, “we really did come down here the first time to buy food.
21 ULB ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ. BSB BSB: But when we came to the place we lodged for the night, we opened our sacks and, behold, each of us found his silver in the mouth of his sack! It was the full amount of our silver, and we have brought it back with us.
22 ULB ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು>> ಎಂದು ಹೇಳಿದರು. BSB BSB: We have brought additional silver with us to buy food. We do not know who put our silver in our sacks.”
23 ULB ಅದಕ್ಕೆ ಅವನು, <<ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು>> ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು. BSB BSB: “It is fine,” said the steward. “Do not be afraid. Your God, the God of your father, gave you the treasure that was in your sacks. I received your silver.” Then he brought Simeon out to them.
24 ULB ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು. BSB BSB: And the steward took the men into Joseph’s house, gave them water to wash their feet, and provided food for their donkeys.
25 ULB ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು. BSB BSB: Since the brothers had been told that they were going to eat a meal there, they prepared their gift for Joseph’s arrival at noon.
26 ULB ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು. BSB BSB: When Joseph came home, they presented him with the gifts they had brought, and they bowed to the ground before him.
27 ULB ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, <<ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?>> ಎಂದು ಕೇಳಿದನು. BSB BSB: He asked if they were well, and then he asked, “How is your elderly father you told me about? Is he still alive?”
28 ULB ಅವರು ಅದಕ್ಕೆ, <<ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ>> ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು. BSB BSB: “Your servant our father is well,” they answered. “He is still alive.” And they bowed down to honor him.
29 ULB ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, <<ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?>> ಎಂದು ಕೇಳಿ ಅವನಿಗೆ, <<ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ>> ಎಂದು ಹೇಳಿದನು. BSB BSB: When Joseph looked up and saw his brother Benjamin, his own mother’s son, he asked, “Is this your youngest brother, the one you told me about?” Then he declared, “May God be gracious to you, my son.”
30 ULB ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. BSB BSB: Joseph hurried out because he was moved to tears for his brother, and he went to a private room to weep.
31 ULB ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, <<ಊಟಕ್ಕೆ ಬಡಿಸಿರಿ>> ಎಂದು ಅಪ್ಪಣೆ ಕೊಟ್ಟನು. BSB BSB: Then he washed his face and came back out. Regaining his composure, he said, “Serve the meal.”
32 ULB ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು. BSB BSB: They separately served Joseph, his brothers, and the Egyptians. They ate separately because the Egyptians would not eat with the Hebrews, since that was detestable to them.
33 ULB ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು. BSB BSB: They were seated before Joseph in order by age, from the firstborn to the youngest, and the men looked at one another in astonishment.
34 ULB ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು. BSB BSB: When the portions were served to them from Joseph’s table, Benjamin’s portion was five times larger than any of the others. So they feasted and drank freely with Joseph.