1 ULB ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, <<ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ>> ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ. BSB BSB: Then Joseph could no longer control himself before all his attendants, and he cried out, “Send everyone away from me!” So none of them were with Joseph when he made himself known to his brothers.
2 ULB ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು. BSB BSB: But he wept so loudly that the Egyptians heard him, and Pharaoh’s household soon heard of it.
3 ULB ಅವನು, <<ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?>> ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು. BSB BSB: Joseph said to his brothers, “I am Joseph! Is my father still alive?” But they were unable to answer him, because they were terrified in his presence.
4 ULB ಯೋಸೇಫನು, <<ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ>> ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ <<ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ. BSB BSB: Then Joseph said to his brothers, “Please come near me.” And they did so. “I am Joseph, your brother,” he said, “the one you sold into Egypt!
5 ULB ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. BSB BSB: And now, do not be distressed or angry with yourselves that you sold me into this place, because it was to save lives that God sent me before you.
6 ULB ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ. BSB BSB: For the famine has covered the land these two years, and there will be five more years without plowing or harvesting.
7 ULB ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು. BSB BSB: God sent me before you to preserve you as a remnant on the earth and to save your lives by a great deliverance.
8 ULB <<ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ. BSB BSB: Therefore it was not you who sent me here, but God, who has made me a father to Pharaoh—lord of all his household and ruler over all the land of Egypt.
9 ULB ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, <ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ. BSB BSB: Now return quickly to my father and tell him, ‘This is what your son Joseph says: God has made me lord of all Egypt. Come down to me without delay.
10 ULB ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು. BSB BSB: You shall settle in the land of Goshen and be near me—you and your children and grandchildren, your flocks and herds, and everything you own.
11 ULB ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು> ಹೇಳುತ್ತಾನೆ ಎಂಬುದಾಗಿ ತಿಳಿಸಿರಿ. BSB BSB: And there I will provide for you, because there will be five more years of famine. Otherwise, you and your household and everything you own will come to destitution.’
12 ULB <<ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ. BSB BSB: Behold! You and my brother Benjamin can see that I, Joseph, am the one speaking with you.
13 ULB ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು>> ಎಂದು ಹೇಳಿ, BSB BSB: Tell my father about all my splendor in Egypt and everything you have seen. And bring my father down here quickly.”
14 ULB ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು. BSB BSB: Then Joseph threw his arms around his brother Benjamin and wept, and Benjamin wept as they embraced.
15 ULB ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು. BSB BSB: Joseph kissed each of his brothers as he wept over them. And afterward his brothers talked with him.
16 ULB ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು. BSB BSB: When the news reached Pharaoh’s house that Joseph’s brothers had come, Pharaoh and his servants were pleased.
17 ULB ಫರೋಹನು ಯೋಸೇಫನನ್ನು ಕರೆಯಿಸಿ, <<ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ <ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ, BSB BSB: Pharaoh said to Joseph, “Tell your brothers, ‘Do as follows: Load your animals and return to the land of Canaan.
18 ULB ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ. BSB BSB: Then bring your father and your families and return to me. I will give you the best of the land of Egypt, and you shall eat from the fat of the land.’
19 ULB ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ. BSB BSB: You are also directed to tell them: ‘Take wagons from the land of Egypt for your young children and your wives, and bring your father and come back.
20 ULB ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ>>> ಎಂದು ಹೇಳಿದನು. BSB BSB: But pay no regard to your belongings, for the best of all the land of Egypt is yours.’”
21 ULB ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು. BSB BSB: So the sons of Israel did as they were told. Joseph gave them wagons as Pharaoh had instructed, and he also gave them provisions for their journey.
22 ULB ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು. BSB BSB: He gave new garments to each of them, but to Benjamin he gave three hundred shekels of silver and five sets of clothes.
23 ULB ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು. BSB BSB: And he sent to his father the following: ten donkeys loaded with the best of Egypt, and ten female donkeys loaded with grain and bread and provisions for his father’s journey.
24 ULB ಆಗ ತನ್ನ ಅಣ್ಣತಮ್ಮಂದಿರಿಗೆ, <<ನೀವು ದಾರಿಯಲ್ಲಿ ಜಗಳಮಾಡಬೇಡಿರಿ>> ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು. BSB BSB: Then Joseph sent his brothers on their way, and as they were leaving, he said to them, “Do not quarrel on the way!”
25 ULB ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು. BSB BSB: So the brothers went up out of Egypt and came to their father Jacob in the land of Canaan.
26 ULB ಅವನಿಗೆ, <<ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ>> ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ. BSB BSB: “Joseph is still alive,” they said, “and he is ruler over all the land of Egypt!” But Jacob was stunned, for he did not believe them.
27 ULB ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು. BSB BSB: However, when they relayed all that Joseph had told them, and when he saw the wagons that Joseph had sent to carry him back, the spirit of their father Jacob was revived.
28 ULB ಆಗ ಇಸ್ರಾಯೇಲನು, <<ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು>> ಎಂದನು. BSB BSB: “Enough!” declared Israel. “My son Joseph is still alive! I will go to see him before I die.”