1 ULB ಕೆಲವು ಕಾಲವಾದ ಮೇಲೆ ಯೋಸೇಫನಿಗೆ, <<ಅವನ ತಂದೆಯು ಅಸ್ವಸ್ಥನಾಗಿದ್ದಾನೆ>> ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು. BSB BSB: Some time later Joseph was told, “Your father is ill.” So he set out with his two sons, Manasseh and Ephraim.
2 ULB <<ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ>> ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು. BSB BSB: When Jacob was told, “Your son Joseph has come to you,” Israel rallied his strength and sat up in bed.
3 ULB ಯಾಕೋಬನು, ಯೋಸೇಫನಿಗೆ, <<ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು. BSB BSB: Jacob said to Joseph, “God Almighty appeared to me at Luz in the land of Canaan, and there He blessed me
4 ULB ಆತನು ನನಗೆ, <ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು>>> ಎಂದು ಹೇಳಿದನು. BSB BSB: and told me, ‘Behold, I will make you fruitful and multiply you; I will make you a multitude of peoples, and will give this land to your descendants after you as an everlasting possession.’
5 ULB ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ. BSB BSB: And now your two sons born to you in Egypt before I came to you here shall be reckoned as mine; Ephraim and Manasseh shall be mine, just as Reuben and Simeon are mine.
6 ULB ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸ್ವತ್ತಿನಲ್ಲಿ ಬಾಧ್ಯತೆ ಹೊಂದಿ, ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ. BSB BSB: Any children born to you after them shall be yours, and they shall be called by the names of their brothers in the territory they inherit.
7 ULB ನಾನು ಪದ್ದನ್ ಅರಾಮಿನಿಂದ ಬರುವಾಗ ಕಾನಾನ್ ದೇಶದಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತುಹೋದಳು. ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದನು. BSB BSB: Now as for me, when I was returning from Paddan, to my sorrow Rachel died along the way in the land of Canaan, some distance from Ephrath. So I buried her there beside the road to Ephrath” (that is, Bethlehem).
8 ULB ನಂತರ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ, <<ಇವರು ಯಾರು?>> ಎಂದು ಕೇಳಲು, BSB BSB: When Israel saw the sons of Joseph, he asked, “Who are these?”
9 ULB ಯೋಸೇಫನು ತನ್ನ ತಂದೆಗೆ, <<ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು>> ಎಂದು ಹೇಳಿದನು. ಅದಕ್ಕವನು, <<ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ>> ಎಂದನು. BSB BSB: Joseph said to his father, “They are the sons God has given me in this place.” So Jacob said, “Please bring them to me, that I may bless them.”
10 ULB ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. BSB BSB: Now Israel’s eyesight was poor because of old age; he could hardly see. Joseph brought his sons to him, and his father kissed them and embraced them.
11 ULB ಆಗ ಇಸ್ರಾಯೇಲನು ಯೋಸೇಫನಿಗೆ, <<ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ>> ಎಂದನು. BSB BSB: “I never expected to see your face again,” Israel said to Joseph, “but now God has let me see your children as well.”
12 ULB ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು. BSB BSB: Then Joseph removed his sons from his father’s knees and bowed facedown.
13 ULB ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು. BSB BSB: And Joseph took both of them—with Ephraim in his right hand toward Israel’s left hand, and Manasseh in his left hand toward Israel’s right hand—and brought them close to him.
14 ULB ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು. BSB BSB: But Israel stretched out his right hand and put it on the head of Ephraim, the younger; and crossing his hands, he put his left on Manasseh’s head, although Manasseh was the firstborn.
15 ULB ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, <<ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು, BSB BSB: Then he blessed Joseph and said: “May the God before whom my fathers Abraham and Isaac walked, the God who has been my shepherd all my life to this day,
16 ULB ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ>> ಎಂದನು. BSB BSB: the angel who has redeemed me from all harm—may He bless these boys. And may they be called by my name and the names of my fathers Abraham and Isaac, and may they grow into a multitude upon the earth.”
17 ULB ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು, BSB BSB: When Joseph saw that his father had placed his right hand on Ephraim’s head, he was displeased and took his father’s hand to move it from Ephraim’s head to Manasseh’s.
18 ULB ಯೋಸೇಫನು ತಂದೆಗೆ, <<ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು>> ಎಂದು ಹೇಳಿದನು. BSB BSB: “Not so, my father!” Joseph said. “This one is the firstborn; put your right hand on his head.”
19 ULB ಆದರೆ ಅವನ ತಂದೆ ಒಪ್ಪದೆ, <<ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು>> ಎಂದು ಹೇಳಿದನು. BSB BSB: But his father refused. “I know, my son, I know!” he said. “He too shall become a people, and he too shall be great; nevertheless, his younger brother shall be greater than he, and his offspring shall become a multitude of nations.”
20 ULB ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, <<ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ>> ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು. BSB BSB: So that day Jacob blessed them and said: “By you shall Israel pronounce this blessing: ‘May God make you like Ephraim and Manasseh.’” So he put Ephraim before Manasseh.
21 ULB ಇಸ್ರಾಯೇಲನು ಯೋಸೇಫನಿಗೆ, <<ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು. BSB BSB: Then Israel said to Joseph, “Look, I am about to die, but God will be with you and bring you back to the land of your fathers.
22 ULB ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ>> ಎಂದು ಹೇಳಿದನು. BSB BSB: And to you, as one who is above your brothers, I give the ridge of land that I took from the Amorites with my sword and bow.”