2 ULB ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ <<ಮನುಷ್ಯ>> ಎಂದು ಹೆಸರಿಟ್ಟನು. BSB BSB: Male and female He created them, and He blessed them. And in the day they were created, He called them “man.”
4 ULB ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು. BSB BSB: And after he had become the father of Seth, Adam lived 800 years and had other sons and daughters.
5 ULB ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು. BSB BSB: So Adam lived a total of 930 years, and then he died.
6 ULB ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು. BSB BSB: When Seth was 105 years old, he became the father of Enosh.
7 ULB ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು. BSB BSB: And after he had become the father of Enosh, Seth lived 807 years and had other sons and daughters.
8 ULB ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು. BSB BSB: So Seth lived a total of 912 years, and then he died.
9 ULB ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು. BSB BSB: When Enosh was 90 years old, he became the father of Kenan.
10 ULB ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು. BSB BSB: And after he had become the father of Kenan, Enosh lived 815 years and had other sons and daughters.
11 ULB ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು. BSB BSB: So Enosh lived a total of 905 years, and then he died.
12 ULB ಕೇನಾನನು ಎಪ್ಪತ್ತು ವರ್ಷದವನಾದಾಗ, ಮಹಲಲೇಲನನ್ನು ಪಡೆದನು. BSB BSB: When Kenan was 70 years old, he became the father of Mahalalel.
13 ULB ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು. BSB BSB: And after he had become the father of Mahalalel, Kenan lived 840 years and had other sons and daughters.
14 ULB ಕೇನಾನನು ಒಟ್ಟು ಒಂಭೈನೂರ ಹತ್ತು ವರ್ಷ ಬದುಕಿ ನಂತರ ಸತ್ತನು. BSB BSB: So Kenan lived a total of 910 years, and then he died.
15 ULB ಮಹಲಲೇಲನು ಅರವತ್ತೈದು ವರ್ಷದವನಾದಾಗ ಯೆರೆದನನ್ನು ಪಡೆದನು. BSB BSB: When Mahalalel was 65 years old, he became the father of Jared.
16 ULB ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು. BSB BSB: And after he had become the father of Jared, Mahalalel lived 830 years and had other sons and daughters.
17 ULB ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು. BSB BSB: So Mahalalel lived a total of 895 years, and then he died.
18 ULB ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು. BSB BSB: When Jared was 162 years old, he became the father of Enoch.
19 ULB ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು. BSB BSB: And after he had become the father of Enoch, Jared lived 800 years and had other sons and daughters.
20 ULB ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು. BSB BSB: So Jared lived a total of 962 years, and then he died.
22 ULB ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು. BSB BSB: And after he had become the father of Methuselah, Enoch walked with God 300 years and had other sons and daughters.
23 ULB ಹನೋಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರ್ಷಗಳು. BSB BSB: So Enoch lived a total of 365 years.
24 ULB ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು. BSB BSB: Enoch walked with God, and then he was no more, because God had taken him away.
25 ULB ಮೆತೂಷೆಲಹನು ನೂರ ಎಂಭತ್ತೇಳು ವರ್ಷದವನಾದಾಗ ಲೆಮೆಕನನ್ನು ಪಡೆದನು. BSB BSB: When Methuselah was 187 years old, he became the father of Lamech.
26 ULB ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು. BSB BSB: And after he had become the father of Lamech, Methuselah lived 782 years and had other sons and daughters.
27 ULB ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು. BSB BSB: So Methuselah lived a total of 969 years, and then he died.
28 ULB ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು. BSB BSB: When Lamech was 182 years old, he had a son.
29 ULB ಅವನಿಗೆ <<ನೋಹ>> ಎಂದು ಹೆಸರಿಟ್ಟು, <<ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು>> ಎಂದು ಹೇಳಿದನು. BSB BSB: And he named him Noah, saying, “May this one comfort us in the labor and toil of our hands caused by the ground that the LORD has cursed.”
30 ULB ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು. BSB BSB: And after he had become the father of Noah, Lamech lived 595 years and had other sons and daughters.
31 ULB ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿ ನಂತರ ಸತ್ತನು. BSB BSB: So Lamech lived a total of 777 years, and then he died.
32 ULB ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು. BSB BSB: After Noah was 500 years old, he became the father of Shem, Ham, and Japheth.