1 ULB ಆಗ ಯೆಹೋವನು ನೋಹನಿಗೆ, <<ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ. BSB BSB: Then the LORD said to Noah, “Go into the ark, you and all your family, because I have found you righteous in this generation.
2 ULB ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು. BSB BSB: You are to take with you seven pairs of every kind of clean animal, a male and its mate; a pair of every kind of unclean animal, a male and its mate;
3 ULB ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು. BSB BSB: and seven pairs of every kind of bird of the air, male and female, to preserve their offspring on the face of all the earth.
4 ULB ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ>> ಎಂದು ಹೇಳಿದನು. BSB BSB: For seven days from now I will send rain on the earth for forty days and forty nights, and I will wipe from the face of the earth every living thing I have made.”
5 ULB ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು. BSB BSB: And Noah did all that the LORD had commanded him.
6 ULB ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು. BSB BSB: Now Noah was 600 years old when the floodwaters came upon the earth.
7 ULB ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು. BSB BSB: And Noah and his wife, with his sons and their wives, entered the ark to escape the waters of the flood.
8 ULB ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ BSB BSB: The clean and unclean animals, the birds, and everything that crawls along the ground
9 ULB ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು. BSB BSB: came to Noah to enter the ark, two by two, male and female, as God had commanded Noah.
10 ULB ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು. BSB BSB: And after seven days the floodwaters came upon the earth.
11 ULB ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು. BSB BSB: In the six hundredth year of Noah’s life, on the seventeenth day of the second month, all the fountains of the great deep burst forth, and the floodgates of the heavens were opened.
12 ULB ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು. BSB BSB: And the rain fell upon the earth for forty days and forty nights.
13 ULB ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು. BSB BSB: On that very day Noah entered the ark, along with his sons Shem, Ham, and Japheth, and his wife, and the three wives of his sons—
14 ULB ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ BSB BSB: they and every kind of wild animal, livestock, crawling creature, bird, and winged creature.
15 ULB ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು. BSB BSB: They came to Noah to enter the ark, two by two of every creature with the breath of life.
16 ULB ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು. BSB BSB: And they entered, the male and female of every living thing, as God had commanded Noah. Then the LORD shut him in.
17 ULB ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು. BSB BSB: For forty days the flood kept coming on the earth, and the waters rose and lifted the ark high above the earth.
18 ULB ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು. BSB BSB: So the waters continued to surge and rise greatly on the earth, and the ark floated on the surface of the waters.
19 ULB ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು. BSB BSB: Finally, the waters completely prevailed upon the earth, so that all the high mountains under all the heavens were covered.
20 ULB ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ, BSB BSB: The waters rose and covered the mountaintops to a depth of fifteen cubits.
21 ULB ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು. BSB BSB: And every living thing that moved upon the earth perished—birds, livestock, animals, every creature that swarms upon the earth, and all mankind.
22 ULB ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು. BSB BSB: Of all that was on dry land, everything that had the breath of life in its nostrils died.
23 ULB ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು. BSB BSB: And every living thing on the face of the earth was destroyed—man and livestock, crawling creatures and birds of the air; they were blotted out from the earth, and only Noah and those with him in the ark remained.
24 ULB ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು. BSB BSB: And the waters prevailed upon the earth for 150 days.