1 ULB ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ. BSB BSB: This is the burden that Habakkuk the prophet received in a vision:
3 ULB ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ. BSB BSB: Why do You make me see iniquity? Why do You tolerate wrongdoing? Destruction and violence are before me. Strife is ongoing, and conflict abounds.
4 ULB ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ. BSB BSB: Therefore the law is paralyzed, and justice never goes forth. For the wicked hem in the righteous, so that justice is perverted.
5 ULB ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ. BSB BSB: “Look at the nations and observe—be utterly astounded! For I am doing a work in your days that you would never believe even if someone told you.
6 ULB ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು. BSB BSB: For behold, I am raising up the Chaldeans—that ruthless and impetuous nation which marches through the breadth of the earth to seize dwellings not their own.
7 ULB ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು. BSB BSB: They are dreaded and feared; from themselves they derive justice and sovereignty.
8 ULB ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು. BSB BSB: Their horses are swifter than leopards, fiercer than wolves of the night. Their horsemen charge ahead, and their cavalry comes from afar. They fly like a vulture, swooping down to devour.
9 ULB ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು. BSB BSB: All of them come bent on violence; their hordes advance like the east wind; they gather prisoners like sand.
10 ULB ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು. BSB BSB: They scoff at kings and make rulers an object of scorn. They laugh at every fortress and build up siege ramps to seize it.
11 ULB ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು. BSB BSB: Then they sweep by like the wind and pass through. They are guilty; their own strength is their god.”
12 ULB ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ. BSB BSB: Are You not from everlasting, O LORD, my God, my Holy One? We will not die. O LORD, You have appointed them to execute judgment; O Rock, You have established them for correction.
13 ULB ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ? BSB BSB: Your eyes are too pure to look upon evil, and You cannot tolerate wrongdoing. So why do You tolerate the faithless? Why are You silent while the wicked swallow up those more righteous than themselves?
14 ULB ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ? BSB BSB: You have made men like the fish of the sea, like creeping things that have no ruler.
15 ULB ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ? BSB BSB: The foe pulls all of them up with a hook; he catches them in his dragnet, and gathers them in his fishing net; so he rejoices gladly.
16 ULB ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ. BSB BSB: Therefore he sacrifices to his dragnet and burns incense to his fishing net, for by these things his portion is sumptuous and his food is rich.
17 ULB ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ? BSB BSB: Will he, therefore, empty his net and continue to slay nations without mercy?