1 ULB ಶಿಗ್ಯೋನೋತ್ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. BSB BSB: This is a prayer of Habakkuk the prophet, according to Shigionoth:
2 ULB ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ. BSB BSB: O LORD, I have heard the report of You; I stand in awe, O LORD, of Your deeds. Revive them in these years; make them known in these years. In Your wrath, remember mercy!
4 ULB ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ. BSB BSB: His radiance was like the sunlight; rays flashed from His hand, where His power is hidden.
5 ULB ರೋಗಗಳು ಆತನಿಂದ ದೂರ ಓಡಿ ಹೋಗಿವೆ, ವ್ಯಾಧಿಯು ಆತನ ಹಿಂದೆ ಅಡಗಿಕೊಂಡಿದೆ. BSB BSB: Plague went before Him, and fever followed in His steps.
6 ULB ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು. BSB BSB: He stood and measured the earth; He looked and startled the nations; the ancient mountains crumbled; the perpetual hills collapsed. His ways are everlasting.
7 ULB ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ. BSB BSB: I saw the tents of Cushan in distress; the curtains of Midian were trembling.
8 ULB ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು! BSB BSB: Were You angry at the rivers, O LORD? Was Your wrath against the streams? Did You rage against the sea when You rode on Your horses, on Your chariots of salvation?
9 ULB ನಿನ್ನ ಬಿಲ್ಲು ಈಚೆಗೆ ತೆಗೆಯಲ್ಪಟ್ಟಿದೆ. ಆಹಾ, ನಿನ್ನ ತೋಳ್ಬಲದಿಂದ ಪ್ರಯೋಗಿಸಿದ ಬಾಣಗಳ ಬಲವು ಜೀವಬುಗ್ಗೆಯನ್ನು ಭೂಮಿಯೊಳಗಿನಿಂದ ಹರಿದು ಬರುವಂತೆ ಮಾಡಿತು. ಸೆಲಾ. BSB BSB: You brandished Your bow; You called for many arrows. Selah You split the earth with rivers.
10 ULB ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ. BSB BSB: The mountains saw You and quaked; torrents of water swept by. The deep roared with its voice and lifted its hands on high.
11 ULB ಹಾರಿ ಬರುವ ನಿನ್ನ ಹಾರುವ ಬಾಣಗಳ ಬೆಳಕಿಗೆ, ಥಳಥಳಿಸುವ ನಿನ್ನ ಮಿಂಚುವ ಈಟಿಯ ಹೊಳಪಿಗೆ, ಸೂರ್ಯಚಂದ್ರರು ಹೆದರಿ ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ. BSB BSB: Sun and moon stood still in their places at the flash of Your flying arrows, at the brightness of Your shining spear.
12 ULB ನೀನು ಕೋಪ ತಿರಸ್ಕಾರದಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ. ಕೋಪದಿಂದ ಜನಾಂಗಗಳನ್ನು ಇಲ್ಲದಂತೆ ಮಾಡುತ್ತಿ. BSB BSB: You marched across the earth with fury; You threshed the nations in wrath.
13 ULB ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ. BSB BSB: You went forth for the salvation of Your people, to save Your anointed. You crushed the head of the house of the wicked and stripped him from head to toe. Selah
14 ULB ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ BSB BSB: With his own spear You pierced his head, when his warriors stormed out to scatter us, gloating as though ready to secretly devour the weak.
15 ULB ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ. BSB BSB: You trampled the sea with Your horses, churning the great waters.
16 ULB ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು. BSB BSB: I heard and trembled within; my lips quivered at the sound. Decay entered my bones; I trembled where I stood. Yet I must wait patiently for the day of distress to come upon the people who invade us.
17 ULB ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ, BSB BSB: Though the fig tree does not bud and no fruit is on the vines, though the olive crop fails and the fields produce no food, though the sheep are cut off from the fold and no cattle are in the stalls,
18 ULB ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು. BSB BSB: yet I will exult in the LORD; I will rejoice in the God of my salvation!
19 ULB ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ಬೆಟ್ಟ ಗುಡ್ಡಗಳನ್ನು ಚುರುಕಾಗಿ ಓಡಲು ನನ್ನನ್ನು ಸಮರ್ಥನನ್ನಾಗಿಸುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. BSB BSB: GOD the Lord is my strength; He makes my feet like those of a deer; He makes me walk upon the heights! For the choirmaster. With stringed instruments.