2 ULB ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು. BSB BSB: This is why the ancients were commended.
3 ULB ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. BSB BSB: By faith we understand that the universe was formed at God’s command, so that what is seen was not made out of what was visible.
4 ULB ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ. BSB BSB: By faith Abel offered God a better sacrifice than Cain did. By faith he was commended as righteous when God gave approval to his gifts. And by faith he still speaks, even though he is dead.
7 ULB ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು. BSB BSB: By faith Noah, when warned about things not yet seen, in godly fear built an ark to save his family. By faith he condemned the world and became heir of the righteousness that comes by faith.
8 ULB ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು. BSB BSB: By faith Abraham, when called to go to a place he would later receive as his inheritance, obeyed and went, without knowing where he was going.
9 ULB ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು. BSB BSB: By faith he dwelt in the promised land as a stranger in a foreign country. He lived in tents, as did Isaac and Jacob, who were heirs with him of the same promise.
10 ULB ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು. BSB BSB: For he was looking forward to the city with foundations, whose architect and builder is God.
11 ULB ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು. BSB BSB: By faith Sarah, even though she was barren and beyond the proper age, was enabled to conceive a child, because she considered Him faithful who had promised.
12 ULB ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು. BSB BSB: And so from one man, and he as good as dead, came descendants as numerous as the stars in the sky and as countless as the sand on the seashore.
13 ULB ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು. BSB BSB: All these people died in faith, without having received the things they were promised. However, they saw them and welcomed them from afar. And they acknowledged that they were strangers and exiles on the earth.
14 ULB ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ. BSB BSB: Now those who say such things show that they are seeking a country of their own.
15 ULB ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು. BSB BSB: If they had been thinking of the country they had left, they would have had opportunity to return.
16 ULB ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ. BSB BSB: Instead, they were longing for a better country, a heavenly one. Therefore God is not ashamed to be called their God, for He has prepared a city for them.
19 ULB ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು. BSB BSB: Abraham reasoned that God could raise the dead, and in a sense, he did receive Isaac back from death.
20 ULB ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು. BSB BSB: By faith Isaac blessed Jacob and Esau concerning the future.
21 ULB ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು. BSB BSB: By faith Jacob, when he was dying, blessed each of Joseph’s sons and worshiped as he leaned on the top of his staff.
22 ULB ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು. BSB BSB: By faith Joseph, when his end was near, spoke about the exodus of the Israelites and gave instructions about his bones.
23 ULB ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು. BSB BSB: By faith Moses’ parents hid him for three months after his birth, because they saw that he was a beautiful child, and they were unafraid of the king’s edict.
24 ULB ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು. BSB BSB: By faith Moses, when he was grown, refused to be called the son of Pharaoh’s daughter.
25 ULB ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು. BSB BSB: He chose to suffer oppression with God’s people rather than to experience the fleeting enjoyment of sin.
26 ULB ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು. BSB BSB: He valued disgrace for Christ above the treasures of Egypt, for he was looking ahead to his reward.
27 ULB ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು. BSB BSB: By faith Moses left Egypt, not fearing the king’s anger; he persevered because he saw Him who is invisible.
28 ULB ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು. BSB BSB: By faith he kept the Passover and the sprinkling of blood, so that the destroyer of the firstborn would not touch Israel’s own firstborn.
29 ULB ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು. BSB BSB: By faith the people passed through the Red Sea as on dry land; but when the Egyptians tried to follow, they were drowned.
30 ULB ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು. BSB BSB: By faith the walls of Jericho fell, after the people had marched around them for seven days.
31 ULB ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು. BSB BSB: By faith the prostitute Rahab, because she welcomed the spies in peace, did not perish with those who were disobedient.
32 ULB ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು. BSB BSB: And what more shall I say? Time will not allow me to tell of Gideon, Barak, Samson, Jephthah, David, Samuel, and the prophets, 33 ULB ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., BSB BSB: who through faith conquered kingdoms, administered justice, and gained what was promised; who shut the mouths of lions,
34 ULB ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು. BSB BSB: quenched the raging fire, and escaped the edge of the sword; who gained strength from weakness, became mighty in battle, and put foreign armies to flight.
36 ULB ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು. BSB BSB: Still others endured mocking and flogging, and even chains and imprisonment.
37 ULB ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. BSB BSB: They were stoned, they were sawed in two, they were put to death by the sword. They went around in sheepskins and goatskins, destitute, oppressed, and mistreated.
38 ULB ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. BSB BSB: The world was not worthy of them. They wandered in deserts and mountains, and hid in caves and holes in the ground.
39 ULB ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ. BSB BSB: These were all commended for their faith, yet they did not receive what was promised.
40 ULB ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು. BSB BSB: God had planned something better for us, so that together with us they would be made perfect.
Select verses for actions: Enter goes to them and Escape comes back.