1 ULB ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು. BSB BSB: We must pay closer attention, therefore, to what we have heard, so that we do not drift away.
2 ULB ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು. BSB BSB: For if the message spoken by angels was binding, and every transgression and disobedience received its just punishment,
3 ULB ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು. BSB BSB: how shall we escape if we neglect such a great salvation? This salvation was first announced by the Lord, was confirmed to us by those who heard Him,
4 ULB ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು. BSB BSB: and was affirmed by God through signs, wonders, various miracles, and gifts of the Holy Spirit distributed according to His will.
5 ULB ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ. BSB BSB: For it is not to angels that He has subjected the world to come, about which we are speaking.
6 ULB <<ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು? BSB BSB: But somewhere it is testified in these words: “What is man that You are mindful of him, or the son of man that You care for him?
7 ULB ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ. BSB BSB: You made him a little lower than the angels; You crowned him with glory and honor
8 ULB ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ>> ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ. BSB BSB: and placed everything under his feet.” When God subjected all things to him, He left nothing outside of his control. Yet at present we do not see everything subject to him.
9 ULB ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ. BSB BSB: But we see Jesus, who was made a little lower than the angels, now crowned with glory and honor because He suffered death, so that by the grace of God He might taste death for everyone.
10 ULB ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು. BSB BSB: In bringing many sons to glory, it was fitting for God, for whom and through whom all things exist, to make the author of their salvation perfect through suffering.
11 ULB ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ. BSB BSB: For both the One who sanctifies and those who are sanctified are of the same family. So Jesus is not ashamed to call them brothers.
12 ULB <<ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು>> ಎಂತಲೂ, BSB BSB: He says: “I will proclaim Your name to My brothers; I will sing Your praises in the assembly.”
13 ULB <<ನಾನು ಆತನಲ್ಲಿ ಭರವಸವಿಡುವೆನು>> ಎಂತಲೂ, <<ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ>> ಎಂದೂ ಹೇಳುತ್ತಾನೆ. BSB BSB: And again: “I will put My trust in Him.” And once again: “Here am I, and the children God has given Me.”
14 ULB ಇದಲ್ಲದೆ ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, BSB BSB: Now since the children have flesh and blood, He too shared in their humanity, so that by His death He might destroy him who holds the power of death, that is, the devil,
17 ULB ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು. BSB BSB: For this reason He had to be made like His brothers in every way, so that He might become a merciful and faithful high priest in service to God, in order to make atonement for the sins of the people.
18 ULB ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ. BSB BSB: Because He Himself suffered when He was tempted, He is able to help those who are being tempted.
Select verses for actions: Enter goes to them and Escape comes back.