1 ULB ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ. BSB BSB: Therefore, holy brothers, who share in the heavenly calling, set your focus on Jesus, the apostle and high priest whom we confess.
2 ULB ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ. BSB BSB: He was faithful to the One who appointed Him, just as Moses was faithful in all God’s house.
3 ULB ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ. BSB BSB: For Jesus has been counted worthy of greater glory than Moses, just as the builder of a house has greater honor than the house itself.
4 ULB ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ. BSB BSB: And every house is built by someone, but God is the builder of everything.
5 ULB ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ. BSB BSB: Now Moses was faithful as a servant in all God’s house, testifying to what would be spoken later.
6 ULB ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ. BSB BSB: But Christ is faithful as the Son over God’s house. And we are His house, if we hold firmly to our confidence and the hope of which we boast.
7 ULB ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ,<< ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, BSB BSB: Therefore, as the Holy Spirit says: “Today, if you hear His voice,
8 ULB ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. BSB BSB: do not harden your hearts, as you did in the rebellion, in the day of testing in the wilderness,
9 ULB ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. BSB BSB: where your fathers tested and tried Me, and for forty years saw My works.
10 ULB ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, <ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ> ಎಂದು ನಾನು ಹೇಳಿದೆ. BSB BSB: Therefore I was angry with that generation, and I said, ‘Their hearts are always going astray, and they have not known My ways.’
11 ULB ಹೀಗಿರಲು <ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.>>> BSB BSB: So I swore on oath in My anger, ‘They shall never enter My rest.’”
12 ULB ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ. BSB BSB: See to it, brothers, that none of you has a wicked heart of unbelief that turns away from the living God.
13 ULB ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. BSB BSB: But exhort one another daily, as long as it is called today, so that none of you may be hardened by sin’s deceitfulness.
14 ULB ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ. BSB BSB: We have come to share in Christ if we hold firmly to the end the assurance we had at first.
15 ULB << ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.>> BSB BSB: As it has been said: “Today, if you hear His voice, do not harden your hearts, as you did in the rebellion.”
16 ULB ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ? BSB BSB: For who were the ones who heard and rebelled? Were they not all those Moses led out of Egypt?
17 ULB ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು. BSB BSB: And with whom was God angry for forty years? Was it not with those who sinned, whose bodies fell in the wilderness?
18 ULB ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ? BSB BSB: And to whom did He swear that they would never enter His rest? Was it not to those who disobeyed?
19 ULB ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ. BSB BSB: So we see that it was because of their unbelief that they were unable to enter.
Select verses for actions: Enter goes to them and Escape comes back.