1 ULB ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. BSB BSB: The point of what we are saying is this: We do have such a high priest, who sat down at the right hand of the throne of the Majesty in heaven,
2 ULB ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. BSB BSB: and who ministers in the sanctuary and true tabernacle set up by the Lord, not by man.
3 ULB ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ. BSB BSB: And since every high priest is appointed to offer both gifts and sacrifices, it was necessary for this One also to have something to offer.
4 ULB ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. BSB BSB: Now if He were on earth, He would not be a priest, since there are already priests who offer gifts according to the law.
5 ULB ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, <<ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು>> ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. BSB BSB: The place where they serve is a copy and shadow of what is in heaven. This is why Moses was warned when he was about to build the tabernacle: “See to it that you make everything according to the pattern shown you on the mountain.”
6 ULB ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. BSB BSB: Now, however, Jesus has received a much more excellent ministry, just as the covenant He mediates is better and is founded on better promises.
7 ULB ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. BSB BSB: For if that first covenant had been without fault, no place would have been sought for a second.
9 ULB <ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ> ಎಂದು ಕರ್ತನು ಹೇಳುತ್ತಾನೆ. BSB BSB: It will not be like the covenant I made with their fathers when I took them by the hand to lead them out of the land of Egypt, because they did not abide by My covenant, and I disregarded them, declares the Lord.
10 ULB <ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು> ಹೀಗಿರುವುದು, <ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು. BSB BSB: For this is the covenant I will make with the house of Israel after those days, declares the Lord. I will put My laws in their minds and inscribe them on their hearts. And I will be their God, and they will be My people.
11 ULB ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ <<ಕರ್ತನನ್ನು ತಿಳಿದುಕೊಳ್ಳಿರಿ>> ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. BSB BSB: No longer will each one teach his neighbor or his brother, saying, ‘Know the Lord,’ because they will all know Me, from the least of them to the greatest.
12 ULB ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ>>> ಎಂದು ಕರ್ತನು ನುಡಿಯುತ್ತಾನೆ. BSB BSB: For I will forgive their iniquities and will remember their sins no more.”
13 ULB ಆತನು <<ಹೊಸತು>> ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ. BSB BSB: By speaking of a new covenant, He has made the first one obsolete; and what is obsolete and aging will soon disappear.
Select verses for actions: Enter goes to them and Escape comes back.