1 ULB ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು. BSB BSB: This is the word of the LORD that came to Hosea son of Beeri in the days of Uzziah, Jotham, Ahaz, and Hezekiah, kings of Judah, and of Jeroboam son of Jehoash, king of Israel. 3 ULB ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ಕೊಟ್ಟಳು. BSB BSB: So Hosea went and married Gomer daughter of Diblaim, and she conceived and bore him a son.
5 ULB ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು>> ಎಂದನು. BSB BSB: And on that day I will break the bow of Israel in the Valley of Jezreel.”
6 ULB ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, <<ಈ ಮಗುವಿಗೆ <ಲೋ ರುಹಾಮ> ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ. BSB BSB: Gomer again conceived and gave birth to a daughter, and the LORD said to Hosea, “Name her Lo-ruhamah, for I will no longer have compassion on the house of Israel, that I should ever forgive them.
7 ULB ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು>> ಅಂದನು. BSB BSB: Yet I will have compassion on the house of Judah, and I will save them—not by bow or sword or war, not by horses and cavalry, but by the LORD their God.”
8 ULB ಆ ಕೂಸು ಮೊಲೆ ಬಿಟ್ಟ ಮೇಲೆ ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದಳು. BSB BSB: After she had weaned Lo-ruhamah, Gomer conceived and gave birth to a son.
9 ULB ಆಗ ಯೆಹೋವನು, <<ಈ ಮಗುವಿಗೆ <ಲೋ ಅಮ್ಮಿ> ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ>> ಎಂದನು. BSB BSB: And the LORD said, “Name him Lo-ammi, for you are not My people, and I am not your God.
10 ULB ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು. BSB BSB: Yet the number of the Israelites will be like the sand of the sea, which cannot be measured or counted. And it will happen that in the very place where it was said to them, ‘You are not My people,’ they will be called ‘sons of the living God.’
11 ULB ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು. BSB BSB: Then the people of Judah and of Israel will be gathered together, and they will appoint for themselves one leader, and will go up out of the land. For great will be the day of Jezreel.