1 ULB ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ. BSB BSB: Return, O Israel, to the LORD your God, for you have stumbled by your iniquity.
2 ULB ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, <<ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು. BSB BSB: Bring your confessions and return to the LORD. Say to Him: “Take away all our iniquity and receive us graciously, that we may present the fruit of our lips.
3 ULB ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, <ನೀವು ನಮ್ಮ ದೇವರುಗಳು> ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು>> ಎಂಬುದಾಗಿ ಅರಿಕೆಮಾಡಿಕೊಳ್ಳಿರಿ. BSB BSB: Assyria will not save us, nor will we ride on horses. We will never again say, ‘Our gods!’ to the work of our own hands. For in You the fatherless find compassion.”
4 ULB ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು. BSB BSB: I will heal their apostasy; I will freely love them, for My anger has turned away from them.
5 ULB ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು. BSB BSB: I will be like the dew to Israel; he will blossom like the lily and take root like the cedars of Lebanon.
6 ULB ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು. BSB BSB: His shoots will sprout, and his splendor will be like the olive tree, his fragrance like the cedars of Lebanon.
7 ULB ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು. BSB BSB: They will return and dwell in his shade; they will grow grain and blossom like the vine. His renown will be like the wine of Lebanon.
8 ULB ಎಫ್ರಾಯೀಮು, <<ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?>> ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ. BSB BSB: O Ephraim, what have I to do anymore with idols? It is I who answer and watch over him. I am like a flourishing cypress; your fruit comes from Me.
9 ULB ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು. BSB BSB: Whoever is wise, let him understand these things; whoever is discerning, let him know them. For the ways of the LORD are right, and the righteous walk in them but the rebellious stumble in them.