1 ULB ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ. BSB BSB: When I heal Israel, the iniquity of Ephraim will be exposed, as well as the crimes of Samaria. For they practice deceit and thieves break in; bandits raid in the streets.
2 ULB ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ. BSB BSB: But they fail to consider in their hearts that I remember all their evil. Now their deeds are all around them; they are before My face.
3 ULB ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ. BSB BSB: They delight the king with their evil, and the princes with their lies.
4 ULB ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ. BSB BSB: They are all adulterers, like an oven heated by a baker who needs not stoke the fire from the kneading to the rising of the dough.
5 ULB ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು. BSB BSB: The princes are inflamed with wine on the day of our king; so he joins hands with those who mock him.
6 ULB ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿ ಉರಿಯುತ್ತಿದ್ದಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ. BSB BSB: For they prepare their heart like an oven while they lie in wait; all night their anger smolders; in the morning it blazes like a flaming fire.
7 ULB ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ. BSB BSB: All of them are hot as an oven, and they devour their rulers. All their kings fall; not one of them calls upon Me.
8 ULB ಎಫ್ರಾಯೀಮು ಜನಾಂಗಗಳಲ್ಲಿ ಸೇರಿಕೊಳ್ಳುತ್ತದೆ; ಎಫ್ರಾಯೀಮು ತಿರುವಿಹಾಕದ ರೊಟ್ಟಿಯಂತಿದೆ. BSB BSB: Ephraim mixes with the nations; Ephraim is an unturned cake.
9 ULB ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ. BSB BSB: Foreigners consume his strength, but he does not notice. Even his hair is streaked with gray, but he does not know.
10 ULB ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ. BSB BSB: Israel’s arrogance testifies against them, yet they do not return to the LORD their God; despite all this, they do not seek Him.
11 ULB ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ. BSB BSB: So Ephraim has become like a silly, senseless dove—calling out to Egypt, then turning to Assyria.
12 ULB ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು. ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು. BSB BSB: As they go, I will spread My net over them; I will bring them down like birds of the air. I will chastise them when I hear them flocking together.
13 ULB ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ! BSB BSB: Woe to them, for they have strayed from Me! Destruction to them, for they have rebelled against Me! Though I would redeem them, they speak lies against Me.
14 ULB ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ. BSB BSB: They do not cry out to Me from their hearts when they wail upon their beds. They slash themselves for grain and new wine, but turn away from Me.
15 ULB ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ. BSB BSB: Although I trained and strengthened their arms, they plot evil against Me.
16 ULB ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು. BSB BSB: They turn, but not to the Most High; they are like a faulty bow. Their leaders will fall by the sword for the cursing of their tongue; for this they will be ridiculed in the land of Egypt.