1 ULB ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ. BSB BSB: Do not rejoice, O Israel, with exultation like the nations, for you have played the harlot against your God; you have made love for hire on every threshing floor.
2 ULB ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ; ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿ ಹೋಗುವುದು. BSB BSB: The threshing floor and winepress will not feed them, and the new wine will fail them.
3 ULB ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು. BSB BSB: They will not remain in the land of the LORD; Ephraim will return to Egypt and eat unclean food in Assyria.
4 ULB ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ. BSB BSB: They will not pour out wine offerings to the LORD, and their sacrifices will not please Him, but will be to them like the bread of mourners; all who eat will be defiled. For their bread will be for themselves; it will not enter the house of the LORD.
5 ULB ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ? BSB BSB: What will you do on the appointed day, on the day of the LORD’s feast?
6 ULB ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು. BSB BSB: For even if they flee destruction, Egypt will gather them and Memphis will bury them. Their precious silver will be taken over by thistles, and thorns will overrun their tents.
7 ULB ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, <<ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು>> ಅಂದುಕೊಳ್ಳುತ್ತೀ. BSB BSB: The days of punishment have come; the days of retribution have arrived—let Israel know it. The prophet is called a fool, and the inspired man insane, because of the greatness of your iniquity and hostility.
8 ULB ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ. BSB BSB: The prophet is Ephraim’s watchman, along with my God, yet the snare of the fowler lies on all his paths. Hostility is in the house of his God!
9 ULB ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು. BSB BSB: They have deeply corrupted themselves as in the days of Gibeah; He will remember their guilt; He will punish their sins.
11 ULB ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು. BSB BSB: Ephraim’s glory will fly away like a bird, with no birth, no pregnancy, and no conception.
12 ULB ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ! BSB BSB: Even if they raise their children, I will bereave them of each one. Yes, woe be to them when I turn away from them!
13 ULB ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು. BSB BSB: I have seen Ephraim, like Tyre, planted in a meadow. But Ephraim will bring out his children for slaughter.
14 ULB ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು. BSB BSB: Give them, O LORD—what will You give? Give them wombs that miscarry and breasts that dry up!
15 ULB ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ. BSB BSB: All their evil appears at Gilgal, for there I hated them. I will drive them from My house for the wickedness of their deeds. I will no longer love them; all their leaders are rebellious.
16 ULB ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು. BSB BSB: Ephraim is struck down; their root is withered; they cannot bear fruit. Even if they bear children, I will slay the darlings of their wombs.
17 ULB ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು. BSB BSB: My God will reject them because they have not obeyed Him; and they shall be wanderers among the nations.