2 ULB ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ. BSB BSB: Listen, O heavens, and give ear, O earth, for the LORD has spoken: “I have raised children and brought them up, but they have rebelled against Me.
3 ULB ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ. BSB BSB: The ox knows its owner, and the donkey its master’s manger, but Israel does not know; My people do not understand.”
4 ULB ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ. BSB BSB: Alas, O sinful nation, a people laden with iniquity, a brood of evildoers, children who act corruptly! They have forsaken the LORD; they have despised the Holy One of Israel and turned their backs on Him.
5 ULB ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. BSB BSB: Why do you want more beatings? Why do you keep rebelling? Your head has a massive wound, and your whole heart is afflicted.
6 ULB ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ. BSB BSB: From the sole of your foot to the top of your head, there is no soundness—only wounds and welts and festering sores neither cleansed nor bandaged nor soothed with oil.
7 ULB ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು. BSB BSB: Your land is desolate; your cities are burned with fire. Foreigners devour your fields before you—a desolation demolished by strangers.
8 ULB ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ. BSB BSB: And the Daughter of Zion is abandoned like a shelter in a vineyard, like a shack in a cucumber field, like a city besieged.
9 ULB ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು. BSB BSB: Unless the LORD of Hosts had left us a few survivors, we would have become like Sodom, we would have resembled Gomorrah.
10 ULB ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ. BSB BSB: Hear the word of the LORD, you rulers of Sodom; listen to the instruction of our God, you people of Gomorrah!
11 ULB ಯೆಹೋವನು ಹೀಗೆನ್ನುತ್ತಾನೆ, <<ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು. BSB BSB: “What good to Me is your multitude of sacrifices?” says the LORD. “I am full from the burnt offerings of rams and the fat of well-fed cattle; I take no delight in the blood of bulls and lambs and goats.
12 ULB ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು? BSB BSB: When you come to appear before Me, who has required this of you—this trampling of My courts?
13 ULB ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು. BSB BSB: Bring your worthless offerings no more; your incense is detestable to Me. New Moons, Sabbaths, and convocations—I cannot endure iniquity in a solemn assembly.
14 ULB ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ. BSB BSB: I hate your New Moons and your appointed feasts. They have become a burden to Me; I am weary of bearing them.
15 ULB ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ. BSB BSB: When you spread out your hands in prayer, I will hide My eyes from you; even though you multiply your prayers, I will not listen. Your hands are covered with blood.
16 ULB ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ, BSB BSB: Wash and cleanse yourselves. Remove your evil deeds from My sight. Stop doing evil!
17 ULB ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.>> BSB BSB: Learn to do right; seek justice and correct the oppressor. Defend the fatherless and plead the case of the widow.”
18 ULB <<ಬನ್ನಿರಿ ವಾದಿಸುವ>> ಎಂದು ಯೆಹೋವನು ಅನ್ನುತ್ತಾನೆ. <<ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು. BSB BSB: “Come now, let us reason together,” says the LORD. “Though your sins are like scarlet, they will be as white as snow; though they are as red as crimson, they will become like wool.
19 ULB ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ. BSB BSB: If you are willing and obedient, you will eat the best of the land.
20 ULB ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ>> ಈ ಮಾತನ್ನು ಯೆಹೋವನೇ ನುಡಿದಿದ್ದಾನೆ. BSB BSB: But if you resist and rebel, you will be devoured by the sword.” For the mouth of the LORD has spoken.
21 ULB ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ. BSB BSB: See how the faithful city has become a harlot! She once was full of justice; righteousness resided within her, but now only murderers!
22 ULB ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು. BSB BSB: Your silver has become dross; your fine wine is diluted with water.
23 ULB ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು. BSB BSB: Your rulers are rebels, friends of thieves. They all love bribes and chasing after rewards. They do not defend the fatherless, and the plea of the widow never comes before them.
24 ULB ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, <<ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು. BSB BSB: Therefore the Lord GOD of Hosts, the Mighty One of Israel, declares: “Ah, I will be relieved of My foes and avenge Myself on My enemies.
25 ULB ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು. BSB BSB: I will turn My hand against you; I will thoroughly purge your dross; I will remove all your impurities.
26 ULB ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.>> BSB BSB: I will restore your judges as at first, and your counselors as at the beginning. After that you will be called the City of Righteousness, the Faithful City.”
27 ULB ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು. BSB BSB: Zion will be redeemed with justice, her repentant ones with righteousness.
28 ULB ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು. BSB BSB: But rebels and sinners will together be shattered, and those who forsake the LORD will perish.
29 ULB <<ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ. BSB BSB: Surely you will be ashamed of the sacred oaks in which you have delighted; you will be embarrassed by the gardens that you have chosen.
30 ULB ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ. BSB BSB: For you will become like an oak whose leaves are withered, like a garden without water.
31 ULB ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.>> BSB BSB: The strong man will become tinder and his work will be a spark; both will burn together, with no one to quench the flames.
Select verses for actions: Enter goes to them and Escape comes back.