1 ULB ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು. BSB BSB: For the LORD will have compassion on Jacob; once again He will choose Israel and settle them in their own land. The foreigner will join them and unite with the house of Jacob.
2 ULB ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು. BSB BSB: The nations will escort Israel and bring it to its homeland. Then the house of Israel will possess the nations as menservants and maidservants in the LORD’s land. They will make captives of their captors and rule over their oppressors.
3 ULB ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ, BSB BSB: On the day that the LORD gives you rest from your pain and torment, and from the hard labor into which you were forced,
4 ULB ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: <<ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು! BSB BSB: you will sing this song of contempt against the king of Babylon: How the oppressor has ceased, and how his fury has ended!
5 ULB ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು. BSB BSB: The LORD has broken the staff of the wicked, the scepter of the rulers.
6 ULB ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು. BSB BSB: It struck the peoples in anger with unceasing blows; it subdued the nations in rage with relentless persecution.
7 ULB ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ. BSB BSB: All the earth is at peace and at rest; they break out in song.
8 ULB ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, <ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ> ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ. BSB BSB: Even the cypresses and cedars of Lebanon exult over you: “Since you have been laid low, no woodcutter comes against us.”
9 ULB ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ. BSB BSB: Sheol beneath is eager to meet you upon your arrival. It stirs the spirits of the dead to greet you—all the rulers of the earth. It makes all the kings of the nations rise from their thrones.
10 ULB ಅವರೆಲ್ಲರು ನಿನ್ನನ್ನು ಕುರಿತು, <ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?> ಎಂದು ಮಾತನಾಡಿಕೊಳ್ಳುವರು. BSB BSB: They will all respond to you, saying, “You too have become weak, as we are; you have become like us!”
11 ULB ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು. BSB BSB: Your pomp has been brought down to Sheol, along with the music of your harps. Maggots are your bed and worms your blanket.
12 ULB ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ! BSB BSB: How you have fallen from heaven, O day star, son of the dawn! You have been cut down to the ground, O destroyer of nations.
13 ULB ನೀನು ನಿನ್ನ ಮನಸ್ಸಿನಲ್ಲಿ, <ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು. BSB BSB: You said in your heart: “I will ascend to the heavens; I will raise my throne above the stars of God. I will sit on the mount of assembly, in the far reaches of the north.
14 ULB ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು> ಎಂದುಕೊಂಡೆಯಲ್ಲಾ! BSB BSB: I will ascend above the tops of the clouds; I will make myself like the Most High.”
15 ULB ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ. BSB BSB: But you will be brought down to Sheol, to the lowest depths of the Pit.
16 ULB ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, <ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ, BSB BSB: Those who see you will stare; they will ponder your fate: “Is this the man who shook the earth and made the kingdoms tremble,
17 ULB ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?> ಎಂದುಕೊಳ್ಳುವರು. BSB BSB: who turned the world into a desert and destroyed its cities, who refused to let the captives return to their homes?”
18 ULB ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ. BSB BSB: All the kings of the nations lie in state, each in his own tomb.
19 ULB ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ, BSB BSB: But you are cast out of your grave like a rejected branch, covered by those slain with the sword, and dumped into a rocky pit like a carcass trampled underfoot.
20 ULB ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.>> BSB BSB: You will not join them in burial, since you have destroyed your land and slaughtered your own people. The offspring of the wicked will never again be mentioned.
21 ULB ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ. BSB BSB: Prepare a place to slaughter his sons for the iniquities of their forefathers. They will never rise up to possess a land or cover the earth with their cities.
22 ULB <<ನಾನು ಅವರ ವಿರುದ್ಧವಾಗಿ ಏಳುತ್ತೇನೆ>> ಇದು ಸೇನಾಧೀಶ್ವರನಾದ ಯೆಹೋವನ ನುಡಿ. <<ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ. BSB BSB: “I will rise up against them,” declares the LORD of Hosts. “I will cut off from Babylon her name and her remnant, her offspring and her posterity,” declares the LORD.
23 ULB <<ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು>> ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ. BSB BSB: “I will make her a place for owls and for swamplands; I will sweep her away with the broom of destruction,” declares the LORD of Hosts.
24 ULB ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, <<ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು. BSB BSB: The LORD of Hosts has sworn: “Surely, as I have planned, so will it be; as I have purposed, so will it stand.
25 ULB ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು. BSB BSB: I will break Assyria in My land; I will trample him on My mountain. His yoke will be taken off My people, and his burden removed from their shoulders.”
26 ULB ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. BSB BSB: This is the plan devised for the whole earth, and this is the hand stretched out over all the nations.
27 ULB ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?>> ಎಂಬುದೇ. BSB BSB: The LORD of Hosts has purposed, and who can thwart Him? His hand is outstretched, so who can turn it back?
28 ULB ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು: BSB BSB: In the year that King Ahaz died, this burden was received:
29 ULB ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ. BSB BSB: Do not rejoice, all you Philistines, that the rod that struck you is broken. For a viper will spring from the root of the snake, and a flying serpent from its egg.
30 ULB ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು ಆ ಸರ್ಪವೇ ಕ್ಷಾಮವು ಕೊಲ್ಲುವುದು. BSB BSB: Then the firstborn of the poor will find pasture, and the needy will lie down in safety, but I will kill your root by famine, and your remnant will be slain.
31 ULB ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ. BSB BSB: Wail, O gate! Cry out, O city! Melt away, all you Philistines! For a cloud of smoke comes from the north, and there are no stragglers in its ranks.
32 ULB ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ. BSB BSB: What answer will be given to the envoys of that nation? “The LORD has founded Zion, where His afflicted people will find refuge.”
Select verses for actions: Enter goes to them and Escape comes back.