Isaiah 15 15 Isaiah Oracles about the nations Kannada Unlocked Literal Bible 1 ULB ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು. BSB BSB: This is the burden against Moab: Ar in Moab is ruined, destroyed in a night! Kir in Moab is devastated, destroyed in a night!
2 ULB ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು. BSB BSB: Dibon goes up to its temple to weep at its high places. Moab wails over Nebo, as well as over Medeba. Every head is shaved, every beard is cut off.
3 ULB ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ ಮತ್ತು ತಮ್ಮ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಗೋಳಾಡುತ್ತಾ ಇಳಿದು ಹೋಗಿದ್ದಾರೆ. BSB BSB: In its streets they wear sackcloth; on the rooftops and in the public squares they all wail, falling down weeping.
4 ULB ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ. BSB BSB: Heshbon and Elealeh cry out; their voices are heard as far as Jahaz. Therefore the soldiers of Moab cry out; their souls tremble within.
5 ULB ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ. BSB BSB: My heart cries out over Moab; her fugitives flee as far as Zoar, as far as Eglath-shelishiyah. With weeping they ascend the slope of Luhith; they lament their destruction on the road to Horonaim.
6 ULB ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ. BSB BSB: The waters of Nimrim are dried up, and the grass is withered; the vegetation is gone, and the greenery is no more.
7 ULB ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. BSB BSB: So they carry their wealth and belongings over the Brook of the Willows.
8 ULB ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ. BSB BSB: For their outcry echoes to the border of Moab. Their wailing reaches Eglaim; it is heard in Beer-elim.
9 ULB ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು. BSB BSB: The waters of Dimon are full of blood, but I will bring more upon Dimon—a lion upon the fugitives of Moab and upon the remnant of the land.
Select verses for actions: Enter goes to them and Escape comes back.
Chapter complete
You’ve read Isaiah 15
Make Opened yours A free account keeps your place, highlights and notes on every device. Add Plus to ask Study Help about Isaiah 15, and keep Opened free for readers who can’t pay.