1 ULB ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು. BSB BSB: O LORD, You are my God! I will exalt You; I will praise Your name. For You have worked wonders—plans formed long ago—in perfect faithfulness.
2 ULB ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ. BSB BSB: Indeed, You have made the city a heap of rubble, the fortified town a ruin. The fortress of strangers is a city no more; it will never be rebuilt.
3 ULB ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು. BSB BSB: Therefore, a strong people will honor You. The cities of ruthless nations will revere You.
4 ULB ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ. BSB BSB: For You have been a refuge for the poor, a stronghold for the needy in distress, a refuge from the storm, a shade from the heat. For the breath of the ruthless is like rain against a wall,
5 ULB ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು. BSB BSB: like heat in a dry land. You subdue the uproar of foreigners. As the shade of a cloud cools the heat, so the song of the ruthless is silenced.
6 ULB ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು. BSB BSB: On this mountain the LORD of Hosts will prepare a lavish banquet for all the peoples, a feast of aged wine, of choice meat, of finely aged wine.
7 ULB ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು. BSB BSB: On this mountain He will swallow up the shroud that enfolds all peoples, the sheet that covers all nations;
8 ULB ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ. BSB BSB: He will swallow up death forever. The Lord GOD will wipe away the tears from every face and remove the disgrace of His people from the whole earth. For the LORD has spoken.
9 ULB ಆ ದಿನದಲ್ಲಿ ಜನರು, <<ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು>> ಎಂದು ಹೇಳಿಕೊಳ್ಳುವರು. BSB BSB: And in that day it will be said, “Surely this is our God; we have waited for Him, and He has saved us. This is the LORD for whom we have waited. Let us rejoice and be glad in His salvation.”
10 ULB ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು. BSB BSB: For the hand of the LORD will rest on this mountain. But Moab will be trampled in his place as straw is trodden into the dung pile.
11 ULB ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು. BSB BSB: He will spread out his hands within it, as a swimmer spreads his arms to swim. His pride will be brought low, despite the skill of his hands.
12 ULB ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು. BSB BSB: The high-walled fortress will be brought down, cast to the ground, into the dust.
Select verses for actions: Enter goes to them and Escape comes back.