1 ULB ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು. BSB BSB: In that day the LORD will take His sharp, great, and mighty sword, and bring judgment on Leviathan the fleeing serpent—Leviathan the coiling serpent—and He will slay the dragon of the sea.
2 ULB ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ, BSB BSB: In that day: “Sing about a fruitful vineyard.
3 ULB <<ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ. BSB BSB: I, the LORD, am its keeper; I water it continually. I guard it night and day so no one can disturb it;
4 ULB ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು. BSB BSB: I am not angry. If only thorns and briers confronted Me, I would march and trample them, I would burn them to the ground.
5 ULB ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ. BSB BSB: Or let them lay claim to My protection; let them make peace with Me—yes, let them make peace with Me.”
6 ULB ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.>> BSB BSB: In the days to come, Jacob will take root. Israel will bud and blossom and fill the whole world with fruit.
7 ULB ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ? BSB BSB: Has the LORD struck Israel as He struck her oppressors? Was she killed like those who slayed her?
8 ULB ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ. BSB BSB: By warfare and exile You contended with her and removed her with a fierce wind, as on the day the east wind blows.
9 ULB ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ. BSB BSB: Therefore Jacob’s guilt will be atoned for, and the full fruit of the removal of his sin will be this: When he makes all the altar stones like crushed bits of chalk, no Asherah poles or incense altars will remain standing.
10 ULB ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು. BSB BSB: For the fortified city lies deserted—a homestead abandoned, a wilderness forsaken. There the calves graze, and there they lie down; they strip its branches bare.
11 ULB ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ. BSB BSB: When its limbs are dry, they are broken off. Women come and use them for kindling; for this is a people without understanding. Therefore their Maker has no compassion on them, and their Creator shows them no favor.
12 ULB ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು. BSB BSB: In that day the LORD will thresh from the flowing Euphrates to the Wadi of Egypt, and you, O Israelites, will be gathered one by one.
13 ULB ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು. BSB BSB: And in that day a great ram’s horn will sound, and those who were perishing in Assyria will come forth with those who were exiles in Egypt. And they will worship the LORD on the holy mountain in Jerusalem.
Select verses for actions: Enter goes to them and Escape comes back.