1 ULB ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ! BSB BSB: Woe to the majestic crown of Ephraim’s drunkards, to the fading flower of his glorious splendor, set on the summit above the fertile valley, the pride of those overcome by wine.
2 ULB ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು. BSB BSB: Behold, the Lord has one who is strong and mighty. Like a hailstorm or destructive tempest, like a driving rain or flooding downpour, he will smash that crown to the ground.
3 ULB ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು. BSB BSB: The majestic crown of Ephraim’s drunkards will be trampled underfoot.
4 ULB ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು. BSB BSB: The fading flower of his beautiful splendor, set on the summit above the fertile valley, will be like a ripe fig before the summer harvest: Whoever sees it will take it in his hand and swallow it.
5 ULB ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು. BSB BSB: On that day the LORD of Hosts will be a crown of glory, a diadem of splendor to the remnant of His people,
6 ULB ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು. BSB BSB: a spirit of justice to him who sits in judgment, and a strength to those who repel the onslaught at the gate.
7 ULB ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ. BSB BSB: These also stagger from wine and stumble from strong drink: Priests and prophets reel from strong drink and are befuddled by wine. They stumble because of strong drink, muddled in their visions and stumbling in their judgments.
8 ULB ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ. BSB BSB: For all their tables are covered with vomit; there is not a place without filth.
9 ULB ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ? BSB BSB: Whom is He trying to teach? To whom is He explaining His message? To infants just weaned from milk? To babies removed from the breast?
10 ULB ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ. BSB BSB: For they hear: “Order on order, order on order, line on line, line on line; a little here, a little there.”
11 ULB ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು. BSB BSB: Indeed, with mocking lips and foreign tongues, He will speak to this people
12 ULB ಆತನು ಮೊದಲು, <<ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ>> ಎಂದು ಹೇಳುವಾಗ ಇವರು ಕೇಳದೆ ಹೋದರು. BSB BSB: to whom He has said: “This is the place of rest, let the weary rest; this is the place of repose.” But they would not listen.
13 ULB ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು. BSB BSB: Then the word of the LORD to them will become: “Order on order, order on order, line on line, line on line; a little here, a little there,” so that they will go stumbling backward and will be injured, ensnared, and captured.
14 ULB ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ, BSB BSB: Therefore hear the word of the LORD, O scoffers who rule this people in Jerusalem.
15 ULB ನೀವು ನಿಮ್ಮೊಳಗೆ, <<ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ>> ಎಂದು ಅಂದುಕೊಂಡಿದ್ದೀರಿ. BSB BSB: For you said, “We have made a covenant with death; we have fashioned an agreement with Sheol. When the overwhelming scourge passes through it will not touch us, because we have made lies our refuge and falsehood our hiding place.”
16 ULB ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, <<ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು. BSB BSB: So this is what the Lord GOD says: “See, I lay a stone in Zion, a tested stone, a precious cornerstone, a sure foundation; the one who believes will never be shaken.
17 ULB ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು. BSB BSB: I will make justice the measuring line and righteousness the level. Hail will sweep away your refuge of lies, and water will flood your hiding place.
18 ULB ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು. BSB BSB: Your covenant with death will be dissolved, and your agreement with Sheol will not stand. When the overwhelming scourge passes through, you will be trampled by it.
19 ULB ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು. BSB BSB: As often as it passes through, it will carry you away; it will sweep through morning after morning, by day and by night.” The understanding of this message will bring sheer terror.
20 ULB ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.>> BSB BSB: Indeed, the bed is too short to stretch out on, and the blanket too small to wrap around you.
21 ULB ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು. BSB BSB: For the LORD will rise up as at Mount Perazim. He will rouse Himself as in the Valley of Gibeon, to do His work, His strange work, and to perform His task, His disturbing task.
22 ULB ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ. BSB BSB: So now, do not mock, or your shackles will become heavier. Indeed, I have heard from the Lord GOD of Hosts a decree of destruction against the whole land.
23 ULB ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ. BSB BSB: Listen and hear my voice. Pay attention and hear what I say.
24 ULB ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ? BSB BSB: Does the plowman plow for planting every day? Does he continuously loosen and harrow the soil?
25 ULB ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ? BSB BSB: When he has leveled its surface, does he not sow caraway and scatter cumin? He plants wheat in rows and barley in plots, and rye within its border.
26 ULB ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ. BSB BSB: For his God instructs and teaches him properly.
27 ULB ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ. BSB BSB: Surely caraway is not threshed with a sledge, and the wheel of a cart is not rolled over the cumin. But caraway is beaten out with a stick, and cumin with a rod.
28 ULB ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ. BSB BSB: Grain for bread must be ground, but it is not endlessly threshed. Though the wheels of the cart roll over it, the horses do not crush it.
29 ULB ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ. BSB BSB: This also comes from the LORD of Hosts, who is wonderful in counsel and excellent in wisdom.
Select verses for actions: Enter goes to them and Escape comes back.