1 ULB ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು. BSB BSB: On hearing this report, King Hezekiah tore his clothes, put on sackcloth, and entered the house of the LORD.
2 ULB ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, <<ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ>> ಎಂದು ಆಜ್ಞಾಪಿಸಿದನು. BSB BSB: And he sent Eliakim the palace administrator, Shebna the scribe, and the leading priests, all wearing sackcloth, to the prophet Isaiah son of Amoz
3 ULB ಆಗ ಅವರು ಯೆಶಾಯನಿಗೆ, <<ಹಿಜ್ಕೀಯನು ಹೀಗೆ ಹೇಳುತ್ತಾನೆ, <ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು. BSB BSB: to tell him, “This is what Hezekiah says: Today is a day of distress, rebuke, and disgrace; for children have come to the point of birth, but there is no strength to deliver them.
4 ULB ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು>>> ಎಂದು ಹೇಳಿದರು. BSB BSB: Perhaps the LORD your God will hear the words of the Rabshakeh, whom his master the king of Assyria has sent to defy the living God, and He will rebuke him for the words that the LORD your God has heard. Therefore lift up a prayer for the remnant that still survives.”
5 ULB ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ, BSB BSB: So the servants of King Hezekiah went to Isaiah,
6 ULB <<ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ. BSB BSB: who replied, “Tell your master that this is what the LORD says: ‘Do not be afraid of the words you have heard, with which the servants of the king of Assyria have blasphemed Me.
7 ULB ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ>> ಎಂಬುದಾಗಿ ಉತ್ತರಕೊಟ್ಟನು. BSB BSB: Behold, I will put a spirit in him so that he will hear a rumor and return to his own land, where I will cause him to fall by the sword.’”
8 ULB ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು. BSB BSB: When the Rabshakeh heard that the king of Assyria had left Lachish, he withdrew and found the king fighting against Libnah.
9 ULB ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ, BSB BSB: Now Sennacherib had been warned about Tirhakah king of Cush: “He has set out to fight against you.” On hearing this, Sennacherib sent messengers to Hezekiah, saying,
10 ULB <<ಹಿಜ್ಕೀಯನೇ, ನೀನು ನಂಬುವ ದೇವರು, <ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.> BSB BSB: “Give this message to Hezekiah king of Judah: ‘Do not let your God, in whom you trust, deceive you by saying that Jerusalem will not be delivered into the hand of the king of Assyria.
11 ULB ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ? BSB BSB: Surely you have heard what the kings of Assyria have done to all the other countries, devoting them to destruction. Will you then be spared?
12 ULB ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ? BSB BSB: Did the gods of the nations destroyed by my fathers rescue those nations—the gods of Gozan, Haran, and Rezeph, and of the people of Eden in Telassar?
13 ULB ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ>> ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು. BSB BSB: Where are the kings of Hamath, Arpad, Sepharvaim, Hena, and Ivvah?’”
14 ULB ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು. BSB BSB: So Hezekiah received the letter from the messengers, read it, and went up to the house of the LORD and spread it out before the LORD.
15 ULB ಹಿಜ್ಕೀಯನು ಯೆಹೋವನನ್ನು ಕುರಿತು BSB BSB: And Hezekiah prayed to the LORD:
16 ULB <<ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ. BSB BSB: “O LORD of Hosts, God of Israel, enthroned above the cherubim, You alone are God over all the kingdoms of the earth. You made the heavens and the earth.
17 ULB ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ. BSB BSB: Incline Your ear, O LORD, and hear; open Your eyes, O LORD, and see. Listen to all the words that Sennacherib has sent to defy the living God.
18 ULB ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ. BSB BSB: Truly, O LORD, the kings of Assyria have laid waste all these countries and their lands.
19 ULB ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು. BSB BSB: They have cast their gods into the fire and destroyed them, for they were not gods, but only wood and stone—the work of human hands.
20 ULB ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.>> BSB BSB: And now, O LORD our God, save us from his hand, so that all the kingdoms of the earth may know that You alone, O LORD, are God.”
21 ULB ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, <<ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, <ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.> BSB BSB: Then Isaiah son of Amoz sent a message to Hezekiah: “This is what the LORD, the God of Israel, says: Because you have prayed to Me concerning Sennacherib king of Assyria,
22 ULB ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, <ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ. BSB BSB: this is the word that the LORD has spoken against him: ‘The Virgin Daughter of Zion despises you and mocks you; the Daughter of Jerusalem shakes her head behind you.
23 ULB ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!> BSB BSB: Whom have you taunted and blasphemed? Against whom have you raised your voice and lifted your eyes in pride? Against the Holy One of Israel!
24 ULB ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, <ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ. BSB BSB: Through your servants you have taunted the Lord, and you have said: “With my many chariots I have ascended to the heights of the mountains, to the remote peaks of Lebanon. I have cut down its tallest cedars, the finest of its cypresses. I have reached its farthest heights, the densest of its forests.
25 ULB ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ> ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ. BSB BSB: I have dug wells and drunk foreign waters. With the soles of my feet I have dried up all the streams of Egypt.”
26 ULB ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು. BSB BSB: Have you not heard? Long ago I ordained it; in days of old I planned it. Now I have brought it to pass, that you should crush fortified cities into piles of rubble.
27 ULB ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು. BSB BSB: Therefore their inhabitants, devoid of power, are dismayed and ashamed. They are like plants in the field, tender green shoots, grass on the rooftops, scorched before it is grown.
28 ULB ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು. BSB BSB: But I know your sitting down, your going out and coming in, and your raging against Me.
29 ULB ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು>> ಎಂಬುದಾಗಿ ಹೇಳಿದ್ದಾನೆ. BSB BSB: Because your rage and arrogance against Me have reached My ears, I will put My hook in your nose and My bit in your mouth; I will send you back the way you came.’
30 ULB ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು. BSB BSB: And this will be a sign to you, O Hezekiah: This year you will eat what grows on its own, and in the second year what springs from the same. But in the third year you will sow and reap; you will plant vineyards and eat their fruit.
31 ULB ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು. BSB BSB: And the surviving remnant of the house of Judah will again take root below and bear fruit above.
32 ULB ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು. BSB BSB: For a remnant will go forth from Jerusalem, and survivors from Mount Zion. The zeal of the LORD of Hosts will accomplish this.
33 ULB ಆತನು ಅಶ್ಶೂರದ ಅರಸನನ್ನು ಕುರಿತು, <<ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ. BSB BSB: So this is what the LORD says about the king of Assyria: ‘He will not enter this city or shoot an arrow into it. He will not come before it with a shield or build up a siege ramp against it.
34 ULB ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ. BSB BSB: He will go back the way he came, and he will not enter this city,’ declares the LORD.
35 ULB ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು>> ಎಂದು ಹೇಳುತ್ತಾನೆ ಎಂಬುದೇ. BSB BSB: ‘I will defend this city and save it for My own sake and for the sake of My servant David.’”
36 ULB ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು. BSB BSB: Then the angel of the LORD went out and struck down 185,000 men in the camp of the Assyrians. When the people got up the next morning, there were all the dead bodies!
37 ULB ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು. BSB BSB: So Sennacherib king of Assyria broke camp and withdrew. He returned to Nineveh and stayed there.
38 ULB ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು. BSB BSB: One day, while he was worshiping in the temple of his god Nisroch, his sons Adrammelech and Sharezer put him to the sword and escaped to the land of Ararat. And his son Esar-haddon reigned in his place.
Select verses for actions: Enter goes to them and Escape comes back.