Isaiah 4 4 Isaiah Judgment and hope for Judah Kannada Unlocked Literal Bible 1 ULB ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, <<ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು>> ಎಂದು ಕೇಳಿಕೊಳ್ಳುವರು. BSB BSB: In that day seven women will take hold of one man and say, “We will eat our own bread and provide our own clothes. Just let us be called by your name. Take away our disgrace!”
2 ULB ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು. BSB BSB: On that day the Branch of the LORD will be beautiful and glorious, and the fruit of the land will be the pride and glory of Israel’s survivors.
3 ULB ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು. BSB BSB: Whoever remains in Zion and whoever is left in Jerusalem will be called holy—all in Jerusalem who are recorded among the living—
4 ULB ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು. BSB BSB: when the Lord has washed away the filth of the daughters of Zion and cleansed the bloodstains from the heart of Jerusalem by a spirit of judgment and a spirit of fire.
5 ULB ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು. BSB BSB: Then the LORD will create over all of Mount Zion and over her assemblies a cloud of smoke by day and a glowing flame of fire by night. For over all the glory there will be a canopy,
6 ULB ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು. BSB BSB: a shelter to give shade from the heat by day, and a refuge and hiding place from the storm and the rain.
Select verses for actions: Enter goes to them and Escape comes back.
Chapter complete
You’ve read Isaiah 4
Make Opened yours A free account keeps your place, highlights and notes on every device. Add Plus to ask Study Help about Isaiah 4, and keep Opened free for readers who can’t pay.