1 ULB ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು. BSB BSB: Bel crouches; Nebo cowers. Their idols weigh down beasts and cattle. The images you carry are burdensome, a load to the weary animal.
2 ULB ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು. BSB BSB: The gods cower; they crouch together, unable to relieve the burden; but they themselves go into captivity.
3 ULB ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ. BSB BSB: “Listen to Me, O house of Jacob, all the remnant of the house of Israel, who have been sustained from the womb, carried along since birth.
4 ULB ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು. BSB BSB: Even to your old age, I will be the same, and I will bear you up when you turn gray. I have made you, and I will carry you; I will sustain you and deliver you.
5 ULB ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ? BSB BSB: To whom will you liken Me or count Me equal? To whom will you compare Me, that we should be alike?
6 ULB ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು. BSB BSB: They pour out their bags of gold and weigh out silver on scales; they hire a goldsmith to fashion it into a god, so they can bow down and worship.
7 ULB ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು. BSB BSB: They lift it to their shoulder and carry it along; they set it in its place, and there it stands, not budging from that spot. They cry out to it, but it does not answer; it saves no one from his troubles.
8 ULB <<ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ! BSB BSB: Remember this and be brave; take it to heart, you transgressors!
9 ULB ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ. BSB BSB: Remember what happened long ago, for I am God, and there is no other; I am God, and there is none like Me.
10 ULB ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. <ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು> ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ. BSB BSB: I declare the end from the beginning, and from ancient times what is still to come. I say, ‘My purpose will stand, and all My good pleasure I will accomplish.’
11 ULB ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು. BSB BSB: I summon a bird of prey from the east, a man for My purpose from a far-off land. Truly I have spoken, and truly I will bring it to pass. I have planned it, and I will surely do it.
12 ULB ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ. BSB BSB: Listen to Me, you stubborn people, far removed from righteousness:
13 ULB ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.>> BSB BSB: I am bringing My righteousness near; it is not far away, and My salvation will not be delayed. I will grant salvation to Zion and adorn Israel with My splendor.
Select verses for actions: Enter goes to them and Escape comes back.