1 ULB ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. BSB BSB: Listen to Me, O islands; pay attention, O distant peoples: The LORD called Me from the womb; from the body of My mother He named Me.
2 ULB ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ. BSB BSB: He made My mouth like a sharp sword; He hid Me in the shadow of His hand. He made Me like a polished arrow; He hid Me in His quiver.
4 ULB ಅದಕ್ಕೆ ನಾನು, <<ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು>> ಎಂದು ಅಂದುಕೊಂಡೆನು. BSB BSB: But I said, “I have labored in vain, I have spent My strength in futility and vanity; yet My vindication is with the LORD, and My reward is with My God.”
7 ULB ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, <<ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.>> BSB BSB: Thus says the LORD, the Redeemer and Holy One of Israel, to Him who was despised and abhorred by the nation, to the Servant of rulers: “Kings will see You and rise, and princes will bow down, because of the LORD, who is faithful, the Holy One of Israel, who has chosen You.”
8 ULB ಇದೇ ಯೆಹೋವನ ನುಡಿ, <<ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ. BSB BSB: This is what the LORD says: “In the time of favor I will answer You, and in the day of salvation I will help You; I will keep You and appoint You to be a covenant for the people, to restore the land, to apportion its desolate inheritances,
9 ULB ನೀನು ಬಂದಿಸಲ್ಪಟ್ಟವರಿಗೆ <ಹೊರಟುಹೋಗಿರಿ> ಎಂದು, ಕತ್ತಲಲ್ಲಿರುವವರಿಗೆ, <ಬೆಳಕಿಗೆ ಹೊರಡಿರಿ> ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು. BSB BSB: to say to the prisoners, ‘Come out,’ and to those in darkness, ‘Show yourselves.’ They will feed along the pathways, and find pasture on every barren hill.
10 ULB ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು. BSB BSB: They will not hunger or thirst, nor will scorching heat or sun beat down on them. For He who has compassion on them will guide them and lead them beside springs of water.
11 ULB ನನ್ನ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು. BSB BSB: I will turn all My mountains into roads, and My highways will be raised up.
12 ULB ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ. BSB BSB: Behold, they will come from far away, from the north and from the west, and from the land of Aswan.”
13 ULB ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.>> BSB BSB: Shout for joy, O heavens; rejoice, O earth; break forth in song, O mountains! For the LORD has comforted His people, and He will have compassion on His afflicted ones.
14 ULB ಚೀಯೋನ್ ನಗರಿಯಾದರೋ, <<ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ>> ಎಂದುಕೊಂಡಳು. BSB BSB: But Zion said, “The LORD has forsaken me; the Lord has forgotten me!”
15 ULB ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ. BSB BSB: “Can a woman forget her nursing child, or lack compassion for the son of her womb? Even if she could forget, I will not forget you!
16 ULB ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. BSB BSB: Behold, I have inscribed you on the palms of My hands; your walls are ever before Me.
17 ULB ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ. BSB BSB: Your builders hasten back; your destroyers and wreckers depart from you.
18 ULB ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, <<ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ. BSB BSB: Lift up your eyes and look around. They all gather together; they come to you. As surely as I live,” declares the LORD, “you will wear them all as jewelry and put them on like a bride.
19 ULB ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ. BSB BSB: For your ruined and desolate places and your ravaged land will now indeed be too small for your people, and those who devoured you will be far away.
20 ULB ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು, <ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ> ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು. BSB BSB: Yet the children of your bereavement will say in your hearing, ‘This place is too small for us; make room for us to live here.’
21 ULB ಆಗ ನೀನು ನಿನ್ನ ಮನದೊಳಗೆ, <ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?>>> ಎಂದುಕೊಳ್ಳುವಿ. BSB BSB: Then you will say in your heart, ‘Who has begotten these for me? I was bereaved and barren; I was exiled and rejected. So who has reared them? Look, I was left all alone, so where did they come from?’”
22 ULB ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, <<ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು. BSB BSB: This is what the Lord GOD says: “Behold, I will lift up My hand to the nations, and raise My banner to the peoples. They will bring your sons in their arms and carry your daughters on their shoulders.
23 ULB ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ>> ಎಂದು ನಿನಗೆ ಗೊತ್ತಾಗುವುದು. BSB BSB: Kings will be your foster fathers, and their queens your nursing mothers. They will bow to you facedown and lick the dust at your feet. Then you will know that I am the LORD; those who hope in Me will never be put to shame.”
24 ULB ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ? BSB BSB: Can the plunder be snatched from the mighty, or the captives of a tyrant be delivered?
25 ULB ಯೆಹೋವನು ಹೀಗೆನ್ನುತ್ತಾನೆ, <<ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು. BSB BSB: Indeed, this is what the LORD says: “Even the captives of the mighty will be taken away, and the plunder of the tyrant will be retrieved; I will contend with those who contend with you, and I will save your children.
26 ULB ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು>> ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು. BSB BSB: I will make your oppressors eat their own flesh; they will be drunk on their own blood, as with wine. Then all mankind will know that I, the LORD, am your Savior and your Redeemer, the Mighty One of Jacob.”
Select verses for actions: Enter goes to them and Escape comes back.